Homeಕರ್ನಾಟಕಕಾಂಗ್ರೆಸ್‌ ದಿವಾಳಿಯಾಗಲು ದಿನೇಶ್ ಗುಂಡೂರಾವ್‌ ಕಾರಣ: ಎಲ್ಲಾ ಮಾಫಿಯಾ ಜೊತೆಗೂ ಇವರ ಕನೆಕ್ಷನ್‌ ಇದೆ- ಸುಧಾಕರ್...

ಕಾಂಗ್ರೆಸ್‌ ದಿವಾಳಿಯಾಗಲು ದಿನೇಶ್ ಗುಂಡೂರಾವ್‌ ಕಾರಣ: ಎಲ್ಲಾ ಮಾಫಿಯಾ ಜೊತೆಗೂ ಇವರ ಕನೆಕ್ಷನ್‌ ಇದೆ- ಸುಧಾಕರ್ ಆರೋಪ

- Advertisement -
- Advertisement -

ಕಾಂಗ್ರೆಸ್‌ ದಿವಾಳಿಯಾಗಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ ಕಾರಣರಾಗಿದ್ದಾರೆ ಅಲ್ಲದೇ ಎಲ್ಲಾ ಮಾಫಿಯಾ ಜೊತೆಗೂ ಇವರ ಕನೆಕ್ಷನ್‌ ಇದೆ ಎಂದು ಅನರ್ಹ ಶಾಸಕ, ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ತಿ ಡಿ.ಸುಧಾಕರ್ ಗಂಭೀರ ಆರೋಪ ಮಾಡಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಅಜಾದ್‌ನಗರದಲ್ಲಿ ಪ್ರಚಾರ ನಡೆಸಿದ ನಂತರ ಮಾತನಾಡಿದ ಅವರು ದಿನೇಶ್‌ ಗುಂಡೂರಾವ್‌ ನಾಯಕತ್ವ ಬಂದ ನಂತರ ಕಾಂಗ್ರೆಸ್‌ ನೆಲಕಚ್ಚಿದೆ. ಲೋಕಸಭೆಯಲ್ಲಿ 28ರಲ್ಲಿ 1 ಸ್ಥಾನ ಮಾತ್ರ ಗೆಲ್ಲಲು ಕಾಂಗ್ರೆಸ್‌ಗೆ ಸಾಧ್ಯವಾಗಿದೆ. ನೈತಿಕತೆ ಇದ್ದರೆ ಆಗಲೇ ಅವರು ರಾಜೀನಾಮೆ ಕೊಡಬೇಕಿತ್ತು ಎಂದು ಟೀಕಿಸಿದ್ದಾರೆ.

ಅವರಿಗೆ ನೈತಿಕತೆಯೂ ಇಲ್ಲ, ರಾಜಕೀಯ ಸಿದ್ದಾಂತವೂ ಇಲ್ಲ. ಕೆಪಿಸಿಸಿ ಅಧ್ಯಕ್ಷರಾಗಿದ್ದುಕೊಂಡು ಶಾಸಕರ ಬಗ್ಗೆ ಕಾಳಜಿಯಿಲ್ಲ. ನಮಗೆ ಅನ್ಯಾಯವಾದಾಗ ಒಂದು ದಿನವೂ ಅವರು ನಮ್ಮ ಪರ ಮಾತಾಡಿಲ್ಲ, ಈಗ ನಮ್ಮ ಮಾತಾಡುವ ಯೋಗ್ಯತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.

ಅವರು ನನಗೆ ಸರ್ಟಿಫಿಕೆಟ್‌ ಕೊಡುವುದು ಬೇಡ. ಅವರ ಎಲ್ಲಾ ಅಕ್ರಮಗಳು ನನಗೆ ಗೊತ್ತಿವೆ. ಗಾಂಧಿನಗರದಲ್ಲಿ ಹಫ್ತಾ ವಸೂಲಿ, ಡ್ಯಾನ್ಸ್‌ ಬಾರ್‌‌ಗಳ ಜೊತೆ ಸಂಬಂಧ, ಎಲ್ಲಾ ಮಾಫಿಯಾ ಜೊತೆಗೂ ಇವರ ಕನೆಕ್ಷನ್‌ ಇದೆ. ಯಾರಾದರೂ ಭ್ರಷ್ಟಾಚಾರಿಗಳು ಬೆಂಗಳೂರಿನಲ್ಲಿದ್ದರೆ ನಂಬರ್‌ 1 ಸ್ಥಾನ ಇವರಿಗೆ ಕೊಡಬೇಕಾಗುತ್ತದೆ ಅವರು ಆರೋಪಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬಿಜೆಪಿ ಗೆದ್ದರೆ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್‌ ಕಾಲೇಜು, ಆಸ್ಪತ್ರೆ ಎಲ್ಲಾ ಬರಲಿವೆ ಎಂದು ಅವರು ಜನರಿಗೆ ಭರವಸೆ ನೀಡಿದ್ದಾರೆ. ಚಿತ್ರನಟಿ ತಾರ, ಸಂಸದ ಪಿ.ಸಿ ಮೋಹನ್‌ ಅವರ ಜೊತೆಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...