Homeಕರ್ನಾಟಕಅಂಬೇಡ್ಕರ್ ರವರ ಪ್ರತಿಮೆಗಳಿಗಿಂತ ಅವರ ಆದರ್ಶಗಳನ್ನು ಎದೆಗಿಳಿಸಿಕೊಳ್ಳಬೇಕಾಗಿದೆ- ಡಿ.ಉಮಾಪತಿ

ಅಂಬೇಡ್ಕರ್ ರವರ ಪ್ರತಿಮೆಗಳಿಗಿಂತ ಅವರ ಆದರ್ಶಗಳನ್ನು ಎದೆಗಿಳಿಸಿಕೊಳ್ಳಬೇಕಾಗಿದೆ- ಡಿ.ಉಮಾಪತಿ

- Advertisement -
- Advertisement -

ಕರ್ನಾಟಕದ ಪ್ರಮುಖ ಚಿಂತಕರು ಮತ್ತು ಪತ್ರಕರ್ತರಾದ ಡಿ.ಉಮಾಪತಿಯವರಿಗೆ ಕರ್ನಾಟಕ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘವು ‘ಬಿ.ರಾಚಯ್ಯ ರಾಜ್ಯ ಪ್ರಶಸ್ತಿ’ ಯನ್ನು ನೀಡಿ ಇಂದು ಗೌರವಿಸಿತು. ಚಿತ್ರದುರ್ಗದ ಶ್ರೀ ಮುರುಘಾಮಠದ ಅಲ್ಲಮ ಪ್ರಭು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ಡಿ.ಉಮಾಪತಿಯವರು ಆಡಿದ ಮಾತುಗಳನ್ನು ಈ ಸಂದರ್ಭದಲ್ಲಿ ಪ್ರಕಟಿಸಲಾಗುತ್ತಿದೆ. 

ಅಂಬೇಡ್ಕರ್ ಬಹುತೇಕ ರಾಜಕೀಯ ರೂಪವಾಗಿ ಸಿಕ್ಕಿದ್ದಾರೆ ವಿನಃ ಅವರ ಆಶಯಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಆಳುವವರು ಮನಸ್ಸು ಮಾಡುತ್ತಿಲ್ಲ. ಉಣ್ಣದ ವಿಗ್ರಹಕ್ಕೆ ಭೋಜನವಿಡುವ ಡಾಂಭಿಕತನ ಇಂದಿನ ಎಲ್ಲಾ ರಾಜಕೀಯ ಪಕ್ಷಗಳಲ್ಲಿದೆ. ದಲಿತರನ್ನು ಸಮಾನವಾಗಿ ನಡೆಸಿಕೊಳ್ಳಬೇಕೆಂಬ ಅಂಬೇಡ್ಕರ್ ಅವರ ಮಾತಿಗೆ ರಾಜಕೀಯ ಪಕ್ಷಗಳು ಕಿವುಡಾಗಿವೆ. ಮನುಸ್ಮೃತಿಯನ್ನು ಪಾಲಿಸುವವರೆ ಇಂದು ದೇಶವನ್ನು ಆಳುತ್ತಿದ್ದಾರೆ.

ಅಂಬೇಡ್ಕರ್ ರವರು ಸರ್ವಶ್ರೇಷ್ಠರು ಎಂದು ಸಂಘಪರಿವಾರದ ಮುಖವಾಣಿ ಪತ್ರಿಕೆಯಲ್ಲಿ ಸಂಪಾದಕೀಯದಲ್ಲಿ ಬರೆದವರು, ಅವರು ಬರೆದ ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಹೀಗೆ ಎರಡೂ ಬಗೆಯ ಪಾತ್ರಗಳನ್ನು ಇಂದು ಮಾಡಲಾಗುತ್ತಿದೆ, ದಲಿತರ ಮತಗಳನ್ನು ಸೆಳೆಯಲು ಪಕ್ಷಗಳು ಅಂಬೇಡ್ಕರ್ ಅವರನ್ನು ದೋಚುತ್ತಿದ್ದು, ನಿಜವಾದ ಅಂಬೇಡ್ಕರ್ ಅವರನ್ನು ಕೊಲ್ಲುವ ಕೆಲಸ ಮಾಡುತ್ತಿದ್ದಾರೆ.

ಅಂಬೇಡ್ಕರ್ ಅವರ ಹೆಸರಿನಲ್ಲಿ ದೊಡ್ಡ ದೊಡ್ಡ ವಿಚಾರಗೋಷ್ಟಿ, ಮಹಲುಗಳನ್ನು‌ ಕಟ್ಟುಲಾಗುತ್ತಿದೆ, ಆದರೆ ಅದೇ ಸಂದರ್ಭದಲ್ಲಿ ಅವರು ಕೊಟ್ಟ ಸಂವಿಧಾನವನ್ನು ಕಾಲ ಕೆಳಗೆ ತುಳಿಯುವ ಕೆಲಸವನ್ನೂ ಇಂದು ಮಾಡಲಾಗುತ್ತಿದೆ. ಇವತ್ತು ಬೇಟೆಯ ನಾಯಿಯ ಜೊತೆಗೂ ನಾವಿದ್ದೇವೆ, ಮೊಲದ ಹಿತ ಕಾಯಲು ಅದರ ಜೊತೆಗೂ ನಾವಿದ್ದೇವೆ ಎಂಬ ಆಷಾಡಭೂತಿತನವನ್ನು ನಮ್ಮನ್ನಾಳುವವರಲ್ಲಿ ಕಾಣುತ್ತಿದ್ದೆವೆ. ಇದು ಅಂಬೇಡ್ಕರ್ ಅವರಿಗೆ ಮಾಡಿದ ಅವಮಾನ. ವಂಚಿತರನ್ನು ಮೇಲೆತ್ತುವ ಅಂಬೇಡ್ಕರ್ ಅವರ ಚಿಂತನೆಗಳು ಇನ್ನು ಈಡೇರಿಲ್ಲ. ಎಲ್ಲೆಡೆ ಅಂಬೇಡ್ಕರ್ ಅವರ ಪ್ರತಿಮೆ, ಭವನಗಳ‌ ನಿರ್ಮಾಣಕ್ಕಿಂತ ಅವರ ಆದರ್ಶಗಳನ್ನು ಎದೆಗಿಳಿಸಿಕೊಂಡು ಮುನ್ನಡೆಯಬೇಕಾದ ಸಂದರ್ಭ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...