Homeಮುಖಪುಟಏನಾದರು ಆಗು‌ ಮೊದಲು ಮಾನವನಾಗು : ಸೂಲಿಬೆಲೆಗೆ ಡಾಲಿ ಧನಂಜಯ್‌ ಪಾಠ..

ಏನಾದರು ಆಗು‌ ಮೊದಲು ಮಾನವನಾಗು : ಸೂಲಿಬೆಲೆಗೆ ಡಾಲಿ ಧನಂಜಯ್‌ ಪಾಠ..

- Advertisement -
- Advertisement -

ಕೊರೊನ ವಿಚಾರವಾಗಿ ಧರ್ಮವನ್ನ ಎಳೆ ತಂದು ಟ್ವೀಟ್ ಮಾಡಿದ ಚಕ್ರವರ್ತಿ ಸೂಲಿಬೆಲೆಗೆ ಚಿತ್ರನಟ ಡಾಲಿ ಧನಂಜಯ್‌ “ಏನಾದರು ಆಗು‌ ಮೊದಲು ಮಾನವನಾಗು” ಎಂಬ ಕುವೆಂಪು ಅವರ ಸಾಲಿನ ಮೂಲಕ ಪಾಠ ಮಾಡಿರುವ ಘಟನೆ ಜರುಗಿದೆ.

ಇಂದು ಬೆಳಿಗ್ಗೆ ಸೂಲಿಬೆಲೆ “ಜೀಸಸ್‌ ಎಲ್ಲರನ್ನು ಪ್ರೀತಿಸುತ್ತಾರೆ” ಎಂದು ಬರೆದು ಇಟಲಿಯಲ್ಲಿ ಕೊರೊನಾ ವೈರಸ್‌ ದಾಳಿ: 80 ವರ್ಷ ಮೇಲ್ಪಟ್ಟವರಿಗೆ ತೀವ್ರ ನಿಗಾಘಟಕ ಇಲ್ಲ” ಎನ್ನುವ ಸುದ್ದಿಯ ಕೊಂಡಿಯನ್ನು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು.

ಜೀಸಸ್‌ ಎಲ್ಲರನ್ನು ಪ್ರೀತಿಸಿದರೆ ಈ 80 ವರ್ಷ ಮೇಲ್ಪಟ್ಟವರಿಗೆ ತೀವ್ರನಿಗಾಘಟಕ ಏಕಿಲ್ಲ ಎಂದು ಟ್ರೋಲ್‌ ಮಾಡುವುದು ಅವರ ಉದ್ದೇಶವಾಗಿತ್ತು. ಆ ಮೂಲಕ ಕ್ರಿಶ್ಚಿಯನ್‌ ಧರ್ಮವನ್ನು ತಳುಕು ಹಾಕಲು ಪ್ರಯತ್ನಿಸಿದ್ದರು.

ಇದಕ್ಕೆ ಚಿತ್ರನಟ ಡಾಲಿ ಧನಂಜಯ್‌ ಕುವೆಂಪುರವರ ವಿಶ್ವಮಾನವ ತತ್ವದ ಪಾಠ ಮಾಡಿದ್ದಾರೆ. ಸೂಲಿಬೆಲೆಯ ಟ್ವೀಟ್‌ಗೆ “ಏನಾದರೂ ಆಗು ಮೊದಲು ಮಾನವನಾಗು” ಎಂದು ಬರೆದು ರೀಟ್ವೀಟ್‌ ಮಾಡಿದ್ದಾರೆ.

ಕರ್ನಾಟಕದ ಮಹತ್ವದ ಕವಿ, ಚಿಂತಕ, ಲೇಖಕ ರಾಷ್ಟ್ರಕವಿ ಕುವೆಂಪುರವರ ಹೇಳಿಕೆಯನ್ನು ಬರೆಯುವ ಮೂಲಕ ಮಾನವ ಧರ್ಮಕ್ಕಿಂತ ಮಿಗಲಾದ ಧರ್ಮವಿಲ್ಲ ಎಂದು ಡಾಲಿ ಧನಂಜಯ್‌ ಪ್ರತಿಕ್ರಿಯಿಸಿದ್ದಾರೆ. ಇತರ ಧರ್ಮಗಳನ್ನು ತೆಗಳುವುದನ್ನು ಬಿಟ್ಟು ಮಾನವರಾಗೋಣ ಎಂದು ಸಾರಿದ್ದಾರೆ.

ಈ ಮೊದಲು ಸಹ ದೆಹಲಿ ಗಲಭೆಯ ಸಂದರ್ಭದಲ್ಲಿ ಶಾಂತಿ ಕಾಪಾಡುವಂತೆ, ಗಲಭೆ ನಿಲ್ಲಿಸುವಂತೆ ಡಾಲಿ ಧನಂಜಯ್‌ ಮನವಿ ಮಾಡಿ ಗಮನ ಸೆಳೆದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...