Homeಮುಖಪುಟ'ದೈನಿಕ್ ಜಾಗರಣ್ ದಲ್ಲಾಳಿ' ಟ್ವಿಟರ್ ಟ್ರೆಂಡ್ - ದೇಶಾದ್ಯಂತ ಪತ್ರಿಕೆ ಸುಟ್ಟು ಆಕ್ರೋಶ

‘ದೈನಿಕ್ ಜಾಗರಣ್ ದಲ್ಲಾಳಿ’ ಟ್ವಿಟರ್ ಟ್ರೆಂಡ್ – ದೇಶಾದ್ಯಂತ ಪತ್ರಿಕೆ ಸುಟ್ಟು ಆಕ್ರೋಶ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಕಾರು ಹರಿಸಿ ನಾಲ್ವರು ರೈತರನ್ನು ಕೊಂದ ಘಟನೆಯನ್ನು ತಪ್ಪಾಗಿ ಚಿತ್ರಿಸಿ ವರದಿ ಮಾಡಿದ ಹಿಂದಿ ದಿನಪತ್ರಿಕೆ ‘ದೈನಿಕ್ ಜಾಗರಣ್’ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ‘ದೈನಿಕ್ ಜಾಗರಣ್ ದಲ್ಲಾಳಿ’ ಎಂಬ ಹ್ಯಾಷ್‌ಟ್ಯಾಗ್ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್ ಆಗಿದ್ದು, ದೇಶಾದ್ಯಂತ ಯುವಜನರು ದೈನಿಕ್ ಜಾಗರಣ್ ಪತ್ರಿಕೆ ಸುಟ್ಟು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವರ ಬೆಂಗಾವಲು, ಅವರ ಮಗ, ಚಿಕ್ಕಪ್ಪ ಮತ್ತು ಇತರ ಗೂಂಡಾಗಳು ವಾಹನ ಹರಿಸಿದ್ದಾರೆ. ಇದರಿಂದ ನಾಲ್ವರು ರೈತರು ಸಾವನ್ನಪ್ಪಿದ್ದಾರೆ. ನಂತರದ ಹಿಂಸಾಚಾರದಲ್ಲಿ ನಾಲ್ವರು ಬಿಜೆಪಿ ಕಾರ್ಯಕರ್ತರು ಕೊಲೆಯಾಗಿದ್ದಾರೆ ಎನ್ನಲಾಗಿದೆ. ಈ ಘಟನೆಯನ್ನು ದೈನಿಕ್ ಜಾಗರಣ್ ತನ್ನ ಮುಖಪುಟದಲ್ಲಿ ‘ಲಖಿಂಪುರದಲ್ಲಿ ರೈತರ ಉಪದ್ರವ-8 ಸಾವು’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿ ಆಕ್ರೋಶಕ್ಕೆ ತುತ್ತಾಗಿದೆ.

ಇಂದಿನ ಹಲವು ಪತ್ರಿಕೆಗಳು ಪ್ರಿಂಟ್ ಆದ ನಂತರ ಮಾರಾಟವಾಗುತ್ತವೆ. ಆದರೆ ಈ ದೈನಿಕ್ ಜಾಗರಣ್ ಪತ್ರಿಕೆ ಮಾರಾಟವಾದ ನಂತರ ಪ್ರಿಂಟ್ ಆಗಿದೆ ಎಂದು ಟ್ವಿಟರ್ ಬಳಕೆದಾರರೊಬ್ಬರು ಕಿಡಿಕಾರಿದ್ದಾರೆ.

ಕೆಲವು ಟ್ವೀಟ್‌ಗಳು ಇಲ್ಲಿವೆ


ಇದನ್ನೂ ಓದಿ: ನಾಲ್ವರು ರೈತರ ಹತ್ಯೆ: ಕೇಂದ್ರ ಸಚಿವ ಮತ್ತು ಮಗನ ಮೇಲೆ ಕೊಲೆ ಪ್ರಕರಣ ದಾಖಲು

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...