Homeಕರ್ನಾಟಕದಕ್ಷಿಣ ಕನ್ನಡ: ಪೊಲೀಸ್‌ಗಿರಿ ನಡೆಸಿದ ಐವರು ಬಿಜೆಪಿ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರ ಬಂಧನ

ದಕ್ಷಿಣ ಕನ್ನಡ: ಪೊಲೀಸ್‌ಗಿರಿ ನಡೆಸಿದ ಐವರು ಬಿಜೆಪಿ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರ ಬಂಧನ

ವಿದ್ಯಾರ್ಥಿಗಳ ಗುಂಪೊಂದು ಜಿಲ್ಲೆಯ ಕಾರಿಂಜಕ್ಕೆ ತೆರಳಿದ್ದಾಗ ಆರೋಪಿಗಳು ಅವರನ್ನು ತಡೆದು ಕಿರುಕುಳ ನೀಡಿದ್ದರು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗಷ್ಟೆ ಬಿಜೆಪಿ ಬೆಂಬಲಿತ ಸಂಘಪರಿವಾರದ ಗುಂಪು, ವಿಭಿನ್ನ ಧರ್ಮಗಳಿಗೆ ಸೇರಿದ ಯುವಕ-ಯುವತಿಯರು ಬಸ್ಸಿನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದಾರೆಂದು ಅನುಮಾನಿಸಿ ಬಸ್ಸನ್ನು ತಡೆದು ಪೊಲೀಸ್‌ಗಿರಿ ನಡೆಸಿದ್ದು ವರದಿಯಾಗಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೊಂದು ಅಂತಹದ್ದೇ ಘಟನೆ ನಡೆದಿದೆ. ಆಗಸ್ಟ್ 26 ರ ಗುರುವಾರ ಸಂಜೆ ಬಂಟ್ವಾಳದ ಕಾರಿಂಜ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಮಂಗಳೂರಿನ ವೈದ್ಯಕೀಯ ವಿದ್ಯಾರ್ಥಿಗಳನ್ನು ತಡೆದು, ಅವರನ್ನು ಪ್ರಶ್ನಿಸಿ ಪೊಲೀಸ್‌ಗಿರಿ ನಡೆಸಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಬಿಜೆಪಿ ಬೆಂಬಲಿತ ಸಂಘಟನೆಗಳ ಕಾರ್ಯಕರ್ತರಾಗಿದ್ದು, ಕಾರಿಂಜ ದೇವಾಲಯದ ಬಳಿ ತೆರಳಿದ್ದ ಅಂತರ್ ಧರ್ಮೀಯ ವಿದ್ಯಾರ್ಥಿಗಳ ಗುಂಪನ್ನು ಅಡ್ಡಿಪಡಿಸಿದ್ದಕ್ಕಾಗಿ ಮತ್ತು ಅವರನ್ನು ದೀರ್ಘಕಾಲದವರೆಗೆ ವಿಚಾರಣೆ ನಡೆಸಿದ್ದಕ್ಕೆ ಬಂಧಿಸಲಾಯಿತು ಎಂದು ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನವಾನೆ ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು: ಬಿಜೆಪಿ ವಿರುದ್ದ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಸಾಮಾಜಿಕ ಕಾರ್ಯಕರ್ತೆಗೆ ಗ್ಯಾಂಗ್‌ರೇಪ್‌ ಬೆದರಿಕೆ

ಕೆಲವು ಆರೋಪಿಗಳು ಹಿಂದೂ ಜಾಗರಣ ವೇದಿಕೆ (ಎಚ್‌ಜೆವಿ) ಯವರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಪ್ಯಾರಾಮೆಡಿಕಲ್ ಕಾಲೇಜೊಂದರಲ್ಲಿ ಓದುತ್ತಿದ್ದ ಆರು ವಿದ್ಯಾರ್ಥಿಗಳು ಗುರುವಾರ ಬಂಟ್ವಾಳದ ಕಾರಿಂಜ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ವಿದ್ಯಾರ್ಥಿಗಳು ದೇವಾಸ್ಥಾನದ ಪರಿಸರದಲ್ಲಿ ಪೋಟೋ ತೆಗೆದು ಮರಳುತ್ತಿದ್ದಾಗ, ಐವರು ಅಪರಿಚಿತ ವ್ಯಕ್ತಿಗಳು ವಿದ್ಯಾರ್ಥಿಗಳನ್ನು ತಡೆದು ಪ್ರಶ್ನಿಸಿದೆ.

“ವಿದ್ಯಾರ್ಥಿಗಳನ್ನು ಕೆಲಕಾಲ ತಡೆದು ನಿಲ್ಲಿಸಿ ಪ್ರಶ್ನಿಸಲಾಗಿದೆ. ಇದು ಕಾನೂನು ಬಾಹಿರ ಕೃತ್ಯವಾಗಿದೆ. ವಿದ್ಯಾರ್ಥಿಗಳಲ್ಲಿ ಒಬ್ಬರು ಬುರ್ಖಾ ಧರಿಸಿದ್ದರು. ಈ ಬಗ್ಗೆ ಆರೋಪಿಗಳು ಸ್ಥಳೀಯರಿಂದ ಮಾಹಿತಿ ಪಡೆದಿರುವ ಸಾಧ್ಯತೆಯಿದೆ. ನಾವು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ” ಎಂದು ಎಸ್‌ಪಿ ಹೃಷಿಕೇಶ್ ಸೋನಾವಾನೆ ಹೇಳಿದ್ದಾರೆ.

“ಈ ರೀತಿಯಾಗಿ ಯಾವುದೆ ಕಾರಣವಿಲ್ಲದೆ ತೊಂದರೆ ನೀಡುವುದಕ್ಕೆ ನಾವು ಯಾರಿಗೂ ಅವಕಾಶ ನೀಡುವುದಿಲ್ಲ. ಪ್ರಜ್ಞಾವಂತಿಕೆಯಿಂದ ವರ್ತಿಸಬೇಕು, ಅಪರಾಧದಲ್ಲಿ ತೊಡಗಿಸಿಕೊಳ್ಳದ ಹೊರತು ಯಾರನ್ನೂ ತಡೆಯುವ ಹಾಗಿಲ್ಲ” ಎಂದು ಎಸ್ಪಿ ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು ಕೋಸ್ಟಲ್ ಬರ್ತ್‌ಗಾಗಿ ಸಾಂಪ್ರದಾಯಿಕ ಮೀನುಗಾರರ ಒಕ್ಕಲೆಬ್ಬಿಸುವುದಕ್ಕೆ ವಿರೋಧ

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143 (ಕಾನೂನುಬಾಹಿರ ಸಭೆ), 147 (ಗಲಭೆ) ಮತ್ತು 341 (ತಪ್ಪಾದ ನಿರ್ಬಂಧ) ಅಡಿಯಲ್ಲಿ ಆರೋಪಿಗಳ ವಿರುದ್ಧ ಆರೋಪ ಹೊರಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಪೋಲೀಸ್‌ಗಿರಿ ಹೆಚ್ಚುತ್ತಿದೆ. ಇಂತಹ ಘಟನೆ ಜಿಲ್ಲೆಯಲ್ಲಿ ಹಲವಾರು ಬಾರಿ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕಳೆದ ವಾರವವಷ್ಟೇ, ಬಿಜೆಪಿ ಬೆಂಬಲಿತ ಸಂಘಪರಿವಾರದ ಗುಂಪು ವಿಭಿನ್ನ ಧರ್ಮಗಳಿಗೆ ಸೇರಿದ ಯುವಕ-ಯುವತಿಯರು ಬಸ್ಸಿನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದಾರೆಂದು ಅನುಮಾನಿಸಿ ಬಸ್ಸನ್ನು ತಡೆದು ಪೊಲೀಸ್‌ಗಿರಿ ನಡೆಸಿದ್ದು ಜಿಲ್ಲೆಯಲ್ಲಿ ವರದಿಯಾಗಿತ್ತು. ಬಸ್ಸಿನಲ್ಲಿದ್ದ ಯುವಕ ಮತ್ತು ಯುವತಿಯನ್ನು ಪೊಲೀಸರಿಗೆ ಒಪ್ಪಿಸಿದ್ದ ದುಷ್ಕರ್ಮಿಗಳು, ಅವರಿಬ್ಬರಿಗೂ ಯಾವುದೆ ಸಂಬಂಧವಿಲ್ಲ ಎಂದು ತಿಳಿದು ಬಂದ ನಂತರ ಬಿಟ್ಟು ಕಳುಹಿಸಿದ್ದಾರೆ.

ಇದನ್ನೂ ಓದಿ: ಬೇಗೂರು ಕೆರೆ ವಿವಾದ ಕೋಮುವಾದಿಕರಣ: ಬಿಜೆಪಿ ಬೆಂಬಲಿಗ ಪುನಿತ್‌ ಕೆರೆಹಳ್ಳಿ ಸಹಿತ ಹಲವರ ಮೇಲೆ FIR

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...