Homeಕರ್ನಾಟಕದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

- Advertisement -
- Advertisement -

ಫೇಸ್‌‌ಬುಕ್‌ ಪೋಸ್ಟ್‌ ವಿಚಾರವಾಗಿ ತ೦ಡವೊ೦ದು ವ್ಯಕ್ತಿಯೋರ್ವರ ಮನೆಗೆ ಅಕ್ರಮ ಪ್ರವೇಶಗೈದು ತಲವಾರು ದಾಳಿ ನಡೆಸಿದ ಘಟನೆ ಮಂಗಳವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಡಗ ಬೆಳ್ಳೂರುವಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಬಿಜೆಪಿಯ ಸ್ಥಳೀಯ ನಾಯಕ ಪ್ರಕಾಶ್ ಬೆಳ್ಳೂರು ಎಂದು ಗುರುತಿಸಲಾಗಿದ್ದು, ಹಲ್ಲೆ ಮಾಡಿದವರನ್ನು ಬಿಜೆಪಿ ಬೆಂಬಲಿತ ಸಂಘಟನೆಯಾಗಿರುವ ಬಜರಂಗ ದಳದ ಕಾರ್ಯಕರ್ತರು ಎಂದು ವಾರ್ತಾಭಾರತಿ ಪತ್ರಿಕೆ ಉಲ್ಲೇಖ ಮಾಡಿದೆ.

“ತಮ್ಮಿಂದ 25 ಸಾವಿರ ಹಣ ಪಡೆದುಕೊಂಡಿದ್ದಾರೆ ಎಂದು ರತ್ನಾಕರ್‌ ಕೋಟ್ಯಾನ್ ಎಂಬವರು ಅಪಪ್ರಚಾರ ಮಾಡುತ್ತಿದ್ದಾರೆ, ಈ ಬಗ್ಗೆ ಪಣೋಲಿಬೈಲಿನ ದೈವಸ್ಥಾನದಲ್ಲಿ ನಾನು ಆಣೆ ಪ್ರಮಾಣ ಮಾಡುತ್ತೇನೆ. ನೀವು ಕೂಡಾ ಬನ್ನಿ” ಎಂದು ಪ್ರವಾಸಿ ಪ್ರಬಂಧಕನಾಗಿ ಕೆಲಸ ಮಾಡಿಕೊಂಡಿದ್ದ ಬಿಜೆಪಿ ನಾಯಕ ಪ್ರಕಾಶ್ ಬೆಳ್ಳೂರು ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಈ ವಿಚಾರವಾಗಿ ನಿತಿನ್ ನಿಶಾಂತ್ ಮತ್ತು ರತ್ನಾಕರ ಕೋಟ್ನಾನ್ ಎಂಬವರು ಪ್ರಕಾಶ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಕೂಡಾ ನೀಡಿದ್ದರು.

ಇದನ್ನೂ ಓದಿ: ಬಜರಂಗ ದಳದ ದುಷ್ಕಮಿಗಳಿಂದ ‘ಆಶ್ರಮ್‌-3’ ಸೆಟ್‌ ಮೇಲೆ ದಾಳಿ; ಇನ್ನೂ ದೂರು ನೀಡದ ನಿರ್ಮಾಪಕ!

ಆದರೆ ಮಂಗಳವಾರ ಸಂಜೆ 7.30 ಗಂಟೆಗೆ ಪ್ರಕಾಶ್ ಮನೆಯಲ್ಲಿದ್ದಾಗ ಆರೋಪಿಗಳಾದ ನಿತಿನ್, ನಿಶಾಂತ್ ಮತ್ತು ಇತರರು ಮನೆಗೆ ಅಕ್ರಮ ಪ್ರವೇಶ ಮಾಡಿದ್ದಾರೆ. ಆರೋಪಿ ನಿತಿನ್ ತನ್ನ ಕೈಯಲ್ಲಿ ತಲವಾರು ಹಿಡಿದುಕೊಂಡು, ಪ್ರಕಾಶ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ತಲವಾರಿನಿಂದ ಬೀಸಿದ್ದು, ಇದರ ಪರಿಣಾಮವಾಗಿ ಎಡ ಕಿವಿಗೆ ಗಾಯವಾಗಿದೆ ಎಂದು ದೂರಲಾಗಿದೆ.

ಇಷ್ಟೇ ಅಲ್ಲದೆ, ಉಳಿದ ಆರೋಪಿಗಳು ಕೂಡಾ ಪ್ರಕಾಶ್‌ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಗಲಾಟೆಯ ಶಬ್ದ ಕೇಳಿ ಬಿಡಿಸಲು ಬಂದ ಪ್ರಕಾಶ್ ಅವರ ಅಣ್ಣ, ಅತ್ತಿಗೆ ಅವರಿಗೂ ಆರೋಪಿಗಳು ಕೊಲೆ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ಪ್ರಕಾಶ್‌ ದೂರಿದ್ದಾರೆ.

ಪ್ರಕಾಶ್ ಬೆಳ್ಳೂರು ಅವರು ಸ್ಥಳೀಯ ಬಿಜೆಪಿ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ ಎಂದು ವಾರ್ತಾಭಾರತಿ ಉಲ್ಲೇಖಿಸಿದೆ. ಅಲ್ಲದೆ, ಅವರ ಮೇಲೆ ಹಲ್ಲೆ ನಡೆಸಿರುವ ಅರೋಪಿಗಳಾದ ನಿತಿನ್‌ ಬಡಗಬೆಳ್ಳೂರು, ನಿಶಾ೦ತ್‌‌ ಬಡಗ ಬೆಳ್ಳೂರು ಸೇರಿದಂತೆ ಇತರತು ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗ ದಳದ ಕಾರ್ಯಕರ್ತರು ಎಂದು ಪತ್ರಿಕೆ ಉಲ್ಲೇಖಿಸಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾ೦ತರ ಠಾಣೆಯಲ್ಲಿ ಅಪರಾಧ ಕ್ರಮಾ೦ಕ 124/2021 ಕಲ೦ 448, 504, 323, 324, 307, 506 ಜೊತೆಗೆ 34 ಐಪಿಸಿಯ೦ತೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ತಲವಾರು ಮೆರವಣಿಗೆ: ಬಜರಂಗ ದಳ ಸದಸ್ಯರ ವಿರುದ್ಧ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...