Homeಕರ್ನಾಟಕದಕ್ಷಿಣ ಕನ್ನಡ| ಹೆಜಮಾಡಿ ಟೋಲ್ ಗೇಟ್ ವಿರುದ್ಧ ಬಸ್ ಮಾಲೀಕರ ಆಕ್ರೋಶ; ಪ್ರತಿಭಟನೆ

ದಕ್ಷಿಣ ಕನ್ನಡ| ಹೆಜಮಾಡಿ ಟೋಲ್ ಗೇಟ್ ವಿರುದ್ಧ ಬಸ್ ಮಾಲೀಕರ ಆಕ್ರೋಶ; ಪ್ರತಿಭಟನೆ

- Advertisement -
- Advertisement -

ಹೆಜಮಾಡಿ ಟೋಲ್ ಗೇಟ್‌ನಲ್ಲಿ ಬಸ್ಸುಗಳಿಂದ ಅವೈಜ್ಞಾನಿಕವಾಗಿ ಟೋಲ್ ಕಡಿತ ಮಾಡಲಾಗುತ್ತಿದೆ; ಎರಡು ದಿನಗಳ ಒಳಗೆ ಈ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಿ, ನಮ್ಮ ಶಕ್ತಿ ಪ್ರದರ್ಶನ ಮಾಡುವುದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಸ್‌ ಮಾಲೀಕರು ಎಚ್ಚರಿಕೆ ನೀಡಿದ್ದಾರೆ.

‘ಹೆಜಮಾಡಿ ಟೋಲ್ ಗೇಟ್‌ನಲ್ಲಿ ಹಗಲು ದರೋಡೆ ಮಾಡಲಾಗುತ್ತಿದೆ’ ಎಂದು ಆರೋಪಿಸಿ ಕೆನರಾ ಬಸ್‌ ಮಾಲಕರ ಸಂಘ ಹಾಗೂ ಕರಾವಳಿ ಬಸ್ಸು ಮಾಲಕರ ಸಂಘದ ಪದಾಧಿಕಾರಿಗಳು ಬುಧವಾರ ಸಾಂಕೇತಿಕವಾಗಿ ಪ್ರತಿಭಟಿಸಿದರು.

ತಮ್ಮ ಮಿನಿ ಬಸ್ಸುಗಳಿಗೂ ಸಹ ದೊಡ್ಡ ವಾಹನಗಳ ಟೋಲನ್ನು ಕಡಿತಗೊಳಿಸಲಾಗುತ್ತಿದೆ. ಅವೈಜ್ಞಾನಿಕವಾಗಿರುವ ಈ ಕ್ರಮವನ್ನು ಕೂಡಲೇ ನಿಲ್ಲಿಸಬೇಕು. ಇಲ್ಲವಾದಲ್ಲಿ ಬಸ್ಸುಗಳನ್ನೆಲ್ಲಾ ಟೋಲ್ ಗೆ ಅಡ್ಡವಾಗಿರಿಸಿ ತೀವ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಫಾಸ್ಟ್‌ ಟ್ಯಾಗ್ ಮೊತ್ತದ ಹೊರತಾಗಿಯೂ ನಮಗೆ ಮತ್ತೆ ಟೋಲ್ ಬರೆ ಬೀಳುತ್ತಿದೆ; ದೇಶದ ಎಲ್ಲೂ ಇಲ್ಲದ ಪರಿಸ್ಥಿತಿ ಇಲ್ಲಿದೆ. ನಮಗೆ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ಟೋಲ್ ಗೇಟ್ ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ ಎಂದು ಬಸ್‌ ಮಾಲೀಕರ ಸಂಘದ ದಿಲ್ ರಾಜ್ ಆಳ್ವ ಹೇಳಿದರು.

ಕೆನರಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮಾತನಾಡಿ. “ಹೆಜಮಾಡಿ, ಸಾಸ್ತಾನ, ಶಿರೂರುಗಳಲ್ಲಿ ಪ್ರತಿ ಬಸ್ ಗಳಿಂದ ದಿನಕ್ಕೆ ₹700 ರಷ್ಟು ಮೊತ್ತ ಟೋಲ್ ಹೆಸರಲ್ಲಿ ಸುಲಿಗೆಯಾಗುತ್ತಿದೆ” ಎಂದು ಆರೋಪಿಸಿದರು.

ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಘವೇಂದ್ರ ಭಟ್ ಮಾತನಾಡಿ, “ಟೋಲ್ ಹೆಸರಿನಲ್ಲಿ ಹಗಲು ದರೋಡೆಯಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ; ರೈತ ವಿರೋಧಿ ಕಾಯ್ದೆಗೆ ಜೋತು ಬಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ : ನಿಲುವು ಸ್ಪಷ್ಟಡಿಸುವಂತೆ ಸಿಎಂಗೆ ತುರ್ತು ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...