Homeಕರ್ನಾಟಕಮಂಗಳೂರು: ಸಾಂಬಾರ್‌ ಪಾತ್ರೆಗೆ ಬಿದ್ದಿದ್ದ ಬಿಸಿಯೂಟ ಸಹಾಯಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಮಂಗಳೂರು: ಸಾಂಬಾರ್‌ ಪಾತ್ರೆಗೆ ಬಿದ್ದಿದ್ದ ಬಿಸಿಯೂಟ ಸಹಾಯಕಿ ಚಿಕಿತ್ಸೆ ಫಲಕಾರಿಯಾಗದೆ ಸಾವು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸೇಂಟ್ ವಿಕ್ಟರ್ ಶಾಲೆಯಲ್ಲಿ ಬಿಸಿಯೂಟ ತಯಾರಿಸುವಾಗ ಸಾಂಬಾರಿನ ಪಾತ್ರೆ ಮೇಲೆ ಬಿದ್ದಿದ್ದ ಅಡುಗೆ ಸಹಾಯಕಿ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮಂಗಳವಾರ) ಮೃತಪಟ್ಟಿದ್ದಾರೆ.

ಮೇ 30 ರಂದು ಶಾಳೆಯಲ್ಲಿ ಬಿಸಿಯೂಟ ತಯಾರಿಸುವಾಗ ಕುದಿಯುತ್ತಿದ್ದ ಸಾಂಬಾರ್‌ಗೆ ಅಡುಗೆ ಸಹಾಯಕಿ 37 ವರ್ಷದ ಅಗ್ನೆಸ್ ಪ್ರಮೀಳಾ ಡಿಸೋಜಾ ಕಾಲು ಜಾರಿ ಬಿದ್ದಿದ್ದರು. ಬಿಸಿ ಸಾಂಬಾರ್‌ ಮೈ ಮೇಲೆ ಚೆಲ್ಲಿದ್ದರಿಂದ ಸುಟ್ಟಗಾಯಗಳಿಂದ ಪ್ರಮೀಳಾ ಬಳಲುತ್ತಿದ್ದರು. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೃತರು ಪುತ್ತೂರು ತಾಲೂಕಿನ ಕುರಿಯ ಗ್ರಾಮದ ನಿವಾಸಿ ಅಗ್ನೆಸ್ ಪ್ರಮೀಳಾ ಡಿಸೋಜಾ ಸೇಂಟ್ ವಿಕ್ಟರ್ ಶಾಲೆಯಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಡಿಸೋಜಾ ಅವರನ್ನು ಮೊದಲು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ನಂತರ ಮಂಗಳೂರಿನ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು

ಇದನ್ನೂ ಓದಿ: ಪಠ್ಯಪುಸ್ತಕ ಹಗರಣ – ‘ಬರಗೂರು ಸಮಿತಿ ಹಿಂದೆ ತುಕ್ಡೆ ಗ್ಯಾಂಗ್‌’: ಸಚಿವ ಬಿಸಿ ನಾಗೇಶ್‌ ವಿವಾದಾತ್ಮಕ ಹೇಳಿಕೆ

ಘಟನೆಯ ಬಗ್ಗೆ ಪುತ್ತೂರು ಬ್ಲಾಕ್ ಶಿಕ್ಷಣಾಧಿಕಾರಿ ಲೋಕೇಶ್ ಅವರಿಗೆ ಯಾವುದೇ ಸುಳಿವಿಲ್ಲ, ಮಧ್ಯಾಹ್ನದ ಊಟದ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ಸಿ ಅವರು ಸೋಮವಾರವಷ್ಟೇ ಶಾಲಾ ಅಧಿಕಾರಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದರು.

ಘಟನೆ ಕುರಿತು ಮೃತರ ಸಹೋದರ ಜಾರ್ಜ್ ಪ್ರಸನ್ನ ಡಿಸೋಜ ದೂರು ನೀಡಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಪಠ್ಯಪುಸ್ತಕ ಹಗರಣ ವಿರೋಧಿಸಿ ಜೂನ್‌‌ 18ರ ಶನಿವಾರ ನಡೆಯುವ ಬೃಹತ್‌ ರ್‍ಯಾಲಿಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಭಾಗಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...