Homeಕರ್ನಾಟಕದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡನ ಕೊಲೆ; ಸಿಎಂ ಖಂಡನೆ

ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡನ ಕೊಲೆ; ಸಿಎಂ ಖಂಡನೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಬಿಜೆಪಿಯ ಯುವ ಮುಖಂಡನನ್ನು ಕೊಲೆ ಮಾಡಲಾಗಿದೆ. ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಬೆಳ್ಳಾರೆಯಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಪ್ರವೀಣ್ ನೆಟ್ಟಾರು ರಾತ್ರಿ 8 ಗಂಟೆ ಸುಮಾರಿಗೆ ಕೊಲೆಯಾಗಿದ್ದಾರೆ. ತನ್ನ ಕೋಳಿ ಅಂಗಡಿಯನ್ನು ಮುಚ್ಚಿ ಹಿಂದಿರುಗುತ್ತಿದ್ದಾಗ ದಾಳಿಕೋರರು ಆತನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೊಲೆಯ ಹಿಂದಿನ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಲಾಗುತ್ತಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಕಳೆದ ವಾರ ಕೇಸರಿ ಪಡೆಯಿಂದ ಹಲ್ಲೆಗೊಳಗಾದ ಮುಸ್ಲಿಂ ಯುವಕನ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಈ ಕೊಲೆ ಮಾಡಲಾಗಿದೆ” ಎಂದು ಮೂಲಗಳು ಹೇಳಿವೆ.

ಕೆಲ ದಿನಗಳ ಹಿಂದಷ್ಟೇ ಬೆಳ್ಳಾರೆಯಲ್ಲಿ ಮಸೂದ್ ಎಂಬ ಯುವಕನ ಕೊಲೆಯಾಗಿತ್ತು‌. ಕ್ಷುಲ್ಲಕ ಕಾರಣಕ್ಕೆ ಕಾಸರಗೋಡು ನಿವಾಸಿ ಮಸೂದ್ (18) ಮೇಲೆ ಅಭಿಲಾಶ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್, ಭಾಸ್ಕರ ಎಂಬವರು ಹಲ್ಲೆ ನಡೆಸಿದ್ದರು. ‌

ಇದನ್ನೂ ಓದಿರಿ: ಕರಾವಳಿಯಲ್ಲಿನ ಕೋಮುದ್ವೇಷಗಳ ಆಯಾಮ ತೆರೆದಿಡುವ ಕೃತಿ ‘ನೇತ್ರಾವತಿಯಲ್ಲಿ ನೆತ್ತರು’

ಜು.19ರಂದು ಸುಧೀರ್ ಎಂಬಾತ ಮಸೂದ್ ಕೈ ತಾಗಿದ ಕಾರಣಕ್ಕೆ ಹಲ್ಲೆ ನಡೆಸಿದ್ದ. ಆ ಬಳಿಕ ಸ್ಥಳೀಯ ಹನೀಫ್ ಎಂಬವನ ಮೂಲಕ ಮಸೂದ್‌ ನನ್ನ ರಾಜಿ ಮಾತುಕತೆ ಕರೆದಿದ್ದಾರೆ.‌ ಹೀಗಾಗಿ ಮಸೂದ್ ಸೂಚಿಸಿದ ಸ್ಥಳಕ್ಕೆ ಬಂದಿದ್ದ ವೇಳೆ ಬಾಟಲಿಯಿಂದ ತಲೆಗೆ ಹಲ್ಲೆ ನಡೆಸಿದ್ದು,‌ ಚಿಕಿತ್ಸೆ ಫಲಿಸದೇ ಮಸೂದ್ ಸಾವನ್ನಪ್ಪಿದ್ದ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವೀಣ್‌ ಕೊಲೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದಾರೆ. “ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು. ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ” ಎಂದು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

0
1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ...