ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಬಿಜೆಪಿ ಮುಖಂಡನ ಮೇಲೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ.
ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಆರೋಪಿ ಬಿಜೆಪಿ ನಾಯಕ ಪ್ರಭಾವಿಯಾಗಿರುವ ಕಾರಣ ವಿಟ್ಲ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಲು ತಡ ಮಾಡಿದ್ದಾರೆ ಎಂದು ಆರೋಪಿಸಿರುವುದಾಗಿ ವರದಿ ತಿಳಿಸಿದೆ.
ಆರೋಪಿ ಬಿಜೆಪಿ ಮುಖಂಡ ಮಹೇಶ್ ಭಟ್ ಬಂಟ್ವಾಳದ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ನಿರ್ದೇಶಕರಾಗಿದ್ದು, ಜಿಲ್ಲೆಯ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ತನ್ನ ಕೃತ್ಯವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ವರದಿ ವಿವರಿಸಿದೆ.
ಬಾಲಕಿ ತನ್ನ ಮೇಲಿನ ಲೈಂಗಿಕ ದೌರ್ಜನ್ಯದಿಂದಾಗಿ ಮಾನಸಿಕವಾಗಿ ಕುಂದಿದ್ದು, ಎರಡು ತಿಂಗಳಿನಿಂದ ಶಾಲೆಗೆ ಹೋಗಿರಲಿಲ್ಲ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇದ್ದರೂ ಬಾಲಕಿ ಬಾರದ ಕಾರಣ ಶಿಕ್ಷಕರು ಆಕೆಯ ಮನೆಗೆ ಭೇಟಿ ನೀಡಿದ್ದಾರೆ. ಆದರೆ, ಅವರನ್ನೂ ಒಳಗೆ ಹೋಗಲು ಬಿಟ್ಟಿಲ್ಲ ಎಂದು ಹೇಳಲಾಗಿದೆ.
ಬಾಲಕಿ ಪೋಷಕರು ಆರೋಪಿಗೆ ಸೇರಿದ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಜನವರಿಯಲ್ಲಿ ಬಾಲಕಿಯನ್ನು ಪುಸಲಾಯಿಸಿ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಹೇಳಲಾಗಿದೆ. ದೂರು ನೀಡಿದ್ದರೂ ಪೊಲೀಸರು ಪ್ರಕರಣ ದಾಖಲಿಸಿರಲಿಲ್ಲ. ಇದೀಗ ತಡವಾಗಿ ಪ್ರಕರಣ ದಾಖಲಿಸಿದ್ದು, “ನೀನು ನನ್ನೊಂದಿಗೆ ಗುಡ್ಡಕ್ಕೆ ಬರ್ತೀಯಾ” ಎಂದು ಆರೋಪಿ ಸಂತ್ರಸ್ತೆಯನ್ನು ಕೇಳಿರುವುದಾಗಿ ಮಾತ್ರ ಉಲ್ಲೇಖಿಸಲಾಗಿದೆ ಎಂದು ಈದಿನ.ಕಾಂ ವಿವರಿಸಿದೆ.
ರಾಜಕೀಯ ಪ್ರಭಾವ ಇರುವ ಕಾರಣ ಈ ಪ್ರಕರಣವನ್ನು ಮುಚ್ಚಿ ಹಾಕುವ ಸಾಧ್ಯತೆ ಇದೆ ಎಂಬುದು ಸ್ಥಳೀಯರ ಆತಂಕ ಎಂದಿದೆ.
ಎಲ್ಲಾ ಸ್ವಯಂ ಘೋಷಿತ ಹಿಂದೂ ಹುಲಿಗಳ ಬಗ್ಗೆ ಕನಿಕರ ಮೂಡುತ್ತಿದೆ – ಸಚಿವ ಪ್ರಿಯಾಂಕ್ ಖರ್ಗೆ


