Homeಕರ್ನಾಟಕದಕ್ಷಿಣ ಕನ್ನಡ: ಯುವಕರ ಮೇಲೆ ತಲವಾರ್‌‌ ದಾಳಿ; ಐವರಿಗೆ ಗಾಯ

ದಕ್ಷಿಣ ಕನ್ನಡ: ಯುವಕರ ಮೇಲೆ ತಲವಾರ್‌‌ ದಾಳಿ; ಐವರಿಗೆ ಗಾಯ

- Advertisement -
- Advertisement -

ಮಂಗಳೂರು ಸಮೀಪದ ಇಳಂತಿಲದಲ್ಲಿ ಮುಸ್ಲಿಂ ಯುವಕರ ಮೇಲೆ ತಲವಾರ್‌ ಹಾಗೂ ತ್ರಿಶೂಲದಿಂದ ದಾಳಿ ಮಾಡಲಾಗಿದೆ. ಗಾಯಗೊಂಡ ಐವರು ಯುವಕರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಝಕಾರಿಯ ಇಳಂತಿಲ, ಸಿದ್ಧೀಕ್‌, ಅಯೂಬ್‌, ಫಯಾಝ್‌‌, ಹಫೀಜ್‌ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ದಾಳಿಗೆ ಕಾರಣವೇನೆಂದು ತಿಳಿದು ಬಂದಿಲ್ಲ. “ಸಂಘ ಪರಿವಾರದಲ್ಲಿ ಗುರುತಿಸಿಕೊಂಡಿರುವ ಜಯರಾಮ್‌ ಮತ್ತು ಸಂಗಡಿಗರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ” ಎಂದು ಪ್ರಸ್ತುತ.ಕಾಂ ವರದಿ ಮಾಡಿದೆ.

ಇಳಂತಿಲ ಪ್ರದೇಶದಲ್ಲಿ ಇದ್ದ ಹಫೀಜ್ ಮತ್ತು ಫಯಾಝ್‌ ಮೇಲೆ ಮೊದಲು ದಾಳಿ ನಡೆಸಲಾಗಿದೆ. ಇವರಿಬ್ಬರು ತಪ್ಪಿಸಿಕೊಂಡ ಬಳಿಕ ಝಕಾರಿಯಾ, ಸಿದ್ದೀಕ್ ಮತ್ತು ಅಯೂಬ್‌ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಅಯೂಬ್‌ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

“ಇಲ್ಲಿನ ಅಂಗಡಿಯೊಂದರ ಬದಿಯಲ್ಲಿ ಭಾನುವಾರ 7 ಗಂಟೆಯ ಸುಮಾರಿಗೆ ಫಯಾಜ್‌ ಮತ್ತು ಅಫೀಝ್‌ ಕುಳಿತುಕೊಂಡಿದ್ದರು. ಈ ವೇಳೆ ಅಲ್ಲಿಗೆ ಬಂದ 4-5 ಮಂದಿಯ ತಂಡ ಏಕಾಏಕಿ ತಲವಾರು ದಾಳಿ ನಡೆಸಿದ್ದಾರೆ. ನಂತರದ ಬೆಳವಣಿಗೆಯಲ್ಲಿ ರಾತ್ರಿ 8.30ರ ವೇಳೆಗೆ 30-40 ಮಂದಿ ಬೈಕ್‌ಗಳಲ್ಲಿ ಬಂದಿದ್ದು ಅಂಡತಡ್ಕದ ಅಂಗಡಿಯಲ್ಲಿ ಕುಳಿತುಕೊಂಡಿದ್ದ ಸಿದ್ಧೀಕ್‌, ಅಯೂಬ್‌, ಝಕಾರಿಯ ಎಂಬುವವರ ಮೇಲೆ ತಲವಾರು ದಾಳಿ ನಡೆಸಿದ್ದಾರೆ” ಎಂದು ವಾರ್ತಾಭಾರತಿ ವರದಿ ಮಾಡಿದೆ.

ದಕ್ಷಿಣ ಕನ್ನಡದ ಹೆಚ್ಚುತ್ತಿದೆ ಕೋಮುದ್ವೇಷ

ಪೀಪಲ್ಸ್‌ ಯೂನಿಯನ್ ಫಾರ್‌ ಲಿಬರ್ಟೀಸ್‌ ಕರ್ನಾಟಕ (ಪಿಯುಸಿಎಲ್‌-ಕ) ಆಲ್‌ ಇಂಡಿಯಾ ಲಾಯರ್ಸ್ ಅಸೋಸಿಯೇಷನ್‌ ಫಾರ್‌ ಜಸ್ಟಿಸ್‌ (ಎಐಎಲ್‌ಎಜೆ), ಆಲ್‌ ಇಂಡಿಯಾ ಪೀಪಲ್ಸ್ ಫೋರಮ್‌‌ (ಎಐಪಿಎಫ್‌) ಮತ್ತು ಗೌರಿ ಲಂಕೇಶ್‌ ನ್ಯೂಸ್‌.ಕಾಂ (gaurilankeshnews.com) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಕೋಮುದ್ವೇಷ ಅಪರಾಧ’ಗಳ ಕುರಿತು ಆತಂಕ ವ್ಯಕ್ತಪಡಿಸಿದೆ.

ಕರಾವಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯರವರು ಮತೀಯ ಗೂಂಡಾಗಿರಿಯನ್ನು ಬಹಿರಂಗವಾಗಿ ಸಮರ್ಥಿಸಿ ಹೇಳಿಕೆ ನೀಡಿದ್ದನ್ನು, ಸಾಮಾಜಿಕ ಸಂಘಟನೆಗಳು, ನಾಗರಿಕರು, ವಿದ್ಯಾರ್ಥಿಗಳು, ವಕೀಲರು ಮತ್ತು ವಿರೋಧ ಪಕ್ಷದ ನಾಯಕರುಗಳು ತೀವ್ರವಾಗಿ ವಿರೋಧಿಸಿದ್ದರು. ಈ ಹಿನ್ನೆಲೆಯಲ್ಲಿ ಎಂತಹ ಗಂಭೀರ ಪರಿಸ್ಥಿತಿಯಲ್ಲಿ ನಾವು ಇದ್ದೇವೆ ಎನ್ನುವುದನ್ನು ಈ ವರದಿಯು ಉಲ್ಲೇಖಿಸುತ್ತದೆ.


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ


ಈ ವರದಿಯು ದಕ್ಷಿಣ ಕನ್ನಡದಲ್ಲಿ ಜನವರಿ 2021ರಿಂದ ಸೆಪ್ಟೆಂಬರ್‌ 2021ರವರೆಗೆ ನಡೆದ ಮತೀಯ ಗೂಂಡಾಗಿರಿ ಮತ್ತು ದ್ವೇಷದ ಅಪರಾಧಿಕ ಘಟನೆಗಳನ್ನು ವಿಶ್ಲೇಷಿಸಿದೆ. ಜೊತೆಗೆ ಆರು ವಿಭಿನ್ನ ಮಾದರಿಯ ಘಟನೆಗಳನ್ನು ಗುರುತಿಸುತ್ತದೆ. ಅವುಗಳೆಂದರೆ, 1. ಸಾಮಾಜಿಕ ಪ್ರತ್ಯೇಕತೆಯನ್ನು ಜಾರಿಗೊಳಿಸುವುದು 2. ಆತ್ಮೀಯ ಸಂಬಂಧಗಳನ್ನು ನಿಯಂತ್ರಿಸುವುದು. 3. ಆರ್ಥಿಕ ಸಾಮಾಜಿಕ ಬಹಿಷ್ಕಾರ. 4. ಗೋವಿನ ಹೆಸರಲ್ಲಿ ದಾಳಿಗಳು. 5. ಧಾರ್ಮಿಕ ಸ್ವಾತಂತ್ರ್ಯವನ್ನು ನಿಗ್ರಹಿಸುವುದು. 6. ದ್ವೇಷ ಹರಡುವ ಭಾಷಣಗಳನ್ನು ಮಾಡುವುದು.

ಕೋಮುದ್ವೇಷವನ್ನು ತಡೆಯುವಲ್ಲಿ ಪೊಲೀಸರ ಪಾತ್ರವನ್ನು ಈ ವರದಿ ಉಲ್ಲೇಖಿಸಿದೆ. ಜೊತೆಗೆ ಪೊಲೀಸರ ತಪ್ಪುಗಳನ್ನು ವರದಿ ಉಲ್ಲೇಖಿಸಿದೆ. ಅಂತರ ಧರ್ಮೀಯ ಸಂಬಂಧಗಳಿಗೆ ತೊಂದರೆಯುಂಟುಮಾಡಿದ ಹೆಚ್ಚಿನ ಸಂಖ್ಯೆಯ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಲ್ಲ. ಬದಲಾಗಿ ಅಂತರ ಧರ್ಮೀಯ ಸ್ನೇಹಿತರು ಅಥವಾ ದಂಪತಿಗಳನ್ನೇ ಪೊಲೀಸ್ ಠಾಣೆಗೆ ಕರೆಸಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಒಂದೆಡೆ ಹಿಂಸಾಚಾರ ಎಸಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೂ ಪೊಲೀಸರು ಒಂದು ಹೆಜ್ಜೆ ಮುಂದೆ ಹೋಗಿ ಸಂತ್ರಸ್ತರನ್ನು ಠಾಣೆಗೆ ಕರೆದೊಯ್ದು ಪ್ರಶ್ನಿಸುವ ಮೂಲಕ ತಪ್ಪಿತಸ್ಥರೆಂದು ಪರಿಗಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅಂತರ ಧರ್ಮೀಯ ಸಂಬಂಧಗಳನ್ನು ಬಲವಂತವಾಗಿ ಪ್ರತ್ಯೇಕಿಸುವ ಪ್ರಕ್ರಿಯೆಯಲ್ಲಿ ಪೊಲೀಸರು ಆರೋಪಿಗಳ ಮಿತ್ರರಾಗಿದ್ದಾರೆ ಎಂದು ವರದಿಯು ಆತಂಕ ವ್ಯಕ್ತಪಡಿಸಿದೆ.


ಇದನ್ನೂ ಓದಿರಿ: ಕೋಮುದ್ವೇಷ ಬಿತ್ತುವ ವರದಿಗಳಿಂದ ದೇಶಕ್ಕೆ ಕೆಟ್ಟ ಹೆಸರು: ಸುಪ್ರೀಂ ಆತಂಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೆಡ್ಗೆವಾರ್‌ ಸಂಘಪರಿವಾರದವರಿಗೆ ಮಾತ್ರ ಆದರ್ಶ, ರಾಜ್ಯದ ಜನತೆ ಅಲ್ಲ: ಎಸ್‌ಎಫ್‌ಐ ಕಿಡಿ | Naanu Gauri

ಹೆಡ್ಗೆವಾರ್‌ ಸಂಘಪರಿವಾರದವರಿಗೆ ಮಾತ್ರ ಆದರ್ಶ, ರಾಜ್ಯದ ಜನತೆ ಅಲ್ಲ: ಭಗತ್‌ ಸಿಂಗ್‌ ಪಾಠ ಕೈ...

0
ರಾಜ್ಯದ ಪಠ್ಯ ಪುಸ್ತಕದಲ್ಲಿ ಸ್ವಾತಂತ್ಯ ಹೋರಾಟಗಾರ ಭಗತ್‌ ಸಿಂಗ್ ಪಾಠ ಸೇರಿ ಅನೇಕ ಪ್ರಗತಿಪರ ಚಿಂತನೆಯ ಪೂರಕ ಪಾಠಗಳನ್ನು ಕೈ ಬಿಟ್ಟು ಸಂಘಪರಿವಾರದ ಸಂಸ್ಥಾಪಕ ಹೆಡಗೇವಾರ್ ಭಾಷಣ ಸೇರ್ಪಡೆ ಹಾಗೂ ಶಿಕ್ಷಣದ ಕೇಸರೀಕರಣ...