Homeಕರ್ನಾಟಕದಲಿತ ಹೋರಾಟಗಾರ ಮೈಸೂರಿನ ಹಾರೋಹಳ್ಳಿ ರವೀಂದ್ರ ಬಂಧನ

ದಲಿತ ಹೋರಾಟಗಾರ ಮೈಸೂರಿನ ಹಾರೋಹಳ್ಳಿ ರವೀಂದ್ರ ಬಂಧನ

- Advertisement -
- Advertisement -

ದಲಿತ ಹೋರಾಟಗಾರ, ಚಿಂತಕ, ಬರಹಗಾರ ಹಾಗೂ ಪತ್ರಕರ್ತ ಮೈಸೂರು ಜಿಲ್ಲೆಯ ಹಾರೋಹಳ್ಳಿ ರವೀಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ವರುಣದಲ್ಲಿ ರವೀಂದ್ರ ಅವರನ್ನು ಬಂಧಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಠಾಣೆ ಪೊಲೀಸರು ಅರೆಸ್ಟ್‌ ಮಾಡಿ ಕರೆದುಕೊಂಡು ಹೋಗುತ್ತಿದ್ದಾರೆಂಬ ತಿಳಿದುಬಂದಿದೆ. ಹಳೆಯ ಪೋಸ್ಟ್‌‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪೊಲೀಸ್‌ ಅಧಿಕಾರಿಯೊಬ್ಬರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “2017ರಲ್ಲಿ ಮಾಡಲಾದ ಪೇಸ್‌ಬುಕ್‌ ಪೋಸ್ಟ್‌ ಒಂದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ರವೀಂದ್ರ ಅವರು 2019ರಿಂದಲೂ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಬಂಧಿಸುವಂತೆ ಕೋರ್ಟ್ ಆದೇಶಿಸಿದೆ” ಎಂದು ತಿಳಿಸಿದರು.

ಹಾರೋಹಳ್ಳಿ ರವೀಂದ್ರ ಅವರು ದಲಿತ ಯುವ ಚಿಂತಕರಲ್ಲಿ ಮೈಸೂರು ಭಾಗದ ದಿಟ್ಟ ದನಿ. ದಲಿತರ ವಿಚಾರವಾಗಿ ಅವರು ಸದಾ ದನಿ ಎತ್ತುತ್ತಾ ಕೆಲವು ಪ್ರಕರಣಗಳಲ್ಲಿ ಸಿಲುಕಿದ್ದರು.

2017ರಲ್ಲಿ ಸಂಸದ ಅನಂತ್‌ಕುಮಾರ್‌ ಹೆಗಡೆ, “ಜಾತ್ಯತೀತರಿಗೆ ಅಪ್ಪ ಅಮ್ಮ ಇಲ್ಲ” ಎಂದು ಹೇಳಿಕೆ ನೀಡಿದ್ದರು. ಹೆಗಡೆ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದವು. ಆಗ ಹಾರೋಹಳ್ಳಿಯವರು ಕಟುವಾಗಿ ಪೋಸ್ಟ್ ಹಾಕಿದ್ದರು. ಹಿಂದೂ ದೇವರುಗಳಿಗೆ ಅಪಮಾನ ಮಾಡಲಾಗಿದೆ ಎಂದು ರವೀಂದ್ರ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಚಂದ್ರಶೇಖರ್‌‌ ಬಾಪು ಮುಂಡೆ ಎಂಬವರು ಚಿಕ್ಕೋಡಿಯಲ್ಲಿ ದೂರು ದಾಖಲಿಸಿದ್ದರು. ಅದರ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿತ್ತು. “ಸಾಮಾಜಿಕ ಜಾಲತಾಣವಾದ ವಾಟ್ಸ್‌ಅಪ್‌‌ ಹಾಗೂ ಫೇಸ್‌ಬುಕ್‌ನಲ್ಲಿ ದಿನಾಂಕ 27-12-2017ರಂದು ಹಿಂದೂ ಧರ್ಮದ ಹಿಂದೂ ದೇವರಾದ ಶ್ರೀಕೃಷ್ಣನ ಬಗ್ಗೆ ಉದ್ದೇಶಪೂರ್ವಕವಾಗಿ ಅತ್ಯಂತ ಹೀನಾಯವಾಗಿ ಕೀಳು ಅಸಹ್ಯ ಪದಗಳನ್ನು ಬಳಸಿದ್ದಾರೆ. ಮತೀಯ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹರಿಬಿಟ್ಟಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿತ್ತು.

10444147820170402

ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಪ್ರತಿಕ್ರಿಯೆ

ಹಾರೋಹಳ್ಳಿ ರವೀಂದ್ರ ಅವರ ಬಂಧನವನ್ನು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಖಂಡಿಸಿದ್ದಾರೆ. “ಮೊನ್ನೆ ಜಿಗ್ನೇಶ್, ಇಂದು ಹಾರೋಹಳ್ಳಿ ರವೀಂದ್ರ..! ಸಾಮಾಜಿಕ ಜಾಲತಾಣದಲ್ಲಿ ಟ್ವಿಟ್ ಮಾಡಿದ ಕಾರಣಕ್ಕೆ ದಲಿತ ಪರ ಹೋರಾಟಗಾರರು, ಬರಹಗಾರರನ್ನ ಗುರಿಯಾಗಿಸಿಕೊಂಡು ಬಂಧಿಸುತ್ತಿರುವ ಬಿಜೆಪಿ ಸರ್ಕಾರದ ಫ್ಯಾಶಿಸ್ಟ್ ನಡೆಯನ್ನ ಖಂಡಿಸುತ್ತೇನೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯ ಮೇಲೆ ನಡೆಸುತ್ತಿರುವ ದಾಳಿ. ಕೂಡಲೇ ರವೀಂದ್ರರನ್ನ ಬಿಡುಗಡೆ ಮಾಡಬೇಕು” ಎಮದು ಆಗ್ರಹಿಸಿದ್ದಾರೆ.

ದಲಿತ ಹೋರಾಟಗಾರರ ಬಂಧನ

ಇತ್ತೀಚೆಗೆ ದಲಿತ ಹೋರಾಟಗಾರ, ಶಾಸಕ ಜಿಗ್ನೇಶ್ ಮೇವಾನಿಯವರನ್ನು ಬಂಧಿಸಲಾಗಿತ್ತು. ಪ್ರಧಾನಿ ಮೋದಿಯವರನ್ನು ಟೀಕಿಸಿದ ಹಿನ್ನೆಲೆಯಲ್ಲಿ ಜಿಗ್ನೇಶ್ ಮೇಲೆ ಪ್ರಕರಣ ದಾಖಲಾಗಿತ್ತು. ಬಳಿಕ ಜಾಮೀನು ದೊರೆದಿತ್ತು. ಆದರೆ ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆಂಬ ಆರೋಪ ಹೊರಿಸಿ ಮತ್ತೊಂದು ಪ್ರಕರಣದಲ್ಲಿ ಬಂಧಿಸಲಾಗಿತ್ತು. ಈಗ ಆ ಪ್ರಕರಣದಲ್ಲೂ ಜಾಮೀನು ದೊರೆತಿದೆ.

ಜಿಗ್ನೇಶ್ ಬಂಧನದ ಅವಧಿಯಲ್ಲಿ ಗುಜರಾತ್‌ನ ವಿವಿಧೆಡೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಜಿಗ್ನೇಶ್ ಅವರ ಒಡನಾಡಿಗಳು ಹಾಗೂ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು. ಅವರ ಮನೆಗಳಿಗೆ ತೆರಳಿ ಸರ್ಚ್ ಮಾಡಿದ್ದರು. ಖಾಸಗಿ ಮಾಹಿತಿಗಳಿರುವ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದರು.

ರವೀಂದ್ರ ಅವರ ಮೇಲಿನ ಎಫ್‌ಐಆರ್‌ ಪ್ರತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...