Homeಕರ್ನಾಟಕದಲಿತ ಹೋರಾಟಗಾರ ಸಂದೇಶ್‌ ಆತ್ಮಹತ್ಯೆಗೆ ಯತ್ನ; ಕಿರುಕುಳ ನೀಡಿದವರನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

ದಲಿತ ಹೋರಾಟಗಾರ ಸಂದೇಶ್‌ ಆತ್ಮಹತ್ಯೆಗೆ ಯತ್ನ; ಕಿರುಕುಳ ನೀಡಿದವರನ್ನು ಬಂಧಿಸಿ: ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

”ವಿಪಕ್ಷ ನಾಯಕ ಸಿದ್ದರಾಮಯ್ಯನವರು ದಲಿತ ವಿರೋಧಿಯಲ್ಲ ಎಂದು ಹೇಳಿಕೆ ನೀಡಿದ ಕಾರಣಕ್ಕೆ ಸಂಸದ ಮುನಿಸ್ವಾಮಿಯವರು ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದ್ದಾರೆ” ಎಂದು ಆರೋಪಿಸಿ ಡೆತ್‌ನೋಟ್ ಬರೆದಿಟ್ಟು ದಲಿತ ಯುವ ಹೋರಾಟಗಾರ ಕೆ.ಎಂ.ಸಂದೇಶ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸಧ್ಯ ಸಂದೇಶ್ ಅವರು, ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಕಿರುಕುಳ ನೀಡಿದವರ ವಿರುದ್ಧ ಕ್ರಮ ಆಗಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಫೆಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು, ”ಕೋಲಾರದ ದಲಿತ ಮುಖಂಡ ಸಂದೇಶ್ ಅವರ ಮೇಲೆ ದುರುದ್ದೇಶಪೂರಿತವಾಗಿ ಸುಳ್ಳು ಪ್ರಕರಣಗಳನ್ನು ದಾಖಲಿಸಿ, ಮಾನಸಿಕ ಹಿಂಸೆ ನೀಡಿ ಆತನನ್ನು ಆತ್ಮಹತ್ಯೆಗೆ ಪ್ರಯತ್ನಿಸುವಂತೆ ಮಾಡಿರುವವರು ಯಾರೇ ಆಗಲಿ ಅಂಥವರನ್ನು ತಕ್ಷಣ ಬಂಧಿಸಿ, ಪ್ರಕರಣದ ಸೂಕ್ತ ತನಿಖೆ ನಡೆಸಿ ಸಂತ್ರಸ್ತನಿಗೆ ನ್ಯಾಯ ಕೊಡಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

”ಧ್ವನಿಯಿಲ್ಲದ ಜನರ ಪರವಾದ ಹೋರಾಟದ ಹಾದಿಯನ್ನು ಆಯ್ಕೆ ಮಾಡಿಕೊಂಡ ಮೇಲೆ ಆ ಹಾದಿಯಿಂದ ವಿಮುಖಗೊಳಿಸುವ ನಿರಂತರ ಪ್ರಯತ್ನಗಳು ಖಂಡಿತಾ ನಡೆಯುತ್ತವೆ, ಇಂಥಾ ದುಷ್ಟರ ಪ್ರಯತ್ನಗಳಿಂದ ನೊಂದು ದುಡುಕಿ ಆತ್ಮಹತ್ಯೆಯ ನಿರ್ಧಾರ ಕೈಗೊಂಡರೆ ನಿಮ್ಮ ಬೆನ್ನ ಹಿಂದಿರುವ ಜನ, ನಿಮ್ಮ ಕುಟುಂಬ ಎರಡೂ ಅನಾಥವಾಗುತ್ತದೆ. ವ್ಯವಸ್ಥೆಯಿಂದ ಅನ್ಯಾಯ, ಅಪಮಾನಕ್ಕೀಡಾಗಿ ನೊಂದಿರುವ ದಲಿತ ಮುಖಂಡ ಸಂದೇಶ್ ಅವರ ಜೊತೆ ನಾನಿದ್ದೇನೆ. ಅಪಮಾನಗಳನ್ನೇ ಸವಾಲಿನಂತೆ ಸ್ವೀಕರಿಸಿ ಗೆದ್ದ ಬಾಬಾ ಸಾಹೇಬರು ನೀಡಿರುವ ಸಂವಿಧಾನ ನಮ್ಮ ಜೊತೆಗಿದೆ. ಹೀಗಾಗಿ ನ್ಯಾಯ ಸಿಗುವ ಪೂರ್ಣ ವಿಶ್ವಾಸ ನನಗಿದೆ. ಸಂದೇಶ್ ಅವರು ಆದಷ್ಟು ಶೀಘ್ರ ಗುಣಮುಖರಾಗಿ ಬರಲಿ” ಎಂದು ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ.

ಇದನ್ನೂ ಓದಿ: ‘ಸಂಸದ ಮುನಿಸ್ವಾಮಿಯಿಂದ ಕಿರುಕುಳ’; ಡೆತ್‌ನೋಟ್‌ ಬರೆದಿಟ್ಟು ದಲಿತ ಯುವ ಹೋರಾಟಗಾರ ಸಂದೇಶ್ ಆತ್ಮಹತ್ಯೆಗೆ ಯತ್ನ

ಸಂದೇಶ್ ಬರೆದಿರುವ ಪತ್ರದಲ್ಲಿ ಏನಿದೆ?

“ಬಾಗಲ ಕೋಟೆ ಮೂಲದ ದಲಿತ ಯುವತಿಗೆ ನ್ಯಾಯ ಕೊಡಿಸುವ ಸಲುವಾಗಿ ಮುಂದಾಗಿದ್ದರಿಂದ ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ನಾಲ್ಕು ಜನ ಅಮಾಯಕರಿದ್ದಾರೆ. ಅವರಿಗೆ ತೊಂದರೆಯಾಗುವುದರಿಂದ ಆ ಪ್ರಕರಣದ ಕುರಿತು ಬರೆಯುವುದಿಲ್ಲ. ನ್ಯಾಯಾಲಯದಲ್ಲಿ ಗೆಲುವು ಸಿಗುತ್ತದೆ”.

“ನನ್ನ ವಿಚಾರವಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದು, ಅದನ್ನು ಪತ್ರಿಕೆಗಳಲ್ಲಿ ಕೆಟ್ಟದ್ದಾಗಿ ಬರೆದಿರುವುದು ಮನಸ್ಸಿಗೆ ನೋವುಂಟು ಮಾಡಿದೆ. ಯಾವುದೇ ತಪ್ಪು ಮಾಡದೆ ಇದ್ದರೂ ಸಮಾಜದಲ್ಲಿ ತಲೆ ಎತ್ತಿ ನಡೆಯಲು ಆಗುತ್ತಿಲ್ಲ.”

“ಕಣ್ಣೂರು ಸ್ಮಶಾನ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಕ್ಯಾಸಂಬಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಬಂಡಹಳ್ಳಿ ಗ್ರಾಮದಲ್ಲಿ ಬಡವರ ಮನೆಗಳನ್ನು ಉಳಿಸುವ ನಿಟ್ಟಿನಲ್ಲಿ ನಡೆಸಿದ ಹೋರಾಟದಲ್ಲಿ ಒಂದು ಪ್ರಕರಣ, ಈಗ ಈ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಗಳು ನನ್ನ ಸ್ವಾರ್ಥಕ್ಕಾಗಿ ಆದದ್ದಲ್ಲ.”

“ನಾನು ಇಲ್ಲಿಯ ತನಕ 129 ಅಂತರ್ಜಾತಿ ವಿವಾಹಗಳನ್ನು ನಡೆಸಿದ್ದು, ಯಾವುದೇ ದಂಪತಿಯಿಂದ ಒಂದು ಪೈಸೆ ಹಣ ಪಡೆದಿಲ್ಲ. ನನ್ನ ಜೀವನದಲ್ಲಿ ಯಾವುದೇ ಕಚೇರಿ, ಅಧಿಕಾರಿಯ ಬಳಿ ರೋಲ್‌ಕಾಲ್ ಮಾಡಿಲ್ಲ. ನನ್ನ ವಿರುದ್ಧವಾಗಿ ಯಾವುದೇ ಆಧಾರವಿಲ್ಲದೆ ಪತ್ರಿಕಾಗೋಷ್ಠಿ ನಡೆಸಿರುವುದರಿಂದ ನೋವಾಗಿದೆ.”

“ನಾನು ಜೀವನಪೂರ್ತಿ ಬಾಡಿಗೆ ಮನೆಯಲ್ಲಿಯೇ ವಾಸವಿದ್ದೇನೆ. ಇಲ್ಲಿಯತನಕ ಸ್ವಃತ ಮನೆಯನ್ನೂ ಕಟ್ಟಿಕೊಂಡಿಲ್ಲ. ಒಂದೇ ಒಂದು ಗುಂಟೆ ಜಮೀನಿಲ್ಲ. ಒಂದೇ ಒಂದು ನಿವೇಶನ ಇಲ್ಲ. ನನಗೆ ಕೆಟ್ಟ ಹವ್ಯಾಸಗಳೂ ಇಲ್ಲ. ನನ್ನ ಜನರು ಪೋನ್‌ ಮಾಡಿದರೆ ತಕ್ಷಣ ಅಲ್ಲಿಗೆ ಹೋಗಿ ಅವರಿಗೆ ನ್ಯಾಯ ಕೊಡಿಸುವ ಹವ್ಯಾಸವೊಂದು ನನಗಿದೆ.”

“ನನ್ನನ್ನು ಮುಗಿಸಲು ಕೋಲಾರ ಜಿಲ್ಲೆಯ ಮಾನ್ಯ ಸಂಸದರು ಷಡ್ಯಂತ್ರ ನಡೆಸಿ, ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಇಷ್ಟು ವರ್ಷ ಮನೆಮನೆಗೆ ಪತ್ರಿಕೆ ಹಾಕಿಕೊಂಡು, ಕಾಲಿಗೆ ಚಪ್ಪಲಿ ಇಲ್ಲದೆ, ಹರಿದ ಬಟ್ಟೆಹಾಕಿಕೊಂಡು ಕೂಡಿಟ್ಟುಕೊಂಡಿದ್ದ ಗೌರವವನ್ನು ಮಾನ್ಯ ಸಂಸದರು ಹಾಳು ಮಾಡಿದ್ದಾರೆ.”

“ನಾನು ಮೊದಲೇ ಹೇಳಿದ್ದೆ. ನನಗೆ ಯಾವತ್ತೂ ಅವಮಾನ ಆಗುತ್ತೋ ಅವತ್ತು ನನ್ನ ಸಾವು ಎಂದು. ಆದರೆ ನಾನು ಯಾವ ತಪ್ಪು ಮಾಡದೆ ನನಗೆ ಸಾಕಷ್ಟು ಅವಮಾನ ಆಗುತ್ತಿದ್ದು ಇದನ್ನು ನನ್ನಿಂದ ಸಹಿಸಲು ಆಗುತ್ತಿಲ್ಲ.”

“ಸಿದ್ದರಾಮಯ್ಯನರು ದಲಿತ ವಿರೋಧಿ ಅಲ್ಲ ಎಂದು ನಾನು ಕೊಟ್ಟ ಒಂದೇ ಒಂದು ಹೇಳಿಕೆಯಿಂದ ನನಗೆ ಈ ಪರಿಸ್ಥಿತಿ ಬಂದಿದೆ. ನಾನು ಕಷ್ಟದಲ್ಲಿದ್ದ ಸಮಯದಲ್ಲಿ ನನಗೆ ಯಾರು ಸಹಾಯ ಮಾಡಿಲ್ಲ. ಈ ಸಮಾಜದಲ್ಲಿ ನಾನು ಯಾವತ್ತೂ ತಲೆ ಬಾಗಿಲ್ಲ. ಆದರೆ ನಾನು ಮಾಡದ ತಪ್ಪಿಂದ ಈ ತೀರ್ಮಾನ ತೆಗೆದುಕೊಂಡಿದ್ದೇನೆ.”

-ಹೀಗೆ ಪತ್ರ ಬರೆದಿರುವ ಸಂದೇಶ್ ಅವರು ತಮ್ಮ ಹಿತೈಷಿಗಳನ್ನು ನನೆದಿದ್ದಾರೆ. ಸಂದೇಶ್ ಅವರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಬಳಿಕ ಅನೇಕರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಮಾಡಿದ್ದು, ಸಂದೇಶ ಪರ ನಿಂತಿದ್ದಾರೆ. ದಲಿತ ಹಿರಿಯ ಹೋರಾಟಗಾರರು ಈ ಕುರಿತು ಮಾತನಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...