Homeಕರ್ನಾಟಕಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

- Advertisement -
- Advertisement -

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ ವೇಳೆ ಹಲಿಗೆ (ತಮಟೆ) ಬಡೆಯುವ ವಿಚಾರಕ್ಕೆ ದಲಿತರು ಮತ್ತು ಇತರ ಜಾತಿಗಳ ಜನರ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ಜೂನ್ 26ರಂದು ದಲಿತರ ಮನೆಗಳಿಗೆ ನುಗ್ಗಿ ಮಹಿಳೆಯರು, ಮಕ್ಕಳು ಸೇರಿದಂತೆ ಸಿಕ್ಕ ಸಿಕ್ಕವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ದೂರು ಪ್ರತಿದೂರು ದಾಖಲಾಗಿದೆ. ಭಾನುವಾರ (ಜೂ.28) ಬೋಚನಹಳ್ಳಿ ಗ್ರಾಮದ ಮಂಜುಳಾ ಮೈಲಪ್ಪ ಹಿರೇಮನಿ ಎಂಬುವರು ‘ನಮ್ಮವರ ಮೇಲೆ ಹಲ್ಲೆಯಾಗಿದೆ’ ಎಂದು 39 ಜನರ ವಿರುದ್ಧ ದೂರು ದಾಖಲಿಸಿದ್ದು, ಜಾತಿನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಮತ್ತೊಂದೆಡೆ ಗ್ರಾಮದ ಪರಸಪ್ಪ ಹುಲಕೋಟಿ ಎನ್ನುವರು ಕೂಡ ಪ್ರತಿದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದೂರುದಾರೆ ಮಂಜುಳಾ ಮೈಲಪ್ಪ ಹಿರೇಮನಿ,”ಜೂನ್ 25ರಂದು ಮೊಹರಂ ಮೆರವಣಿಗೆ ವೇಳೆ ನಮ್ಮ ದಲಿತ ಹುಡುಗರು ಹಲಿಗೆ ಬಡಿಯುತ್ತಿದ್ದರು. ಈ ವೇಳೆ ಇತರ ಜಾತಿಯ ಕೆಲವರು ಅವರನ್ನು ಗೇಲಿ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನಿಸಲು ನಮ್ಮ ಮಾವ ಹೋಗಿದ್ದರು. ಈ ವೇಳೆ ಅವರಿಗೆ ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಚಪ್ಪಲಿಯಿಂದ ಹೊಡೆಯಲು ಮುಂದಾಗಿದ್ದಾರೆ. ಇದನ್ನು ಗಮನಿಸಿದ ನಮ್ಮ ಮಾವನ ಮಗ ಸ್ಥಳಕ್ಕೆ ಹೋಗಿ ಪ್ರಶ್ನಿಸಿದ್ದಾರೆ. ಆಗ ವಾಗ್ವಾದ ನಡೆದು ನಮ್ಮ ಮಾವ ಮತ್ತು ಅವರ ಮಗನಿಗೆ ಚಪ್ಪಲಿಯಿಂದ ಥಳಿಸಿ, ಜಾತಿ ನಿಂದನೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಮುಂದುವರಿದು, “ಅಂದು ಇತರರು ಮಧ್ಯಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದರು. ಮರುದಿನ ನಮ್ಮ ಮಾವನವರು ಪರಸಪ್ಪ ಅವರ ಬಳಿ ತೆರಳಿ ಹಿಂದಿನ ದಿನ ನಡೆದ ಘಟನೆ ವಿವರಿಸಿದ್ದರು. ಆಗ ಪರಸಪ್ಪ ಮಾವನವರನ್ನು ಗದರಿಸಿ ಕಳಿಸಿದ್ದರು. ನಮ್ಮ ಮಾವನವರು ಏನೂ ಮಾಡಲಾಗದೆ ಸ್ಥಳದಿಂದ ವಾಪಾಸ್ ಬಂದಿದ್ದರು” ಎಂದು ವಿವರಿಸಿದ್ದಾರೆ.

“ಮನೆಗೆ ಬಂದ ಮಾವನವರು ಮತ್ತು ಅವರ ಮಕ್ಕಳು ಅವರವರ ಕೆಲಸ ಕಾರ್ಯಗಳಿಗೆ ತೆರಳಿದ್ದರು. ಈ ವೇಳೆ ಗುಂಪು ಕಟ್ಟಿಕೊಂಡು ಬಂದ ಎರಡ್ಮೂರು ಜಾತಿಯವರು, ನಮ್ಮ ಮನೆಗಳಿಗೆ ನುಗ್ಗಿ ಕೈಗೆ ಸಿಕ್ಕಿದ ವಸ್ತುಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮಹಿಳೆಯರು ಮಕ್ಕಳು ಎನ್ನದೆ ಎಲ್ಲರ ಮೇಲೆ ಹಲ್ಲೆ ಮಾಡಿದ್ದಾರೆ. ಕೊಡಲಿ ಹಿಡಿದುಕೊಂಡು ಬಂದು ಯಾರನ್ನಾದರೂ ಜೀವ ತೆಗೆಯಲು ಮುಂದಾಗಿದ್ದರು. ದಾಳಿಯ ವಿಡಿಯೋ ಮಾಡುತ್ತಿದ್ದ ನಮ್ಮ ಹುಡುಗರ ಮೊಬೈಲ್ ಫೋನ್‌ ಕಿತ್ತುಕೊಂಡು ಹೋಗಿದ್ದಾರೆ. ಮುಖ್ಯವಾಗಿ, ನಮಗೆ ಜಾತಿ ನಿಂದನೆ ಮಾಡಿದ್ದಾರೆ” ಎಂದು ಮಂಜುಳಾ ಗಂಭೀರ ಆರೋಪ ಮಾಡಿದ್ದಾರೆ.

“ನಮ್ಮ ಕೇರಿಗೆ ನುಗ್ಗಿ ಮನಸೋಇಚ್ಚೆ ಹಲ್ಲೆ ಮಾಡುತ್ತಿದ್ದಾಗ ನಾವು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದೆವು, ಜೊತೆಗೆ ಆಂಬ್ಯಲೆನ್ಸ್‌ಗೂ ಕರೆ ಮಾಡಿದೆವು. ಆಂಬ್ಯುಲೆನ್ಸ್ ಬಂದು ಗಾಯಗೊಂಡ ನಮ್ಮ ಜನರನ್ನು ಆಸ್ಪತ್ರೆಗೆ ಕರೆದೊಯ್ಯುವ ಕೆಲಸ ಮಾಡುತಿತ್ತು. ಆದರೂ, ಆರೋಪಿಗಳು ಹಲ್ಲೆ ನಡೆಸುವುದನ್ನು ಮುಂದುವರಿಸಿದ್ದರು. ಕೊನೆಗೆ ಪೊಲೀಸರು ಬಂದು ನಮಗೆ ರಕ್ಷಣೆ ಕೊಟ್ಟರು” ಎಂದು ತಿಳಿಸಿದ್ದಾರೆ.

“ನಾವು ಭಯದಲ್ಲಿ ಬದುಕುತ್ತಿದ್ದೇವೆ”

ಘಟನೆ ನಂತರ ನಾವು ಭಯದಲ್ಲಿ ಬದುಕುತ್ತಿದ್ದೇವೆ. ಗ್ರಾಮದಲ್ಲಿ ಪೊಲೀಸರನ್ನು ನಿಯೋಜಿಸಿದ್ದಾರೆ. ಆದರೂ, ಹಲ್ಲೆ ಮಾಡಿದವರು ದ್ವೇಷ ಇಟ್ಟುಕೊಂಡು ಮತ್ತೆ ಏನಾದರು ಮಾಡಿಯಾರು ಎಂಬ ಭಯ ನಮಗಿದೆ. ನಮ್ಮ ಹುಡುಗರು ಮನೆ ಬಿಟ್ಟು ಎಲ್ಲೂ ಹೊರಗಡೆ ಹೋಗದಂತೆ ಸೂಚಿಸಿದ್ದೇವೆ. ಇದು ಮೊದಲ ಘಟನೆಯಲ್ಲ, ನನಗೆ ಗೊತ್ತಿರುವ ಹಾಗೆ ಕಳೆದ ಹತ್ತು ವರ್ಷದಲ್ಲಿ ಹಲವಾರು ಬಾರಿ ನಮ್ಮ ಸಮುದಾಯದವರ ಮೇಲೆ ಹಲ್ಲೆಯಾಗಿದೆ. ಜಾತಿಯನ್ನೇ ಮುಂದಿಟ್ಟುಕೊಂಡು ಪದೇ ಪದೇ ಹಲ್ಲೆ ಮಾಡುವುದು, ನಿಂದಿಸುವುದು ಮಾಡುತ್ತಿದ್ದಾರೆ. ನಮಗೆ ರಕ್ಷಣೆ ಬೇಕು, ಇವುಗಳಿಂದ ಮುಕ್ತಿ ಬೇಕು ಎಂದು ಮಂಜುಳಾ ಅಳಲು ತೋಡಿಕೊಂಡಿದ್ದಾರೆ.

ಸಮುದಾಯಗಳ ನಡುವೆ ಪರಸ್ಪರ ಅನ್ಯೋನ್ಯತೆ ಮೂಡಲಿ- ಕರಿಯಪ್ಪ ಗುಡಿಮನಿ

ದಲಿತ ಸಮುದಾಯದ ಮೇಲೆ ನಡೆದ ದಾಳಿಯನ್ನು ಖಂಡಿಸಿ ದಲಿತ ಮತ್ತು ಇತರ ಜನಪರ ಸಂಘಟನೆಗಳು ಶೀಘ್ರದಲ್ಲೇ ಬೋಚನಹಳ್ಳಿ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳುವ ತೀರ್ಮಾನ ಮಾಡಿದ್ದೇವೆ. ಅದಕ್ಕೂ ಮೊದಲು, ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ ತಿಳಿಸಿದ್ದಾರೆ.

ಬೋಚನಹಳ್ಳಿಯಲ್ಲಿ ಎರಡು ತಳ ಸಮುದಾಯಗಳ ನಡುವೆ ಸಂಘರ್ಷ ನಡೆದಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಪರಸ್ಪರ ಅನ್ಯೋನ್ಯತೆಯಿಂದ ಇರಬೇಕಾದ ಈ ಸಮುದಾಯಗಳ ಜನರು, ಈ ರೀತಿ ಗಲಾಟೆ ಮಾಡಿಕೊಳ್ಳುವುದು ಸರಿಯಲ್ಲ. ಈ ಪ್ರಕರಣದಲ್ಲಿ ನಾವು ಯಾವುದೇ ಸಮುದಾಯವನ್ನು ಗುರಿಯಾಗಿಸುತ್ತಿಲ್ಲ. ನಮ್ಮ ಆಗ್ರಹ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂಬುವುದು ಮಾತ್ರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಜಾತಿ ದೌರ್ಜನ್ಯಗಳು ನಡೆಯುತ್ತಿವೆ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಜನ ಸಮುದಾಯಗಳ ನಡುವೆ ಪರಸ್ಪರ ಸೌಹಾರ್ದತೆ, ನಂಬಿಕೆ ಮೂಡಿಸುವ ಕೆಲಸ ಮಾಡಬೇಕು ಎಂದು ಕರಿಯಪ್ಪ ಆಗ್ರಹಿಸಿದ್ದಾರೆ.

ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ದಲಿತರ ಮೇಲಿನ ಹಲ್ಲೆಯನ್ನು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ, ಕರ್ನಾಟಕ ಜನಶಕ್ತಿ ವಿದ್ಯಾರ್ಥಿ ಸಂಘಟನೆ, ಮಹಿಳಾ ಮುನ್ನಡೆ ಹಾಗೂ ಪ್ರಗತಿಪರ ಚಿಂತಕರು ತೀವ್ರವಾಗಿ ಖಂಡಿಸಿದ್ದು, ಹೋರಾಟಕ್ಕೆ ಕರೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮಾದಿಗ ರಕ್ಷಣಾ ವೇದಿಕೆ, ಮೊಹರಂ ಹಬ್ಬದ ಸಂದರ್ಭದಲ್ಲಿ ಮಾದಿಗ ಸಮುದಾಯದ ಕಾಲೋನಿಗೆ ನುಗ್ಗಿ ಕೆಲ ಕಿಡಿಗೇಡಿಗಳು ದೌರ್ಜನ್ಯ ನಡೆಸಿರುವ ಘಟನೆ ಖಂಡನೀಯವಾಗಿದೆ. ಗ್ರಾಮದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕದಡುವಂತಹ ಜಾತಿವಾದಿ ಮನೋಭಾವದ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

“ಸಂವಿಧಾನ ನೀಡಿರುವ ಸಮಾನತೆ, ಗೌರವ ಮತ್ತು ಬದುಕುವ ಹಕ್ಕುಗಳನ್ನು ರಕ್ಷಿಸುವುದು ಸರ್ಕಾರದ ಹಾಗೂ ಆಡಳಿತದ ಜವಾಬ್ದಾರಿಯಾಗಿದೆ. ಯಾವುದೇ ಸಮುದಾಯದ ಮೇಲೆ ಅನ್ಯಾಯ ನಡೆದರೆ ಅದನ್ನು ಸಹಿಸಲಸಾಧ್ಯ. ಬೋಚನಹಳ್ಳಿ ಗ್ರಾಮದ ಮಾದಿಗ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ ಕಾನೂನುಬದ್ಧ ಹೋರಾಟ ಮುಂದುವರಿಸಲಾಗುವುದು” ಎಂದು ಸಂಘಟನೆಗಳು ಸ್ಪಷ್ಟಪಡಿಸಿವೆ.

ಗ್ರಾಮದಲ್ಲಿ ಶಾಶ್ವತ ಶಾಂತಿ, ಭದ್ರತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಮುಂದಿನ ಹೋರಾಟದ ರೂಪರೇಷೆಗಳ ಬಗ್ಗೆ ಸಂಘಟನೆಗಳ ಮುಖಂಡರು ಚರ್ಚಿಸಿದ್ದಾರೆ. ನೊಂದ ಸಮುದಾಯದ ಪರವಾಗಿ ಸಂಘಟಿತ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಕರಿಯಪ್ಪ ಗುಡಿಮನಿ ಅವರ ನೇತೃತ್ವದಲ್ಲಿ ಮುಂದಿನ ಹೋರಾಟ ರೂಪಿಸಲು ನಿರ್ಧರಿಸಲಾಗಿದೆ. ಗ್ರಾಮದ ನೊಂದ ಮಾದಿಗ ಸಮುದಾಯದ ನೂರಾರು ಜನರು ಈ ಸಂದರ್ಭದಲ್ಲಿ ಭಾಗವಹಿಸಿ ನ್ಯಾಯಕ್ಕಾಗಿ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮುದಕಪ್ಪ ಹೊಸಮನಿ, ಜಿಲ್ಲಾ ಉಪಾಧ್ಯಕ್ಷ ರಾಣದಪ್ಪ, ಮುಖಂಡರಾದ ನಿಂಗಪ್ಪ ಪೂಜಾರಿ, ಜಿಲ್ಲಾ ಖಜಾಂಚಿ ಗವಿಸಿದ್ದಪ್ಪ ಹಲಗಿ, ತಾಲೂಕು ಕಾರ್ಯದರ್ಶಿ ಯಂಕಪ್ಪ ಬಿಸರಳ್ಳಿ, ತಾಲೂಕು ಸಹ ಕಾರ್ಯದರ್ಶಿ ಹೊಸಳ್ಳಿ ನಾಗರಾಜ್, ಮುಖಂಡರಾದ ಕಾರಿಗನೂರು ಓಬಳೇಶ್, ಕರ್ನಾಟಕ ವಿದ್ಯಾರ್ಥಿ ಸಂಘಟನೆ ಪರವಾಗಿ ವಕೀಲರಾದ ಯಮನೂರಪ್ಪ ಈಳಿಗನೂರು, ಉಮೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...