Homeಮುಖಪುಟಉತ್ತರಪ್ರದೇಶ: ದಲಿತ ಬಾಲಕನಿಗೆ ಥಳಿತ; ಪ್ರಕರಣ ದಾಖಲು

ಉತ್ತರಪ್ರದೇಶ: ದಲಿತ ಬಾಲಕನಿಗೆ ಥಳಿತ; ಪ್ರಕರಣ ದಾಖಲು

- Advertisement -
- Advertisement -

ಉತ್ತರಪ್ರದೇಶದ ಸುಜನ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 14 ವರ್ಷದ ದಲಿತ ಬಾಲಕನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ ಮಾಡಿರುವ ಬಗ್ಗೆ ಬಾಲಕನ ಪೋಷಕರು ಆರೋಪಿಸಿದ್ದಾರೆ.

ಈ ಕುರಿತು ಸುಜನ್‌ಗಂಜ್ ಪೊಲೀಸ್‌ ಠಾಣಾಧಿಕಾರಿ ರೋಹಿತ್ ಕುಮಾರ್ ಮಿಶ್ರಾ ಪ್ರತಿಕ್ರಿಯಿಸಿದ್ದು,  ಬಾಲಕನ ತಂದೆ ಶುಕ್ರವಾರ ದೂರು ದಾಖಲಿಸಿದ್ದಾರೆ. ಗ್ರಾಮದ ಇಬ್ಬರು ತಮ್ಮ ಮಗನಿಗೆ ಥಳಿಸಿ ಮೂತ್ರ ಕುಡಿಯುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಿದ್ದಾರೆ. ನಾವು ಶುಕ್ರವಾರ ದೂರನ್ನು ಸ್ವೀಕರಿಸಿದ್ದೇವೆ ಮತ್ತು ಶನಿವಾರ ಎಫ್ಐಆರ್ ದಾಖಲಿಸಿದ್ದೇವೆ ಎಂದು ಹೇಳಿದ್ದಾರೆ.

ದೂರಿನ ಪ್ರಕಾರ ಪೊಲೀಸರು ಗ್ರಾಮದ ಇಬ್ಬರ ವಿರುದ್ಧ ಐಪಿಸಿಯ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 504 (ಉದ್ದೇಶಪೂರ್ವಕ ಅವಮಾನ), ಮತ್ತು 506 ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತ ಬಾಲಕನಿಗೆ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ತಮ್ಮ ಕುಟುಂಬದ ಬಾಲಕಿಗೆ ಅವಹೇಳನಕಾರಿಯಾಗಿ ಕಮೆಂಟ್‌ ಮಾಡಿದ್ದಾನೆಂದು  ಇಬ್ಬರು ವ್ಯಕ್ತಿಗಳು ಬಾಲಕನಿಗೆ ಥಳಿಸಿದ್ದಾರೆ. ಅಪ್ರಾಪ್ತ ವಯಸ್ಕನಿಗೆ ಮೂತ್ರವನ್ನು ಸೇವಿಸುವಂತೆ ಬಲವಂತಪಡಿಸಲಾಗಿದೆ ಎನ್ನುವುದು ಸುಳ್ಳು ಆರೋಪವಾಗಿದೆ ಎಂದು ಎಸ್‌ಎಚ್‌ಒ ಹೇಳಿದ್ದಾರೆ.

ಈ ಮಧ್ಯೆ ಆರೋಪಿಗಳಲ್ಲಿ ಓರ್ವ ಪ್ರತಿ ದೂರನ್ನು ದಾಖಲಿಸಿದ್ದು ತನ್ನ ಮಗಳ ಬಗ್ಗೆ ಬಾಲಕ ಮತ್ತು ಆತನ ಗೆಳೆಯರು ಕೆಟ್ಟದಾಗಿ ಕಮೆಂಟ್ ಮಾಡಿದ್ದಾರೆ ಎಂದು ಪ್ರತಿ ದೂರನ್ನು ದಾಖಲಿಸಿದ್ದಾರೆ.

ಇದನ್ನು ಓದಿ: ಟಿಂಡರ್‌ ಆ್ಯಪ್‌ನಲ್ಲಿ ಪರಿಚಯವಾಗಿದ್ದ ಯುವಕನ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...