Homeಮುಖಪುಟದಲಿತ ಬಾಲಕ  ಶಾಲಾ ಕೊಠಡಿಯಲ್ಲಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಕೊಲೆ ಆರೋಪಿಸಿದ ಕುಟುಂಬ

ದಲಿತ ಬಾಲಕ  ಶಾಲಾ ಕೊಠಡಿಯಲ್ಲಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಕೊಲೆ ಆರೋಪಿಸಿದ ಕುಟುಂಬ

- Advertisement -
- Advertisement -

ದಲಿತ ಬಾಲಕ  ಶಾಲಾ ತರಗತಿ ಕೊಠಡಿಯಲ್ಲಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ರಾಜಸ್ಥಾನ ಜೈಪುರದ ಬೆಹ್ರೋರ್‌ ಜಿಲ್ಲೆಯಲ್ಲಿ ನಡೆದಿದೆ.

ಪ್ರಾಗ್‌ಪುರ ಪ್ರದೇಶದ ಜವಾಹರ್ ನವೋದಯ ಶಾಲೆಯ 10ನೇ ತರಗತಿಯಲ್ಲಿ ಓದುತ್ತಿದ್ದ ದಲಿತ ಬಾಲಕನೊಬ್ಬ ತನ್ನ ತರಗತಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಪೊಲೀಸರ ಪ್ರಕಾರ, ಘಟನೆ ಬುಧವಾರ ಸಂಭವಿಸಿದೆ ಮತ್ತು ಬಾಲಕನ ಕುಟುಂಬವು ಬಾಲಕನ ದೇಹವನ್ನು ಸ್ವೀಕರಿಸಲು ನಿರಾಕರಿಸಿದೆ.

ಬಾಲಕನ ಕುಟುಂಬವು ಇಬ್ಬರು ಶಿಕ್ಷಕರನ್ನು ಬಂಧನಕ್ಕೆ ಆಗ್ರಹಿಸಿ ಪ್ತತಿಭಟನೆ ನಡೆಸಿದೆ. ಶಿಕ್ಷಕರು ಬಾಲಕನಿಗೆ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದಾರೆ ಎಂದು ಕುಟುಂಬ ಆರೋಪಿಸಿದೆ.

ಕೊಟ್‌ಪುಟಾಲಿ-ಬೆಹ್ರೋರ್‌ನ ಪೊಲೀಸ್ ವರಿಷ್ಠಾಧಿಕಾರಿ ರಂಜಿತಾ  ಶರ್ಮಾ ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ್ದು,ಇಬ್ಬರು ಶಿಕ್ಷಕರು ಬಾಲಕನಿಗೆ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬದವರು ಆರೋಪಿಸಿದ್ದಾರೆ. ಕುಟುಂಬಸ್ಥರು ಧರಣಿ ನಡೆಸುತ್ತಿರುವುದರಿಂದ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಲಿಲ್ಲ. ಅವರನ್ನು ಸಮಾಧಾನಪಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಆರೋಪಿ ಶಿಕ್ಷಕರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದುವರೆಗೆ ಯಾರ ಬಂಧನವೂ ಆಗಿಲ್ಲ ಎಂದು ವರದಿ ತಿಳಿಸಿದೆ.

ಇದನ್ನು ಓದಿ: ಇಶಾ ಫೌಂಡೇಶನ್‌ನ ಅಕ್ರಮಗಳ ವಿರುದ್ಧ ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ‘2024ರ ಯುನೆಸ್ಕೋ...

0
ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಪ್ಯಾಲೆಸ್ತೀನ್ ಪತ್ರಕರ್ತರನ್ನು 2024ರ ಯುನೆಸ್ಕೋ/ಗಿಲ್ಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಂತರಾಷ್ಟ್ರೀಯ ಮಾಧ್ಯಮ ವೃತ್ತಿಪರ ತೀರ್ಪುಗಾರರ ಶಿಫಾರಸಿನ ಮೇರೆಗೆ ವಿಜೇತರನ್ನು...