Homeಮುಖಪುಟದಲಿತ ಮದುಮಗ ಪೇಟ ಧರಿಸಿದರೆ ಸಹಿಸಲ್ಲ: ಮದುವೆ ಮೆರವಣಿಗೆಯಲ್ಲಿ ಕಲ್ಲು ತೂರಿದ ಮೇಲ್ಜಾತಿ ಜನರು

ದಲಿತ ಮದುಮಗ ಪೇಟ ಧರಿಸಿದರೆ ಸಹಿಸಲ್ಲ: ಮದುವೆ ಮೆರವಣಿಗೆಯಲ್ಲಿ ಕಲ್ಲು ತೂರಿದ ಮೇಲ್ಜಾತಿ ಜನರು

- Advertisement -
- Advertisement -

ಗುಜರಾತ್‌ನ ಅರವಲ್ಲಿ ಜಿಲ್ಲೆಯ ದಲಿತ ಕುಟುಂಬವೊಂದರ ಮದುವೆ ಮೆರವಣಿಗೆಯ ವೇಳೆ ಮೇಲ್ಜಾತಿ ಸಮುದಾಯದ ಜನರು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಮದುಮಗ ತಲೆಗೆ ಪೇಟ ಧರಿಸಿರುವುದಕ್ಕೆ ಮತ್ತು ಮೆರವಣಿಗೆಯಲ್ಲಿ ಡಿಜೆ ಬಳಸಿರುವುದಕ್ಕೆ ಆಕ್ರೋಶಗೊಂಡ ಮೇಲ್ಜಾತಿಯ ಗುಂಪು ದಲಿತರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದೆ.

ದಲಿತರು ‘ಸಫಾ’ (ಸಾಂಪ್ರದಾಯಿಕ ಪೇಟ) ಮತ್ತು ಡಿಜೆ ಬಳಸುವುದನ್ನ ಅಲ್ಲಿನ ಮೇಲ್ಜಾತಿಗಳು ಆಕ್ಷೇಪಿಸಿವೆ. ಇದನ್ನು ಮೀರಿದ ಕಾರಣಕ್ಕೆ ದಲಿತ ಕುಟುಂಬದ ಮದುವೆ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಂಗಳವಾರ ಸಂಜೆ ಬಯಾದ್ ಪಟ್ಟಣದ ಲಿಂಚ್ ಗ್ರಾಮದಲ್ಲಿ ಮೆರವಣಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ರಜಪೂತ ಸಮುದಾಯದ 9 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಂಬಲಿಯರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆರ್ ಎಂ ದಾಮರ್ ತಿಳಿಸಿದ್ದಾರೆ.

ಇದನ್ನೂ ಓದಿ: ’ಪ್ರಧಾನಿ ಒಬ್ಬ ದಂಗಾಬಾಜ್ ಮತ್ತು ರಾಕ್ಷಸ’: ಬಿಜೆಪಿ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ಮದುವೆ ಮೆರವಣಿಗೆ ಹಳ್ಳಿಗೆ ಪ್ರವೇಶಿಸಿದಾಗ ಲಿಂಚ್‌ ಗ್ರಾಮದ ಕೆಲವರು ಕಲ್ಲು ಎಸೆದಿದ್ದಾರೆ. ನಂತರ ಜಾತಿ ನಿಂದನೆ ಮಾಡಿದ್ದಾರೆ ಎಂದು ವಧುವಿನ ಸೋದರ ಸಂಬಂಧಿ ನೀಡಿದ ದೂರನ್ನು ಉಲ್ಲೇಖಿಸಿ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ದೂರುದಾರ ಮತ್ತು ಕುಟುಂಬದ ಇತರ ಸದಸ್ಯರು ಆರೋಪಿಗಳೊಂದಿಗೆ ವಾದಿಸಲು ಪ್ರಯತ್ನಿಸಿದರು. ಜೊತೆಗೆ ಕಲ್ಲು ತೂರಾಟವನ್ನು ನಿಲ್ಲಿಸುವಂತೆ ಒತ್ತಾಯಿಸಿದರು. ಆದರೆ ಆರೋಪಿಗಳಲ್ಲಿ ಒಬ್ಬ ವಧುವಿನ ಸಂಬಂಧಿಯ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಎಫ್‌ಐಆರ್ ನಲ್ಲಿ ಆರೋಪಿಸಲಾಗಿದೆ.

“ಮದುವೆ ಮೆರವಣಿಗೆಯ ಸಮಯದಲ್ಲಿ ಪೇಟ ಧರಿಸಬಾರದು ಮತ್ತು ಡಿಜೆ ಸಂಗೀತವನ್ನು ಬಳಸದಂತೆ ವರನ ಕುಟುಂಬ ಮತ್ತು ಇತರರಿಗೆ ಆರೋಪಿಗಳು ಎಚ್ಚರಿಕೆ ನೀಡಿದ್ದರು. ಜೊತೆಗೆ ಜೀವ ಬೆದರಿಕೆಗಳನ್ನೂ ಹಾಕಿದ್ದರು ಎಂದು ಆರೋಪಿಸಲಾಗಿದೆ.

ಐಪಿಸಿ ಅಡಿಯಲ್ಲಿ ಗಲಭೆ, ಹಲ್ಲೆ, ಕ್ರಿಮಿನಲ್ ಬೆದರಿಕೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ ಕಾಯ್ದೆ) ಸೆಕ್ಷನ್‌ಗಳ ಮೇಲೆ ಒಂಬತ್ತು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಈವರೆಗೆ ಯಾರನ್ನೂ ಬಂಧಿಸಿಲ್ಲ.


ಇದನ್ನೂ ಓದಿ: ದಿಶಾ ರವಿಯ ಜಾಮೀನು ಆದೇಶ: ದೇಶದ್ರೋಹದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...