Homeಕರ್ನಾಟಕ70 ವರ್ಷ ಕಳೆದರೂ ದಲಿತ ಮುಖ್ಯಮಂತ್ರಿ ಅಗಿಲ್ಲ - ಡಾ. ಜಿ. ಪರಮೇಶ್ವರ್

70 ವರ್ಷ ಕಳೆದರೂ ದಲಿತ ಮುಖ್ಯಮಂತ್ರಿ ಅಗಿಲ್ಲ – ಡಾ. ಜಿ. ಪರಮೇಶ್ವರ್

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಎಂದೋ ಆಗಬೇಕಿತ್ತು. ಆದರೆ ಸಮಾಜ ಮತ್ತು ರಾಜಕೀಯ ಮುಖಂಡರ ಮನಸ್ಥಿತಿ ಅದಕ್ಕೆ ಒಗ್ಗಿಕೊಂಡಿಲ್ಲದಿರುವುದನ್ನು ಇದು ಸೂಚಿಸುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.

- Advertisement -
- Advertisement -

ಸ್ವಾತಂತ್ರ್ಯ ಬಂದು 70 ವರ್ಷಗಳ ಬಳಿಕವಾದರೂ ರಾಜ್ಯದಲ್ಲಿ ದಲಿತರೊಬ್ಬರು ಮುಖ್ಯಮಂತ್ರಿಯಾಗಬೇಕಿತ್ತು. ಆದರೆ ನಾನು ಉಪಮುಖ್ಯಮಂತ್ರಿಯಾಗುವಂತೆ ಆಯಿತು. ಅಧಿಕಾರ ಹಂಚಿಕೆಕೊಂಡು ಸಮಾನತೆ ಕಾಣಬೇಕು ಎಂಬ ಮನಸ್ಥಿತಿ ಬಾರದೆ ಇರುವುದು ನೋವಿನ ಸಂಗತಿ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಮುಖಂಡ ಡಾ.ಜಿ.ಪರಮೇಶ್ವರ್ ಕಳವಳ ವ್ಯಕ್ತಪಡಿಸಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಸೂಲಗಿತ್ತಿ ನರಸಮ್ಮ ಪುತ್ರ ಪಾವಗಡ ಶ್ರೀರಾಮ್ ಅವರ ನಿವಾಸಕ್ಕೆ ಭೇಟಿ ನೀಡಿ ಕೆಲ ಕಾಲ ಅಲ್ಲಿ ಸೇರಿದ್ದವರೊಂದಿಗೆ ಮಾತುಕತೆ ನಡೆಸಿದರು. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಎಂದೋ ಆಗಬೇಕಿತ್ತು. ಆದರೆ ಸಮಾಜ ಮತ್ತು ರಾಜಕೀಯ ಮುಖಂಡರ ಮನಸ್ಥಿತಿ ಅದಕ್ಕೆ ಒಗ್ಗಿಕೊಂಡಿಲ್ಲದಿರುವುದನ್ನು ಇದು ಸೂಚಿಸುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದನ್ನೂ ಓದಿ: ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಿಲ್ಲ: ಸಿದ್ದರಾಮಯ್ಯ ಮಾತಿಗೆ ರಾಜಕೀಯ ಬಣ್ಣ ಬೇಡ – ಡಾ.ಜಿ.ಪರಮೇಶ್ವರ್

ಹೋರಾಟ ನನ್ನ ಸ್ವಂತಕ್ಕೆ ಮಾಡುತ್ತಿಲ್ಲ. ಬಾಲ್ಯದಿಂದಲೂ ನಾನು ಸಮಾಜದಲ್ಲಿ ಬದಲಾವಣೆಯ ಉದ್ದೇಶಕ್ಕಾಗಿ ಶ್ರಮಿಸುತ್ತಿದ್ದೇನೆ. ಸಮಾಜದಲ್ಲಿ ಜಾತಿಪದ್ದತಿ ಇದ್ದು ಇದು ಸಮಾಜಕ್ಕೆ ಅಂಟಿದ ರೋಗ. ಜಾತಿ ಪದ್ದತಿ ಮತ್ತು ಶೋಷಣೆ ವಿರುದ್ಧ ಹೋರಾಡುತ್ತಾ ಬಂದಿದ್ದೇನೆ. ದಲಿತರು ಸುಖವಾಗಿ ಅಂದರೆ ನಮ್ಮದಿಯಿಂದ ಬದುಕು ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಬೇಕು. ಆದರೆ ಅಂತಹ ಪರಿಸ್ಥಿತಿ ಇಂದಿಗೂ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಯಾವುದೇ ಚುನಾವಣೆಗಳು ಇಲ್ಲ. ಕಾಂಗ್ರೆಸ್ ಅಧಿಕಾರದಲ್ಲೂ ಇಲ್ಲ. ಆದರೆ ಡಾ.ಜಿ.ಪರಮೇಶ್ವರ್ ದಲಿತ ಮುಖ್ಯಮಂತ್ರಿ ಆಗಬೇಕಿತ್ತು. ಆದರೆ ನಾನು ಉಪಮುಖ್ಯಮಂತ್ರಿಯಾಗಿದ್ದು ಕಾಕತಾಳೀಯ ಎಂದು ಹೇಳಿರುವುದು ಮತ್ತೊಮ್ಮೆ ದಲಿತ ಮುಖ್ಯಮಂತ್ರಿಯ ವಿಚಾರವನ್ನು ಹರಿಯಬಿಟ್ಟಂತೆ ಆಗಿದೆ. ಪಾವಗಡ ಶ್ರೀರಾಂ ದಲಿತ ಮುಖ್ಯಮಂತ್ರಿಯಾಗಬೇಕು ಎಂದು ಹೋರಾಟ ಮಾಡಿದವರಲ್ಲಿ ಒಬ್ಬರು ಎಂದು ಪರಮೇಶ್ವರ್ ನೆನಪಿಸಿದರು.

ಸೂಲಗಿತ್ತಿ ನರಸಮ್ಮ ಶಾಲೆಗೆ ಹೋಗಲಿಲ್ಲ. ಅಕ್ಷರ ಕಲಿಯಲಿಲ್ಲ. ಆದರೂ ಸಾವಿರಾರು ಹೆರಿಗೆಗಳನ್ನು ಮಾಡಿಸಿ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ಅವರ ಕೊಡುಗೆ ಅವಿಸ್ಮರಣೀಯ. ವೈದ್ಯರೇ ಇಲ್ಲದ ಕಾಲದಲ್ಲಿ ಬರಿಗೈಯಲ್ಲಿ ಹೆರಿಗೆ ಮಾಡಿಸುವುದು ಅಂದರೆ ಕಷ್ಟದ ಕೆಲಸ. ಅಂಥಾ ಸಂದರ್ಭದಲ್ಲಿ ಹೆರಿಗೆ ಮಾಡಿಸಿ ಹೆಣ್ಣು ಮಕ್ಕಳ ಬಾಳಿನಲ್ಲಿ ನಗುವನ್ನು ಕಂಡವರು ನರಸಮ್ಮ ಎಂದು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪರಮೇಶ್ವರ ಅವರು ಉಪ ಮುಖ್ಯಮಂತ್ರಿ ಆಗಿದ್ದೇ ತಪ್ಪಾಗಿದೆ. ಯಾಕಂದ್ರೆ ಅವರು ಬ್ರಾಹ್ಮಣರ ಗುಲಾಮರಾಗಿ ಉಪಮುಖ್ಯಮಂತ್ರಿ ಆಗಿದ್ದಾಗಿ ವಿಧಾನ ಸೌಧ ದಲ್ಲಿ ಪೂಜೆ ಬ್ರಾಹ್ಮಣರ ನ್ನು ಕರೆಯಿಸಿ ಪೂಜೆ ಮಾಡಿ. ಬಾಬಾಸಾಹೆಬರಿಗೆ ಅಪಮಾನ್ ಮಾಡಿದ್ರು. ಬಾಬಾಸಾಹೆಬರು ತೋರಿಸಿದ್ದು ಭೌದ್ಧ ಧರ್ಮದ ದಾರಿ. ಕೊನೇಗೆ ಸರ್ಕಾರ ಬಿದ್ದಿದ್ದೆ ಒಳ್ಳೆದಾಯ್ತು. ನಮಗೆ ಬ್ರಾಹ್ಮಣರ ಗುಲಾಮರು ಮಂತ್ರಿಗಳು ಬೆಡಾ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...