ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ.ಜಿ.ಪರಮೇಶ್ವರ್ ಅವರ ತವರಿನಲ್ಲೇ ಇಂತಹ ಹೇಯ ಘಟನೆ ನಡೆದಿದೆ. ತುರುವೇಕೆರೆ ತಾಲೂಕು ಗೋಣಿತುಮಕೂರಿನಲ್ಲಿರುವ ಅರಸಮ್ಮ ದೇವಾಲಯಕ್ಕೆ, ದಲಿತ ಸಮುದಾಯದ ನವದಂಪತಿಗಳು ಶುಕ್ರವಾರ ದೇವರ ದರ್ಶನಕ್ಕೆ ಬಂದಿದ್ದರು. ಇದನ್ನು ಗಮನಿಸಿದ ಪ್ರಬಲಜಾತಿಗೆ ಸೇರಿದ ವ್ಯಕ್ತಿ ನಾರಾಯಣಪ್ಪ, … Continue reading ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ