Homeದಲಿತ್ ಫೈಲ್ಸ್ದಲಿತ ಚಾಲಕನನ್ನು ಅಪಹರಿಸಿ ಹಲ್ಲೆ, ಮೂತ್ರ ಕುಡಿಸಿದ ಆರೋಪ: ಮೂವರ ಬಂಧನ

ದಲಿತ ಚಾಲಕನನ್ನು ಅಪಹರಿಸಿ ಹಲ್ಲೆ, ಮೂತ್ರ ಕುಡಿಸಿದ ಆರೋಪ: ಮೂವರ ಬಂಧನ

- Advertisement -
- Advertisement -

ಜಾತಿ ದೌರ್ಜನ್ಯ ಮತ್ತು ಹಿಂಸಾಚಾರದ ಮತ್ತೊಂದು ಭಯಾನಕ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಸೋಮವಾರ (ಅ.20) ರಾತ್ರಿ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಗ್ವಾಲಿಯರ್‌ನ ದಲಿತ ಚಾಲಕನನ್ನು ಮೂವರು ಪ್ರಬಲ ಜಾತಿಯ ವ್ಯಕ್ತಿಗಳು ಅಪಹರಿಸಿ, ಹಲ್ಲೆ ಮಾಡಿ, ಬಲವಂತವಾಗಿ ಮೂತ್ರ ಕುಡಿಸಿರುವ ಆರೋಪ ಕೇಳಿ ಬಂದಿದೆ.

ಸಂತ್ರಸ್ತ ಆಸ್ಪತ್ರೆ ಸೇರುವಂತೆ ಮಾಡಿರುವ ಈ ಕ್ರೌರ್ಯವು, ಆಳವಾಗಿ ಬೇರೂರಿರುವ ಜಾತಿ ಹಿಂಸಾಚಾರ ಮತ್ತು ದಲಿತ ಕಾರ್ಮಿಕರ ಘನತೆ ಹಾಗೂ ರಕ್ಷಣೆಯನ್ನು ಕಾಪಾಡುವಲ್ಲಿ ಸರ್ಕಾರ ವಿಫಲವಾಗಿರುವುದನ್ನು ಎತ್ತಿ ತೋರಿಸುತ್ತದೆ.

ಆರೋಪಿಗಳು ಸಂತ್ರಸ್ತನನ್ನು ಗ್ವಾಲಿಯರ್‌ನ ದೀನದಯಾಳ್ ನಗರದಿಂದ ಅಪಹರಿಸಿ ಭಿಂಡ್‌ನ ಸುರಪುರ ಗ್ರಾಮಕ್ಕೆ ಕರೆದೊಯ್ದಿದ್ದರು. ಅಲ್ಲಿ ಹಿಗ್ಗಾಮುಗ್ಗಾ ಥಳಿಸಿ, ಬಲವಂತವಾಗಿ ಮದ್ಯ ಕುಡಿಸಿ, ಮೂತ್ರ ವಿಸರ್ಜನೆ ಮಾಡಿದ್ದಾರೆ. ನಂತರ ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆಬದಿಯಲ್ಲಿ ಎಸೆದು ಹೋಗಿದ್ದಾರೆ ಎಂದು ವರದಿಗಳು ಹೇಳಿವೆ.

ಸಂತ್ರಸ್ತ ಸಂಬಂಧಿಕರಿಗೆ ಕರೆ ಮಾಡಿ ನಡೆದ ವಿಷಯವನ್ನು ತಿಳಿಸಿದ್ದರು. ಅವರು ಆತನನ್ನು ಭಿಂಡ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೋನು ಬರುವಾ (22), ಅಲೋಕ್ ಪಾಠಕ್ (40) ಮತ್ತು ಛೋಟು ಓಜಾ (27) ಆರೋಪಿಗಳು. ಎಲ್ಲರೂ ಭಿಂಡ್ ಜಿಲ್ಲೆಯ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ರಾತ್ರಿಯೇ ಮೂವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಪಾಠಕ್ ಅವರ ಮಾಹಿತಿ ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ಹೇಳಿದೆ.

ಪೊಲೀಸರು ಆರೋಪಿಗಳ ಬಂಧನದ ಬಗ್ಗೆ ದೃಢಪಡಿಸಿದ್ದಾರೆ. ಆದರೆ, ಸಂತ್ರಸ್ತಗೆ ಮೂತ್ರ ಕುಡಿಸಲಾಗಿದೆ ಎಂಬುದನ್ನೂ ಒಳಗೊಂಡಂತೆ ಕೆಲವು ಆರೋಪಗಳು ಪರಿಶೀಲನೆಯಲ್ಲಿವೆ ಎಂದು ತಿಳಿಸಿದ್ದಾರೆ.

ಸಂತ್ರಸ್ತ ಆರೋಪಿಯ ವಾಹನವನ್ನು ಓಡಿಸಲು ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಲಾಗಿದೆ ಎಂಬುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಎಸ್ಪಿ ಪಾಠಕ್ ಹೇಳಿದ್ದಾರೆ. ವರದಿಗಳ ಪ್ರಕಾರ, ಆರೋಪಿಗಳಲ್ಲಿ ಒಬ್ಬನ ವಾಹನ ಚಾಲಕನಾಗಿ ದುಡಿಯುತ್ತಿದ್ದ ಸಂತ್ರಸ್ತ, ಇತ್ತೀಚೆಗೆ ಕೆಲಸ ತೊರೆದಿದ್ದರು.

ಹಲ್ಲೆ ಮತ್ತು ಅಪಹರಣಕ್ಕಾಗಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್‌ಗಳ ಅಡಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಧ್ಯಪ್ರದೇಶ: ಕೊಟ್ಟ ಹಣ ವಾಪಸ್ ಕೇಳಿದ ದಲಿತ ಮಹಿಳೆಗೆ ಸಾರ್ವಜನಿಕವಾಗಿ ಥಳಿಸಿದ ವ್ಯಕ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...