Homeಮುಖಪುಟಗುಜರಾತ್‌: ದಲಿತ ಇಂಜಿನಿಯರ್‌ಗೆ ಜಾತಿ ನಿಂದಿಸಿ ಥಳಿತ

ಗುಜರಾತ್‌: ದಲಿತ ಇಂಜಿನಿಯರ್‌ಗೆ ಜಾತಿ ನಿಂದಿಸಿ ಥಳಿತ

- Advertisement -
- Advertisement -

ಗುಜರಾತ್‌ನ ಬನಸ್ಕಾಂತ ಜಿಲ್ಲೆಯಲ್ಲಿ ಡೀಸೆಲ್ ಕಳ್ಳತನದ ಶಂಕೆಯಲ್ಲಿ ದಲಿತ ಸಮುದಾಯದ ಎಂಜಿನಿಯರ್‌ಗೆ ಐವರು ವ್ಯಕ್ತಿಗಳು ಥಳಿಸಿರುವ ಆಘಾತಕಾರಿ ಘಟನೆ ನಡೆದಿದೆ.

ಸಂತ್ರಸ್ತ ಇಂಜಿನಿಯರ್‌ ಅವರು ಪಾಲನ್‌ಪುರದ ಖಾಸಗಿ ಡೀಸೆಲ್‌ ಉತ್ಪಾದನಾ ಕಂಪೆನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.

25 ವರ್ಷದ ಇಂಜಿನಿಯರ್‌ ಮನೆಗೆ ಬಂದ ಅವರ ಸಹೋದ್ಯೋಗಿಗಳು ಹೋಟೆಲ್‌ನಲ್ಲಿ ಸಹೋದ್ಯೋಗಿಯ ಹುಟ್ಟುಹಬ್ಬದ ಪಾರ್ಟಿಯ ನೆಪದಲ್ಲಿ ಅವರನ್ನು ಕಾರಿನಲ್ಲಿ ಮನೆಯಿಂದ ಕರೆದುಕೊಂಡು ಹೋಗಿದ್ದರು.

ಬಳಿಕ ಕಾರನ್ನು ಸೇತುವೆಯೊಂದರ ಮೇಲೆ ನಿಲ್ಲಿಸಿ ಡೀಸೆಲ್ ಕಳ್ಳತನ ಮಾಡಿದ್ದಿ ಎಂದು ಆರೋಪಿಸಿ, ಸಹೋದ್ಯೋಗಿ ಭರತ್ ಠಾಕೂರ್ ಕಳ್ಳತನ ಮಾಡುತ್ತಿರುವುದನ್ನು ನೋಡಿದ್ದಾನೆಂದು ಹಲ್ಲೆ ನಡೆಸಿದ್ದಾರೆ. ಅಲ್ಲದೆ ಸಂತ್ರಸ್ತನಿಗೆ ದಲಿತ ಎಂಬ ಕಾರಣಕ್ಕೆ ಜಾತಿ ನಿಂದನೆ ಕೂಡ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯಲ್ಲಿ ಇಂಜಿನಿಯರ್‌ಗೆ ಮೂಳೆ ಮುರಿತ ಸೇರಿದಂತೆ ಹಲವು ಗಾಯಗಳಾಗಿವೆ. ಇದೀಗ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಕಾಂಗ್ರೆಸ್ ಎಸ್‌ಸಿ ಸೆಲ್ ಅಧ್ಯಕ್ಷ ಹಿತೇಂದ್ರ ಅವರು ಪ್ರತಿಕ್ರಿಯಿಸಿದ್ದು, ಗುಜರಾತ್‌ನಲ್ಲಿ ದಲಿತರ ಮೇಲಿನ ದೌರ್ಜನ್ಯ ಘಟನೆಗಳು ಹೆಚ್ಚುತ್ತಿವೆ ಮತ್ತು ಸಮಾಜ ವಿರೋಧಿಗಳಿಗೆ ಕಾನೂನಿನ ಭಯವಿಲ್ಲ ಎಂದು ಹೇಳಿದ್ದಾರೆ. ಈ ಘಟನೆ ನಡೆದು ಎರಡು ದಿನಗಳು ಕಳೆದಿವೆ. ಆದರೆ ಯಾವುದೇ ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ, ಇದು ದಲಿತರ ಬಗ್ಗೆ ಗುಜರಾತ್ ಬಿಜೆಪಿ ಸರ್ಕಾರ ಮತ್ತು ಗುಜರಾತ್ ಪೊಲೀಸರ ಕಾಳಜಿಯನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಗುಜರಾತ್‌ ಪೊಲೀಸರು, ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುತ್ತೇವೆ: ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...