Homeಮುಖಪುಟ'ದಲಿತರು' ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ 'ಹೊಸ ವಿಗ್ರಹ' ಪ್ರತಿಷ್ಠಾಪನೆ!

‘ದಲಿತರು’ ದೇವಾಲಯ ಪ್ರವೇಶಿಸಿದ್ದಕ್ಕೆ ಪ್ರತ್ಯೇಕ ಸ್ಥಳದಲ್ಲಿ ‘ಹೊಸ ವಿಗ್ರಹ’ ಪ್ರತಿಷ್ಠಾಪನೆ!

- Advertisement -
- Advertisement -

ತಿರುವಣ್ಣಾಮಲೈ ಜಿಲ್ಲೆಯ ತಂದರಂಪೇಟೆ ಬಳಿಯ ತೆನ್ಮುಡಿಯನೂರ್ ಗ್ರಾಮದ ನೂರಾರು ದಲಿತರು ಜನವರಿ 30, 2023ರಂದು ಮುತ್ತುಮಾರಿಯಮ್ಮನ್ ದೇವಸ್ಥಾನವನ್ನು ಪ್ರವೇಶಿಸಿದ್ದರು. 80 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ದಲಿತರಿಗೆ ಆ ದೇವಸ್ಥಾನಕ್ಕೆ ಪ್ರವೇಶಕ್ಕೆ ಮೊದಲ ಬಾರಿಗೆ ಅವಕಾಶವನ್ನು ನೀಡಲಾಗಿದ್ದು, ಇದು ತಮಿಳುನಾಡು ಸರಕಾರದ ಐತಿಹಾಸಕ ಕ್ರಮ ಎಂದು ಬಣ್ಣಿಸಲಾಗಿತ್ತು.

ಆದರೆ ಇದಾದ ಬಳಿಕ ಗ್ರಾಮದ ಉದಯರ್, ಆಗಮುದಯ್ಯರ್, ರೆಡ್ಡಿ, ನಾಯ್ಡು, ಚೆಟ್ಟಿಯಾರ್ ಮತ್ತು ವನ್ನಿಯಾರ್ ಸಮುದಾಯದ ಜನರು ದೇವಸ್ಥಾನಕ್ಕೆ ಬರುವುದನ್ನು ನಿಲ್ಲಿಸಿದ್ದಾರೆ. ದೇವಸ್ಥಾನದಿಂದ ಪ್ರತ್ಯೇಕ ಸ್ಥಳದಲ್ಲಿ ಹೊಸ ಮುತ್ತುಮಾರಿಯಮ್ಮನ್ ವಿಗ್ರಹವನ್ನು ಸ್ಥಾಪಿಸಿದ್ದಾರೆ. ಅವರು ಹೊಸ ವಿಗ್ರಹಕ್ಕೆ ಪೂಜೆಗಳನ್ನು ಸಹ ಮಾಡುತ್ತಿದ್ದಾರೆ, ಜನವರಿ 22, 2024ರಂದು ಹೊಸ ವಿಗ್ರಹದೊಂದಿಗೆ ಗ್ರಾಮದಲ್ಲಿ ಮೆರವಣಿಗೆಯನ್ನು ಕೂಡ ನಡೆಸಿದ್ದಾರೆ. ದಲಿತರು ದೇವಾಲಯಕ್ಕೆ ಪ್ರವೇಶಿಸಿದ ನಂತರ ಮೂಲ ದೇವಾಲಯಕ್ಕೆ ಇತರರು ಬರುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಮಾತನಾಡಿದ ದಲಿತ ಸಮುದಾಯಕ್ಕೆ ಸೇರಿದ ಕೆಲ ಜನರು, ಅವರು ಹೊಸ ದೇವಾಲಯವನ್ನು ನಿರ್ಮಿಸಲು ಸರ್ಕಾರಿ ಪೋರಂಬೋಕೆ ಭೂಮಿಯನ್ನು ಅತಿಕ್ರಮಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ತೆನ್ಮುಡಿಯನೂರಿನ ದಲಿತ ನಿವಾಸಿ ಸಿ ಮುರುಗನ್ ಅವರು ಈ ಬಗ್ಗೆ ಮಾತನಾಡಿದ್ದು, ಈ ದೇವಸ್ಥಾನ ಕೇವಲ ಪ್ರಬಲ ಜಾತಿಯ ಜನರಿಗೆ ಮಾತ್ರವಾಗಿದೆ. ಸಮುದಾಯ ಕೊಳದ ಬಳಿ ಹೊಸ ದೇವಸ್ಥಾನವನ್ನು ನಿರ್ಮಿಸಲು ಸವರ್ಣಿಯರು ಯೋಚಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೊಳದ ಬಳಿ ವಿಗ್ರಹದ ಮೆರವಣಿಗೆ ಮತ್ತು ನಂತರದ ಪೂಜೆಗಳು ಇದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಉದಯರ್ ಸಮುದಾಯದ ಮಾಜಿ ಪಂಚಾಯತ್ ಅಧ್ಯಕ್ಷರಾದ ನಲ್ಲತಂಬಿ ಅವರು ಹೊಸ ದೇವಾಲಯವನ್ನು ನಿರ್ಮಿಸಬಹುದು ಎಂಬ ಆರೋಪವನ್ನು ಅಲ್ಲಗಳೆದಿಲ್ಲ. ಹೊಸ ದೇವಾಲಯವನ್ನು ನಿರ್ಮಿಸಿದರೆ, ಅದನ್ನು ಪಟ್ಟಾ ಭೂಮಿಯಲ್ಲಿ ನಿರ್ಮಿಸಲಾಗುವುದು, ಪೋರಂಬೋಕೆ ಭೂಮಿಯಲ್ಲಿ ಅಲ್ಲ. ಮುತ್ತುಮಾರಿಯಮ್ಮನ ದೇವಸ್ಥಾನದಲ್ಲಿ ಪೂಜೆ ಮಾಡುವುದರ ವಿರುದ್ಧ ಗ್ರಾಮದಲ್ಲಿ ಯಾವುದೇ ಸಾಮಾಜಿಕ ನಿರ್ಬಂಧಗಳನ್ನು ವಿಧಿಸಲಾಗಿಲ್ಲ. ದಲಿತರ ಪ್ರವೇಶದ ನಂತರ ಕೆಲವರು ದೇವಸ್ಥಾನಕ್ಕೆ ಹೋಗಲು ನಿರಾಕರಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ತಂಡರಂಪೇಟೆ ತಹಶೀಲ್ದಾರ್ ಅಬ್ದುಲ್ ರಹೀಂ, ಸಮುದಾಯದ ಹೊಂಡದ ಬಳಿಯಿರುವ ಮೈದಾನವನ್ನು ಪೊಂಗಲ್ ಆಚರಣೆಗೆ ಮಾತ್ರ ತೆರವುಗೊಳಿಸಲಾಗಿದ್ದು, ಅಲ್ಲಿ ದೇವಸ್ಥಾನ ನಿರ್ಮಿಸುವ ಬಗ್ಗೆ ಯಾವುದೇ ಸುಳಿವು ಇಲ್ಲ ಎಂದು ಹೇಳಿದ್ದಾರೆ.

ಮುತ್ತುಮಾರಿಯಮ್ಮ ದೇವಸ್ಥಾನ:

80 ವರ್ಷ ಹಳೆಯದಾದ ಮುತ್ತುಮಾರಿಯಮ್ಮನ್ ದೇವಸ್ಥಾನವು ಕಳೆದ 30 ವರ್ಷಗಳಿಂದ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ನಿಯಂತ್ರಣದಲ್ಲಿದೆ. ಕಳೆದ ವರ್ಷ ಜನವರಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಜನರು ಮೊದಲ ಬಾರಿಗೆ ಪೊಲೀಸ್ ರಕ್ಷಣೆಯೊಂದಿಗೆ ದೇವಾಲಯಕ್ಕೆ ಪ್ರವೇಶಿಸಿದ್ದಾರೆ. ಇದನ್ನು ಖಂಡಿಸಿ ಉದಯರ್, ಆಗಮುದಯ್ಯರ್, ರೆಡ್ಡಿ, ನಾಯ್ಡು, ಚೆಟ್ಟಿಯಾರ್ ಮತ್ತು ವನ್ನಿಯಾರ್ ಸಮುದಾಯದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ನಂತರ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದೇವಸ್ಥಾನವನ್ನು ಸೀಲ್ ಮಾಡಲಾಗಿತ್ತು. ಸುತ್ತಲೂ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಸಂಭವನೀಯ ಜಾತಿ ಹಿಂಸೆ ಹಿನ್ನೆಲೆ ಸುಮಾರು 7 ತಿಂಗಳ ಕಾಲ ದೇವಾಲಯವನ್ನು ಮುಚ್ಚಲಾಗಿತ್ತು.

ಪೊಂಗಲ್ ಆಚರಣೆಯ ನಂತರ ದೇವಾಲಯದ 12 ದಿನಗಳ ಉತ್ಸವದಲ್ಲಿ ಭಾಗವಾಗಲು ಅವಕಾಶ ನೀಡುವಂತೆ ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಮನವಿ ಸಲ್ಲಿಸಿದ್ದೇವೆ. ಆದರೆ ಈ ವರ್ಷ ತಮ್ಮ ಮನವಿಯನ್ನು ನಿರ್ಲಕ್ಷಿಸಲಾಗಿದೆ ಎಂದು ಗ್ರಾಮದ ದಲಿತ ನಿವಾಸಿ ಸತ್ಯಶೀಲನ್ ಹೇಳಿದ್ದಾರೆ. ತೆನ್ಮುಡಿಯನೂರಿನಲ್ಲಿ ಪ್ರಬಲ ಜಾತಿಯ ಜನರು ಪೊಂಗಲ್ ನಂತರ ಹಬ್ಬಗಳನ್ನು 12 ದಿನಗಳ ಕಾಲ ಆಚರಿಸುತ್ತಾರೆ. ಗ್ರಾಮದಲ್ಲಿ 10ಕ್ಕಿಂತ ಹೆಚ್ಚು ಜಾತಿಗಳ ಜನರಿದ್ದಾರೆ. ಪ್ರತಿ ದಿನದ ಆಚರಣೆಯನ್ನು ಒಂದು ನಿರ್ದಿಷ್ಟ ಸಮುದಾಯಕ್ಕೆ ಮೀಸಲಿಡಲಾಗುತ್ತದೆ. ದಲಿತ ನಿವಾಸಿಗಳು ತಮ್ಮನ್ನು ಆಚರಣೆಯಲ್ಲಿ ಸೇರಿಸಬೇಕೆಂದು ದೀರ್ಘಕಾಲದಿಂದ ಬೇಡಿಕೆಯಿಟ್ಟರೂ ಏನೂ ಪ್ರಯೋಜನವಿಲ್ಲದಾಗಿದೆ.

ಆ ಪ್ರದೇಶದಲ್ಲಿ ದಲಿತರು ದೇವಸ್ಥಾನಕ್ಕೆ ಪ್ರವೇಶಿಸಿದ ಬಳಿಕ ದಲಿತರ ಮೇಲೆ ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರವನ್ನು ಹೇರುವುದರ ಜೊತೆಗೆ ಅವರ ಮೇಲೆ ಹಿಂಸಾಚಾರವನ್ನು ಕೂಡ ನಡೆಸಿದ್ದಾರೆ. ದಲಿತರ ಒಡೆತನದ ಸಣ್ಣ ಕೃಷಿ ಭೂಮಿಗಳಿಗೆ ನೀರು ಸರಬರಾಜು ಮಾಡುವುದನ್ನು ಸಹ ಸ್ಥಗಿತಗೊಳಿಸಲಾಗಿದೆ. ಹಳ್ಳಿಯ ಅನೇಕ ದಲಿತ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಗ್ರಾಮದಲ್ಲಿ ದಲಿತ ಒಂಟಿ ಮಹಿಳೆಯ ಮಾಲೀಕತ್ವದ ಅಂಗಡಿಯನ್ನು ಸುಟ್ಟು ಹಾಕಿ ದುಷ್ಕೃತ್ಯವನ್ನು ಮೆರೆಯಲಾತ್ತು.

ಇದನ್ನು ಓದಿ: ರಾಜಸ್ಥಾನ: ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಭುಗಿಲೆದ್ದ ಹಿಜಾಬ್‌ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....