Homeದಲಿತ್ ಫೈಲ್ಸ್ದೇವಸ್ಥಾನದಲ್ಲಿ ಡೋಲು ಬಾರಿಸದ್ದಕ್ಕೆ ದಲಿತ ಕುಟುಂಬಗಳಿಗೆ ಗ್ರಾಮದಿಂದಲೇ ಬಹಿಷ್ಕಾರ!

ದೇವಸ್ಥಾನದಲ್ಲಿ ಡೋಲು ಬಾರಿಸದ್ದಕ್ಕೆ ದಲಿತ ಕುಟುಂಬಗಳಿಗೆ ಗ್ರಾಮದಿಂದಲೇ ಬಹಿಷ್ಕಾರ!

- Advertisement -
- Advertisement -

ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಯೊಬ್ಬರು ಅನಾರೋಗ್ಯದ ಕಾರಣ ದೇವಾಲಯದಲ್ಲಿ ಡೋಲು ಬಾರಿಸಲಿಲ್ಲ ಎಂಬ ಕಾರಣಕ್ಕೆ, ಆತನ ಇಡೀ ಸಮುದಾಯವನ್ನು ಗ್ರಾಮದಿಂದ ಬಹಿಷ್ಕರಿಸಿರುವ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಡೆದಿದೆ.

ಭಾರತ-ಚೀನಾ ಗಡಿ ಭಾಗದ ನಿತಿ ಕಣಿವೆ ಪ್ರದೇಶದ ಸುಭಾಯ್ ಗ್ರಾಮದಲ್ಲಿ ಭಾನುವಾರ ಬಹಿಷ್ಕಾರ ಘೋಷಣೆ ಮಾಡಲಾಗಿದೆ.

ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಐದಕ್ಕೂ ಹೆಚ್ಚು ಕುಟುಂಬಗಳಿದ್ದು, ಅವರು ಗ್ರಾಮದಲ್ಲಿ ನಡೆಯುವ ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಹಬ್ಬಗಳಲ್ಲಿ ತಲೆಮಾರುಗಳಿಂದ ಡೋಲು ಬಾರಿಸುತ್ತಿದ್ದಾರೆ.

ಇತ್ತೀಚೆಗೆ ಪರಿಶಿಷ್ಟ ಜಾತಿಗೆ ಸೇರಿದ ಪುಷ್ಕರ್ ಲಾಲ್ ಎಂಬ ವ್ಯಕ್ತಿ ಅನಾರೋಗ್ಯದ ಕಾರಣ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಡ್ರಮ್ ಬಾರಿಸದ್ದಕ್ಕೆ, ಸ್ಥಳೀಯ ಪಂಚಾಯತ್ ಅವರ ಇಡೀ ಸಮುದಾಯಕ್ಕೆ ಸಾಮಾಜಿಕ ಬಹಿಷ್ಕಾರ ಹೇರಿದೆ.

ಪಂಚಾಯತ್ ಸದಸ್ಯರೊಬ್ಬರು ಬಹಿಷ್ಕಾರ ಘೋಷಿಸಿರುವ ಮತ್ತು ಆದೇಶವನ್ನು ಪಾಲಿಸದಿದ್ದರೆ ಇದೇ ರೀತಿಯ ಪರಿಣಾಮಗಳನ್ನು ಗ್ರಾಮಸ್ಥರು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿರುವ ವಿಡಿಯೋ ವೈರಲ್ ಆಗಿದೆ.

ಪಂಚಾಯತ್ ಆದೇಶದ ಪ್ರಕಾರ, ಎಸ್‌ಸಿ ಕುಟುಂಬಗಳು ಗ್ರಾಮದಲ್ಲಿರುವ ಅರಣ್ಯ ಮತ್ತು ಜಲಮೂಲಗಳನ್ನು ಬಳಸುವುದು, ಅಂಗಡಿಗಳಿಂದ ಅಗತ್ಯ ವಸ್ತುಗಳನ್ನು ಖರೀದಿಸುವುದು, ವಾಹನಗಳಲ್ಲಿ ಪ್ರಯಾಣಿಸುವುದು ಮತ್ತು ದೇವಸ್ಥಾನಗಳಿಗೆ ಭೇಟಿ ನೀಡುವುದನ್ನು ನಿರ್ಬಂಧಿಸಲಾಗಿದೆ.

ಈ ಸಂಬಂಧ ಸಂತ್ರಸ್ತ ವ್ಯಕ್ತಿಯ ಸಮುದಾಯದ ಕುಟುಂಬಗಳು ಜೋಶಿಮಠ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ರಾಮಕೃಷ್ಣ ಖಂಡ್ವಾಲ್ ಮತ್ತು ಯಶವೀರ್ ಸಿಂಗ್ ಎಂಬ ಇಬ್ಬರು ವ್ಯಕ್ತಿಗಳು ಬಿಹಿಷ್ಕಾರ ಆದೇಶದ ರುವಾರಿಗಳು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಡೆಹ್ರಾಡೂನ್‌: ಕ್ರಿಶ್ಚಿಯನ್ ಪ್ರಾರ್ಥನಾ ಸಭೆ ನಡೆಯುತ್ತಿದ್ದ ಮನೆ ಮೇಲೆ ಹಿಂದುತ್ವವಾದಿಗಳ ಗುಂಪಿನಿಂದ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...