Homeಕರ್ನಾಟಕಹೋರಾಟಗಾರ, ಬಂಡಾಯ ಲೇಖಕ ಡಾ.ಎಂ.ಚಿತ್ರಲಿಂಗಸ್ವಾಮಿ(54) ನಿಧನ

ಹೋರಾಟಗಾರ, ಬಂಡಾಯ ಲೇಖಕ ಡಾ.ಎಂ.ಚಿತ್ರಲಿಂಗಸ್ವಾಮಿ(54) ನಿಧನ

- Advertisement -
- Advertisement -

ದಲಿತ ಹಕ್ಕುಗಳ ಹೋರಾಟಗಾರ, ಬಂಡಾಯ ಲೇಖಕ ಡಾ. ಎಂ. ಚಿತ್ರಲಿಂಗಸ್ವಾಮಿ ಅವರು ಬಹುಅಂಗಾಗ ವೈಫಲ್ಯದಿಂದ ಮಂಗಳೂರಿನ ಯೆನೆಪೋಯ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ 10.45 ಕ್ಕೆ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 40 ವರ್ಷಗಳಿಂದ ದಲಿತ ಸಂಘರ್ಷ ಸಮಿತಿ ಹಾಗೂ ಸಾಹಿತ್ಯ ಮತ್ತು ಸಾಂಸ್ಕೃತಿಕ ವಲಯಗಳ ಜೊತೆಜೊತೆಗೆ ವಿವಿಧ ಸಾಮಾಜಿಕ ಚಳುವಳಿಗಳಲ್ಲಿ ಚಿತ್ರಲಿಂಗಸ್ವಾಮಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಅಪಾರ ಚಳುವಳಿ ಸಂಗಾತಿಗಳನ್ನು ಅಗಲಿದ್ದಾರೆ.

ಇದನ್ನೂ ಓದಿ: ಒಡಲಿನಾಳದಿಂದ ಬಂದ ಅರಿವಿನ ಆಸ್ಫೋಟವೇ; ದಲಿತ ಚಳುವಳಿ ಮತ್ತು ಅಂಬೇಡ್ಕರ್

ಸಂಜೆ 6.30ಕ್ಕೆ ಚಿತ್ರದುರ್ಗದ ಡಿ. ಸಿ. ಸರ್ಕಲ್‌‌ನಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಏರ್ಪಾಟು ಮಾಡಲಾಗಿದ್ದು, ಶ್ರದ್ದಾಂಜಲಿ ಸಭೆ ನಡೆಯಲಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನ ಬಂಗಾರಕ್ಕನ ಹಳ್ಳಿಯವರಾಗಿರುವ ಡಾ. ಚಿತ್ರಲಿಂಗಸ್ವಾಮಿ ವಿದ್ಯಾರ್ಥಿ ದಿನಗಳಿಂದಲೂ ದಲಿತ ಸಂಘರ್ಷ ಸಮಿತಿಯ ಸಕ್ರೀಯ ಕಾರ್ಯಕರ್ತರಾಗಿದ್ದಾರೆ. ಜಿಲ್ಲೆಯ ಪ್ರತಿ ಹೋರಾಟಗಳಲ್ಲಿ ಅವರು ಭಾಗಿಯಾಗುತ್ತಿದ್ದರು.

ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದ ಅವರು, ಅನುದಾನಿತ ಕಾಲೇಜಿನ ಇಂಗ್ಲಿಷ್‌ ಉಪನ್ಯಾಸಕರಾಗಿದ್ದರು. ಚಿತ್ರದುರ್ಗ ಜಿಲ್ಲಾ ಹಾಗೂ ರಾಜ್ಯ ಮಟ್ಟದ ದಲಿತ ಬಂಡಾಯ ಸಮಾವೇಶಗಳನ್ನು ಆಯೋಜಿಸುವಲ್ಲಿ ಹಾಗೂ ಚರ್ಚೆ, ಸಂವಾದಗಳಲ್ಲಿ ಅವರು ಕ್ರಿಯಾಶೀಲರಾಗಿದ್ದರು.

ಅವರ ನಿಧನಕ್ಕೆ ಚಿತ್ರದುರ್ಗ ಜಿಲ್ಲೆಯ ಅವರ ಚಳುವಳಿ ಒಡನಾಡಿಗಳು ಸಂತಾಪ ಸಲ್ಲಿಸಿದ್ದಾರೆ.

ಇದನ್ನೂ ಓದಿ: ದೌರ್ಜನ್ಯವನ್ನು ಕೊನೆಗಾಣಿಸಲು ಸ್ತ್ರೀವಾದೀ ಚಳುವಳಿ “ಸ್ತ್ರೀವಾದ: ಅಂಚಿನಿಂದ ಕೇಂದ್ರದೆಡೆಗೆ” ಪುಸ್ತಕದ ಅಧ್ಯಾಯವೊಂದರ ಆಯ್ದ ಭಾಗ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣಾ ಬಾಂಡ್‌ ಹಗರಣ: ಸುಪ್ರೀಂ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆಗೆ ಮನವಿ

0
ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪ್ರೇರಿತ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಶಂಕಿತ ಹಗರಣದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು...