Homeದಲಿತ್ ಫೈಲ್ಸ್ದಲಿತ್‌ ಫೈಲ್ಸ್‌‌: ಕೂಲಿ ಕೇಳಿದ ದಲಿತ ಬಾಲಕನಿಗೆ ಹಲ್ಲೆ ನಡೆಸಿ ಪಾದ ನೆಕ್ಕಿಸಿದ ದುಷ್ಕರ್ಮಿಗಳು

ದಲಿತ್‌ ಫೈಲ್ಸ್‌‌: ಕೂಲಿ ಕೇಳಿದ ದಲಿತ ಬಾಲಕನಿಗೆ ಹಲ್ಲೆ ನಡೆಸಿ ಪಾದ ನೆಕ್ಕಿಸಿದ ದುಷ್ಕರ್ಮಿಗಳು

- Advertisement -
- Advertisement -

ತನ್ನ ತಾಯಿ ಮಾಡಿರುವ ಕೆಲಸಕ್ಕೆ ಕೂಲಿ ಕೇಳಲು ಹೋಗಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕನ ಮೇಲೆ ಸವರ್ಣೀಯ ಸಮುದಾಯದ ದುಷ್ಕರ್ಮಿಗಳು ಹಲ್ಲೆ ನಡೆಸಿ, ವ್ಯಕ್ತಿಯೊಬ್ಬನ ಕಾಲು ನೆಕ್ಕುವಂತೆ ಮಾಡಿರುವ ಅಘಾತಕಾರಿ ಘಟನೆ ಉತ್ತರ ಪ್ರದೇಶದ ರಾಯ್‌ ಬರೇಲಿಯಲ್ಲಿ ನಡೆದಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ವಿಡಿಯೊದಲ್ಲಿ, ದಲಿತ ಬಾಲಕ ತಮ್ಮ ಕಿವಿಯ ಮೇಲೆ ಕೈಯಿಟ್ಟು ನೆಲದ ಮೇಲೆ ಕುಳಿತಿರುವುದು ಕಾಣುತ್ತದೆ. ಆರೋಪಿಗಳು ಬೈಕ್‌‌ ಮೇಲೆ ಕುಳಿತು ಸಂತ್ರಸ್ತ ಬಾಲಕ ಭಯದಿಂದ ನಡುಗುತ್ತಿರುವಾಗ ನಗುತ್ತಾ ವಿಕೃತ ಆನಂದಪಟ್ಟಿದ್ದಾರೆ. ಒಬ್ಬ ಆರೋಪಿಯು ಸಂತ್ರಸ್ತ ಬಾಲಕನಿಗೆ ನಿಂದಿಸುತ್ತಾ, “ಮತ್ತೆ ಇಂತಹ ತಪ್ಪು ಮಾಡುತ್ತಿಯಾ?” ಎಂದು ಕೇಳುತ್ತಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂತ್ರಸ್ತ ದಲಿತ ಬಾಲಕ ಗಾಂಜಾ ಮಾರಾಟ ಮಾಡಿದ ಆರೋಪವನ್ನು ಒಪ್ಪಿಕೊಳ್ಳುವಂತೆ ದುಷ್ಕರ್ಮಿಗಳು ವಿಡಿಯೊದಲ್ಲಿ ಒತ್ತಾಯಿಸುತ್ತಾರೆ. ಬಾಲಕ ದೌರ್ಜನ್ಯಕ್ಕೆ ಹೆದರಿ ಅದನ್ನು ಒಪ್ಪಿಕೊಂಡಂತೆ ಕಾಣುತ್ತದೆ.

ಹಲ್ಲೆಯ ವಿಡಿಯೋ ವೈರಲ್ ಆದ ನಂತರ ಪೊಲೀಸರು ಪ್ರಮುಖ ಆರೋಪಿ ಹೃತಿಕ್ ಸಿಂಗ್‌ ಸಹಿತ ಏಳು ಮಂದಿ ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಘಟನೆ ಏಪ್ರಿಲ್ 10 ರಂದು ನಡೆದಿದ್ದು, ಸಂತ್ರಸ್ತ ಬಾಲಕನ ಲಿಖಿತ ದೂರಿನ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣದ ಕೆಲವು ಆರೋಪಿಗಳು ಸವರ್ಣೀಯ ಸಮುದಾಯದವರಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

“ನೊಂದ ವಿದ್ಯಾರ್ಥಿಯು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನಂತರ ಆತನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಯುಪಿ ಪೊಲೀಸರು ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅದೇ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಅಶೋಕ್ ಸಿಂಗ್ ಹೇಳಿದ್ದಾರೆ.

ಸಂತ್ರಸ್ತ ಬಾಲಕ 10 ನೇ ತರಗತಿ ವಿದ್ಯಾರ್ಥಿಯಾಗಿದ್ದು, ತನ್ನ ವಿಧವೆಯಾದ ತಾಯಿಯೊಂದಿಗೆ ವಾಸಿಸುತ್ತಿದ್ದಾರೆ. ಸ್ಥಳೀಯ ವರದಿಗಳ ಪ್ರಕಾರ ಸಂತ್ರಸ್ತೆಯ ತಾಯಿ ಆರೋಪಿಗಳ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕನು ತಾಯಿ ಮಾಡಿರುವ ಕೆಲಸದ ಕೂಲಿ ನೀಡುವಂತೆ ಅವರ ಬಳಿ ಹೋಗಿ ಕೇಳಿದ್ದರು. ಇದರಿಂದ ಕುಪಿತಗೊಂಡ ಆರೋಪಿಗಳು ಬಾಲಕನನ್ನು ಹಿಡಿದು, ನಿಂದಿಸಿ, ಹಲ್ಲೆ ನಡೆಸಿ, ಆರೋಪಿಗಳಲ್ಲಿ ಒಬ್ಬನ ಪಾದಗಳನ್ನು ನೆಕ್ಕುವಂತೆ ಮಾಡಿದ್ದಾರೆ. ಆದರೆ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಈ ನಿರ್ದಿಷ್ಟ ಅಂಶಗಳನ್ನು ಉಲ್ಲೇಖಿಸಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...