Homeದಲಿತ್ ಫೈಲ್ಸ್ದಲಿತ್‌ ಫೈಲ್ಸ್: ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ?

ದಲಿತ್‌ ಫೈಲ್ಸ್: ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ?

ರಾಜಸ್ಥಾನದಲ್ಲಿ ಘಟನೆ ನಡೆದಿದ್ದು, ಜಿತೇಂದ್ರಪಾಲ್ ಕೊಲೆಯ ಸಂಬಂಧ #JusticeForJitendraMeghwal  ಹ್ಯಾಷ್‌ ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡಲಾಗುತ್ತಿದೆ.

- Advertisement -
- Advertisement -

ರಾಜಸ್ಥಾನದ ಪಾಲಿ ಜಿಲ್ಲೆಯ ಬರ್ವಾ ಗ್ರಾಮದಲ್ಲಿ ವಾಸಿಸುತ್ತಿದ್ದ ಕೋವಿಡ್‌‌ ಆರೋಗ್ಯ ಸಹಾಯಕ, ದಲಿತ ಸಮುದಾಯದ ಜಿತೇಂದ್ರಪಾಲ್ ಮೇಘವಾಲ್ ಅವರನ್ನು ಮಾರ್ಚ್ 15ರಂದು ಕೊಲ್ಲಲಾಗಿದೆ. “ಜಿತೇಂದ್ರಪಾಲ್‌ ನೋಡಲು ಚೆನ್ನಾಗಿದ್ದರು ಹಾಗೂ ಒಳ್ಳೆಯ ವ್ಯಕ್ತಿತ್ವವನ್ನು ಹೊಂದಿದ್ದರು. ಹೀಗಾಗಿ ಕೊಲೆಯಾಗಿದ್ದಾರೆ” ಎಂದು ಕುಟುಂಬ ಆರೋಪಿಸಿದೆ.

ಆರೋಪಿಗಳಾದ ಸೂರಜ್ ಸಿಂಗ್ ಮತ್ತು ರಮೇಶ್ ಸಿಂಗ್ ಅವರನ್ನು ಗುರುವಾರ ಬಾರ್ಮರ್ ಜಿಲ್ಲೆಯ ದುಡ್ವಾ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಜಿತೇಂದ್ರಪಾಲ್ ತಮ್ಮ ಹಲವಾರು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ‘ಕುನ್ವರ್ ಸಾ ಜೀತ್’ ಎಂಬ ಹೆಸರಿರುವ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಪೋಸ್ಟ್‌ಗಳಲ್ಲಿ ಅವರ ಮೀಸೆ ಗಮನ ಸೆಳೆದಿದೆ. “ನಾನು ಶ್ರೀಮಂತನಲ್ಲ, ಆದರೆ ಹೃದಯದಲ್ಲಿ ರಾಜನಾಗಿದ್ದೇನೆ” ಎಂದು ಅವರು ಟ್ಯಾಗ್‌ಲೈನ್‌ನಲ್ಲಿ ಬರೆದಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನನ್ನು ಗೋಡ್ವಾಡ್ ರಾಜ ಎಂದು ಕರೆದುಕೊಂಡಿದ್ದ ಆರೋಪಿ ಸೂರಜ್ ಸಿಂಗ್, 2020ರಲ್ಲಿ ಸಣ್ಣ ವಿಚಾರಕ್ಕೆ ಪಾಲ್ ಮೇಲೆ ಹಲ್ಲೆ ನಡೆಸಿದ್ದ ಎಂದು ಆತನ ಸಹೋದರ ಓಂಪ್ರಕಾಶ್ ಹೇಳಿದ್ದಾರೆ. “ನನ್ನ ಸಹೋದರ ನೋಡಲು ಚೆನ್ನಾಗಿ ಇದ್ದದ್ದರಿಂದ, ಒಳ್ಳೆಯ ವ್ಯಕ್ತಿತ್ವದವರಾಗಿದ್ದರಿಂದ ಸೂರಜ್‌ ಸಿಂಗ್ ಅಸೂಹೆ ಹೊಂದಿದ್ದ ಎಂಬುದು ಗ್ರಾಮಸ್ಥರಿಗೆ ತಿಳಿದಿತ್ತು” ಎಂದು ತಿಳಿಸಿದ್ದಾರೆ.

ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಪ್ರಕಾರ, ಜಿತೇಂದ್ರಪಾಲ್ ತನ್ನ ಸ್ನೇಹಿತ ಹರೀಶ್ ಕುಮಾರ್ ಜೊತೆ ಮಂಗಳವಾರ ಬಾಲಿಯಿಂದ ಬರ್ವಾಗೆ ಹೋಗುತ್ತಿದ್ದರು. ಜಿತೇಂದ್ರಪಾಲ್ ಮೋಟಾರ್ ಸೈಕಲ್ ನಲ್ಲಿ ಕುಮಾರ್ ಹಿಂದೆ ಕುಳಿತಿದ್ದರು.

ಬಾಲಿಯಿಂದ ಎರಡು ಕಿಲೋಮೀಟರ್ ದೂರದಲ್ಲಿ ಬೈಕಿನಲ್ಲಿ ಬಂದ ಇಬ್ಬರು ಯುವಕರು ನಿಲ್ಲಿಸಲು ಹೇಳಿದರು. ಹರೀಶ್ ವೇಗ ಕಡಿಮೆ ಮಾಡಿದಾಗ ಒಬ್ಬಾತ ಜಿತೇಂದ್ರಪಾಲ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ. ಗಾಯಗೊಂಡ ಅವರು ಕೆಳಗೆ ಬಿದ್ದಾಗ ಹೊಟ್ಟೆ ಮತ್ತು ಎದೆಗೆ ಮತ್ತೆ ನಾಲ್ಕು ಬಾರಿ ಇರಿದಿದ್ದಾರೆ. ಆಸ್ಪತ್ರೆ ತಲುಪುವ ಮುನ್ನವೇ ಮೃತಪಟ್ಟಿದ್ದಾರೆ.

ದಲಿತ ವ್ಯಕ್ತಿ ಒಳ್ಳೆಯ ಉಡುಪು ಧರಿಸಿದ್ದಕ್ಕೂ, ಆತ ಮೀಸೆ ಬಿಟ್ಟಿದ್ದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರಾಜಸ್ಥಾನ ಪೊಲೀಸರು ಹೇಳುತ್ತಿದ್ದಾರೆ. “2020ರಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದ ಪರಸ್ಪರ ಪೈಪೋಟಿಯ ಪರಿಣಾಮ ಈ ಕೊಲೆಯಾಗಿದೆ” ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ.

ಜಿತೇಂದ್ರಪಾಲ್ ಹತ್ಯೆಯ ನಂತರ ಅವರ ಕುಟುಂಬ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದರು. ಪೊಲೀಸರು ಹಾಗೂ ಆಡಳಿತ ವರ್ಗ ಮನವೊಲಿಸಿದ ನಂತರ ಶುಕ್ರವಾರ ಮರಣೋತ್ತರ ಪರೀಕ್ಷೆಗೆ ಒಪ್ಪಿದರು.

ಜೀತೆಂದ್ರಪಾಲ್‌ ಸಹೋದರನಿಗೆ ಸರ್ಕಾರಿ ನೌಕರಿ ಮತ್ತು ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರವನ್ನು ನೀಡುವುದಾಗಿ ಅಧಿಕಾರಿ ವರ್ಗ ಭರವಸೆ ನೀಡಿದೆ. ಬರ್ವಾ ಗ್ರಾಮದಲ್ಲಿ ಶಾಶ್ವತವಾದ ಪೊಲೀಸ್ ಚೌಕ್‌ ನಿರ್ಮಿಸಲು ಮುಖ್ಯಮಂತ್ರಿಯವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ.

ಬಾಲಿ ಶಾಸಕ ಪುಷ್ಪೇಂದ್ರ ಸಿಂಗ್ ರಾಣಾವತ್ ಮತ್ತು ಮಾರ್ವಾರ್ ಜಂಕ್ಷನ್ ಶಾಸಕ ಖುಶ್ವೀರ್ ಸಿಂಗ್ ಜೋಜಾವರ್ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಕುಟುಂಬದ ಸದಸ್ಯರಿಗೆ ಆರ್ಥಿಕ ನೆರವು ಹಾಗೂ ಸರ್ಕಾರಿ ಉದ್ಯೋಗ ಕಲ್ಪಿಸಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವ ಕುರಿತು ಮಾತನಾಡಿದ್ದರು.

ಜಿತೇಂದ್ರಪಾಲ್ ಕೊಲೆಯ ಸಂಬಂಧ #JusticeForJitendraMeghwal  ಹ್ಯಾಷ್‌ ಟ್ಯಾಗ್‌ನೊಂದಿಗೆ ಟ್ವೀಟ್‌ ಮಾಡಲಾಗುತ್ತಿದೆ.

“ಜಿತೇಂದ್ರಪಾಲ್ ಮೇಘವಾಲ್ ಅವರು ಮೀಸೆ ಬಿಟ್ಟ ಕಾರಣಕ್ಕೆ ಕೊಲೆಯಾಗಿದ್ದಾರೆ. ದಲಿತರ ಚೆನ್ನಾಗಿ ಕಾಣುವುದು ಸವರ್ಣಿಯ ಹಿಂದೂಗಳಿಗೆ ಯಾಕೆ ಚುಚ್ಚುತ್ತದೆ? ಈ ದೌರ್ಜನ್ಯ ನಿಲ್ಲುವುದು ಯಾವಾಗ?” ಎಂದು Ambedkarite India ಟ್ವಿಟರ್‌ ಖಾತೆಯಲ್ಲಿ ಪ್ರಶ್ನಿಸಲಾಗಿದೆ.

ಇದು 21ನೇ ಶತಮಾನದ ಭಾರತ. ರಾಜಸ್ಥಾನದ ಸರ್ಕಾರಿ ನೌಕರಿಯಲ್ಲಿದ್ದ ಜಿತೇಂದ್ರಪಾಲ್ ಮೇಘವಾಲ್ ಮೀಸೆಯನ್ನು ಬಿಟ್ಟಿದ್ದಕ್ಕಾಗಿ ಮತ್ತು ಉತ್ತಮ ಜೀವನಶೈಲಿಯನ್ನು ನಡೆಸಿದ್ದಕ್ಕಾಗಿ ಕೊಲೆಯಾಗಿದ್ದಾರೆ” ಎಂದು ಟ್ರೈಬಲ್ ಆರ್ಮಿ ಟ್ವಿಟರ್‌ ಖಾತೆ ಹೇಳಿದೆ.


ಇದನ್ನೂ ಓದಿರಿ: ದಲಿತ ಯುವತಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...