Homeಅಂಕಣಗಳುರೋಹಿತ್ ವೇಮುಲ ಫೈಲ್: ದಲಿತ ವಿದ್ಯಾರ್ಥಿಯನ್ನು ಬಲಿ ಪಡೆದ ಪ್ರಭುತ್ವ

ರೋಹಿತ್ ವೇಮುಲ ಫೈಲ್: ದಲಿತ ವಿದ್ಯಾರ್ಥಿಯನ್ನು ಬಲಿ ಪಡೆದ ಪ್ರಭುತ್ವ

- Advertisement -
- Advertisement -

ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವೂ ಕಳೆದಿರಲಿಲ್ಲ; ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ವಿಜ್ಞಾನಿ ಆಗಬೇಕೆಂದು ಕನಸು ಕಾಣುತ್ತಿದ್ದ ದಲಿತ ಸಂಶೋಧಕನೊಬ್ಬನನ್ನು ಈ ವ್ಯವಸ್ಥೆ ಬಲಿ ಪಡೆದುಕೊಂಡಿತು. ಜಾತಿ, ಧರ್ಮವೆಂಬ ಗೋಡೆಗಳನ್ನು ದಾಟಿ ಭಾರತದ ಯುವ ಸಮೂಹ ಕಣ್ಣೀರಿಟ್ಟಿತು. ರೋಹಿತ್ ವೇಮುಲನ ಕಡೆಯ ಪತ್ರ ಹೃದಯವಿದ್ದ ಪ್ರತಿಯೊಬ್ಬರ ಕರುಳನ್ನು ಕಿವುಚಿತ್ತು.

ರೋಹಿತ್ ವೇಮುಲ, ರಾಧಿಕ ವೇಮುಲ ಎಂಬ ದಲಿತೆಯ ಮೊದಲನೇ ಮಗ. ತನ್ನ ಜೀವಮಾನವಿಡೀ ಮಲತಾಯಿಯ ಮನೆಯಲ್ಲಿ ನೊಂದುಬೆಂದು ಕೇವಲ ಕೆಲಸದವಳಾಗಿ ಬದುಕಿದ ರಾಧಿಕಾ ವೇಮುಲ ಕಷ್ಟಪಟ್ಟು ತನ್ನೆರಡು ಮಕ್ಕಳ ವಿದ್ಯಾಭ್ಯಾಸ ಮಾಡಿಸಿದರು. ಇದರ ಪರಿಣಾಮವಾಗಿ ರೋಹಿತ್ ವೇಮುಲ ಕೇಂದ್ರೀಯ ವಿವಿಯಲ್ಲಿ ಸಂಶೋಧನಾರ್ಥಿಯಾಗಿ ವಿದ್ಯಾಭ್ಯಾಸ ಮಾಡಲು ತೊಡಗಿದನು. ವಿಶ್ವವಿದ್ಯಾಲಯಗಳನ್ನು ಪ್ರವೇಶಿಸುವ ಬೆರಳೆಣಿಕೆಯಷ್ಟು ದಲಿತ-ಬಹುಜನ ವಿದ್ಯಾರ್ಥಿಯ ಮೇಲೆ ಅಂಬೇಡ್ಕರರು ಪ್ರಭಾವ ಬೀರದೇ ಇರಲಾರರು. ರೋಹಿತ್ ವೇಮುಲನೂ ಅವರಿಂದ ಪ್ರಭಾವಕ್ಕೊಳಗಾದನು. ವಿ.ವಿಯಲ್ಲಿದ್ದ ’ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್’ನ (ಅಂಬೇಡ್ಕರ್ ವಿದ್ಯಾರ್ಥಿ ಸಂಘಟನೆ) ಸಕ್ರಿಯ ಕಾರ್ಯಕರ್ತನಾದನು. ಕೇವಲ ಎರಡು ವರ್ಷಗಳಲ್ಲಿ ಸಂಘಟನೆಯ ಪ್ರಮುಖ ತೀರ್ಮಾನಗಳನ್ನು ತೀರ್ಮಾನಿಸುವ ಸದಸ್ಯರಲ್ಲಿ ಒಬ್ಬನಾದನು. ಸದಾ ಮನುಷ್ಯ ವಿರೋಧಿ ವಿಚಾರಗಳ ವಿರುದ್ಧವಿದ್ದ ’ಎಎಸ್‌ಎ’ (ಅಂಬೇಡ್ಕರ್ ವಿದ್ಯಾರ್ಥಿ ಸಂಘಟನೆ) ಸಹಜವಾಗಿ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ’ಅಖಿಲ ಭಾರತ ವಿದ್ಯಾರ್ಥಿ ಪರಿಷತ್’ನೊಂದಿಗೆ (ಎಬಿವಿಪಿ) ಎದುರುಬದಿರಾಯಿತು. ’ಆರ್‌ಎಸ್‌ಎಸ್’ ವಿಚಾರದಲ್ಲಿ ನಂಬಿಕೆ ಹೊಂದಿದ್ದ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಆದ ಬಳಿಕವಂತೂ ಈ ಎರಡು ಭಿನ್ನ ಚಿಂತನೆಗಳುಳ್ಳ ಸಂಘಟನೆಗಳ ನಡುವೆ ಭಿನ್ನಾಭಿಪ್ರಾಯಗಳು ತಾರಕಕೇರಿದ್ದವು. ’ಎಬಿವಿಪಿ’ಯು ’ಹಿಂದೂರಾಷ್ಟ್ರ’ದ ಕನಸು ಕಾಣುತ್ತಿದ್ದರೆ ’ಎಎಸ್‌ಎ’ಯು ’ಜಾತಿರಹಿತ ಭಾರತ’ದ ಕನಸು ಕಾಣುತ್ತಿತ್ತು. ಇದರ ಭಾಗವಾಗಿ ಈ ಹಿಂದೆ ವಿಶ್ವವಿದ್ಯಾಲಯಗಳಲ್ಲಿ ಜಾತಿ ದಮನದಿಂದ ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿಗಳ ಪರವಾಗಿ ರೋಹಿತ್ ವೇಮುಲ ಮಾತನಾಡತೊಡಗಿದನು ಹಾಗೂ ವಿದ್ಯಾರ್ಥಿಗಳನ್ನೂ ಸಂಘಟಿಸಿದನು. ಮರಣ ದಂಡನೆ ಶಿಕ್ಷೆಯ ವಿರುದ್ಧ, ದನದ ಮಾಂಸ ಸೇವಿಸುವವರ ವಿರುದ್ಧ ನಡೆಯುತ್ತಿದ್ದ ಹಲ್ಲೆಗಳ ವಿರುದ್ಧ ’ಎಎಸ್‌ಎ’ ವೈಚಾರಿಕ ಹೋರಾಟ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದನು.

ಹೀಗೆ ಸಕ್ರಿಯವಾಗಿ ’ಎಎಸ್‌ಎ’ ಕ್ಯಾಂಪಸ್ಸಿನ ಒಳಗೆ ಕೆಲಸ ನಿರ್ವಹಿಸುತ್ತಿರುವುದನ್ನು ಸಹಿಸದಾದ ’ಎಬಿವಿಪಿ’ ವಿದ್ಯಾರ್ಥಿ ಮುಖಂಡ ಸುಶೀಲ್ ಕುಮಾರ್ 2015ರ ಆಗಸ್ಟ್ 3ರಂದು ಫೇಸ್‌ಬುಕ್‌ನಲ್ಲಿ ’ಅಂಬೇಡ್ಕರ್ ವಿದ್ಯಾರ್ಥಿ ಸಂಘಟನೆ’ಯ ಸದಸ್ಯರನ್ನು ’ಗೂಂಡಾಗಳು’ ಎಂದು ಕರೆದನು. ಇದರ ಬಗ್ಗೆ ಸ್ಪಷ್ಟನೆ ಕೇಳಿ ’ಎಎಸ್‌ಎ’ ಸದಸ್ಯರುಗಳೂ ಸಹ ಪೋಸ್ಟ್ ಮಾಡಿದರು. ಆಗ ದೆಹಲಿ ವಿಶ್ವವಿದ್ಯಾಲಯದಲ್ಲಿ ’ಎಬಿವಿಪಿ’ ನಡೆಸಿದ್ದ ಗಲಾಟೆಯನ್ನು ’ಎಎಸ್‌ಎ’ ವಿದ್ಯಾರ್ಥಿಗಳು ಖಂಡಿಸಿದ್ದರಿಂದ ತಾನು ಹಾಗೆ ಬರೆದಿರುವುದಾಗಿ ಸುಶೀಲ್ ಕುಮಾರ್ ಒಪ್ಪಿಕೊಂಡನು. ಆಗ ರೋಹಿತ್ ವೇಮುಲ ಸೇರಿದಂತೆ ಹಲವು ವಿದ್ಯಾರ್ಥಿಗಳು ಸುಶೀಲ್ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಲಾಯಿತು. ಅವರ ನಡುವೆ ಮಾತಿಗೆ ಮಾತು ಬೆಳೆದು ಕೊನೆಗೆ ಸುಶಿಲ್ ಕುಮಾರ್ ಕ್ಷಮೆ ಯಾಚಿಸಿದನು. ಇಲ್ಲಿಗೆ ಆ ಪ್ರಕರಣ ಅಂತ್ಯವಾಯಿತು ಎಂದುಕೊಳ್ಳುವಷ್ಟರಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರು ಮೂಗು ತೂರಿಸಲು ಆರಂಭಿಸಿದರು.

ಮರುದಿನ ಅಂದರೆ ಆಗಸ್ಟ್ 4ರಂದು ಸುಶೀಲ್ ಕುಮಾರ್ ಅಣ್ಣ ಹಾಗೂ ಬಿಜೆಪಿಯ ಯುವ ಮುಖಂಡ ಸೇರಿ ಸುಶೀಲ್‌ನನ್ನು ಒಂದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿಸಿದನು. ಈ ಮೊದಲಿಂದಲೇ ಸುಶೀಲನಿಗೆ ಅಪೆಂಡಿಸೈಟಿಸ್ ಕಾಯಿಲೆ ಇದ್ದ ಕಾರಣ ಆಪರೇಷನ್ ಮಾಡಿಸಲಾಯಿತು. ಆದರೆ ಬಿಜೆಪಿ ಮುಖಂಡರು ಇದೇ ನೆಪ ಇಟ್ಟುಕೊಂಡು ’ಎಎಸ್‌ಎ’ ವಿದ್ಯಾರ್ಥಿಗಳು ಸುಶೀಲ್ ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರ ಪರಿಣಾಮವಾಗಿ ಹೊಟ್ಟೆಗೆ ಪೆಟ್ಟಾಗಿದ್ದು ಆಪರೇಷನ್ ಮಾಡಿಸುವಷ್ಟು ಗಂಭೀರವಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ, ಪೊಲೀಸ್ ಠಾಣೆಗೆ ದೂರು ನೀಡಿದರು. ಈ ಸುಳ್ಳು ಆರೋಪದ ವಿರುದ್ಧ ’ಎಎಸ್‌ಎ’ ವಿದ್ಯಾರ್ಥಿಗಳು ಕೂಡಲೇ ಪ್ರತಿಭಟನೆ ನಡೆಸಿ ಸುಳ್ಳು ಕೇಸ್ ವಾಪಾಸು ಪಡೆಯಲು ಆಗ್ರಹಿಸಿದ್ದಾರೆ. ಅದೇ ದಿನ ಬಿಜೆಪಿ ಎಂಎಲ್‌ಸಿ ’ರಾಮಚಂದ್ರ ರಾವ್’ ತಮ್ಮ ಹಿಂಬಾಲಕರೊಟ್ಟಿಗೆ ವಿವಿಯೊಳಗೆ ನುಗ್ಗಿ “ಅಂಬೇಡ್ಕರ್ ವಿದ್ಯಾರ್ಥಿ ಸಂಘಟನೆಯ ’ದೇಶದ್ರೋಹಿ’ಗಳನ್ನು ವಿವಿಯಿಂದ ಹೊರಹಾಕಬೇಕು” ಎಂದು ಉಪಕುಲಪತಿ ಪ್ರೊ. ಆರ್.ಪಿ.ಶರ್ಮಾ ಅವರಿಗೆ ಧಮುಕಿ ಹಾಕಿ ದಾಂಧಲೆ ನಡೆಸಿದ್ದಾರೆ. ಇದರಿಂದಾಗಿ ಶರ್ಮಾ ಅವರು ಈ ಪ್ರಕರಣದ ಕುರಿತು ಪರಿಶೀಲಿಸಿ ವರದಿ ಸಲ್ಲಿಸುವಂತೆ ಮಾಜಿ ಉಪಕುಲಪತಿಗಳಾಗಿದ್ದ ಪ್ರೊ. ಅಲೋಕ್ ಪಾಂಡೆ ನೇತೃತ್ವದಲ್ಲಿ ಒಂದು ಸಮಿತಿಯನ್ನು ನೇಮಿಸಿದ್ದಾರೆ.

ಪಾಂಡೆಯವರ ಸಮಿತಿಯು ತನಿಖೆ ನಡೆಸಿ ಆಗಸ್ಟ್ 12ರಂದು ತನ್ನ ವರದಿ ನೀಡಿತು. ಅದರಲ್ಲಿ ಸ್ಪಷ್ಟವಾಗಿ ಸುಶೀಲ್ ಕುಮಾರ್ ಮೇಲೆ ಯಾವುದೇ ರೀತಿಯ ಹಲ್ಲೆ ಆಗಿಲ್ಲವೆಂದೂ, ಆತನನ್ನು ದಾಖಲಿಸಿದ್ದ ಆಸ್ಪತ್ರೆಯ ವೈದ್ಯೆ ಡಾ. ಅನುಪಮಾ ಅವರು ಇದಕ್ಕೆ ಸಾಕ್ಷಿ ನೀಡಿದ್ದಾರೆಂದೂ ಹೇಳಿ ’ಎಎಸ್‌ಎ’ ವಿದ್ಯಾರ್ಥಿಗಳ ವಿರುದ್ಧ ಬಿಜೆಪಿ-ಎಬಿವಿಪಿ ಮಾಡಿದ್ದ ಆರೋಪವನ್ನು ತಳ್ಳಿಹಾಕಿತು. ತಮ್ಮ ಸುಳ್ಳನ್ನು ಸಮರ್ಥಿಸಿಕೊಳ್ಳಲಾಗದೆ ಅವಮಾನಗೊಂಡ ಎಬಿವಿಪಿ-ಬಿಜೆಪಿ ಮುಖಂಡರು ಅಂದಿನ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಸಚಿವರಾಗಿದ್ದ ಆಂಧ್ರಪ್ರದೇಶದ ಬಂಡಾರು ದತ್ತಾತ್ರೇಯ ಅವರಿಗೆ ತಮ್ಮ ಅಳಲನ್ನು ತೋಡಿಕೊಂಡರು. ಇದಕ್ಕೆ ಸ್ಪಂದಿಸುವುದಾಗಿ ಭರವಸೆ ನೀಡಿದ ದತ್ತಾತ್ರೇಯ ’ಅಂಬೇಡ್ಕರ್ ವಿದ್ಯಾರ್ಥಿ ಸಂಘಟನೆಯ ದಲಿತ ವಿದ್ಯಾರ್ಥಿಗಳು ವಿವಿಯಲ್ಲಿ ನಡೆಸುತ್ತಿರುವ ತೀವ್ರಗಾಮಿ ಚಟುವಟಿಕೆಗಳಿಗೆ ಕೂಡಲೇ ಕಡಿವಾಣ ಹಾಕಬೇಕು’ ಎಂದು ಅಂದಿನ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಮಂತ್ರಿಯಾಗಿದ್ದ ಸ್ಮೃತಿ ಇರಾನಿಯವರಿಗೆ ಪತ್ರ ಬರೆದರು. ಇದಕ್ಕೆ ಕಾದು ಕುಳಿತವರಂತಿದ್ದ ಸ್ಮೃತಿ ಇರಾನಿಯವರು ವಿ.ವಿಯ ಅಧಿಕಾರಿಗಳಿಗೆ ಮೇಲಿಂದಮೇಲೆ ಐದು ಪತ್ರಗಳನ್ನು ಬರೆದರು. ಈ ಪತ್ರಗಳಲ್ಲಿ ವಿ.ವಿಯಲ್ಲಿನ ದೇಶದ್ರೋಹಿ ದಲಿತ ವಿದ್ಯಾರ್ಥಿಗಳನ್ನು ಕ್ಯಾಂಪಸ್ಸಿನಿಂದ ಹೊರಹಾಕಲು ಹಾಗೂ ಅವರ ವಿದ್ಯಾರ್ಥಿ ವೇತನವನ್ನು ತಡೆಹಿಡಿಯಲು ಒತ್ತಾಯಿಸಿದ್ದರು.

ಸ್ಮೃತಿ ಇರಾನಿ

ನರೇಂದ್ರ ಮೋದಿಯವರ ಸರ್ಕಾರದ ಮಂತ್ರಿಗಳಾದ ಬಂಡಾರು ದತ್ತಾತ್ರೇಯ ಹಾಗೂ ಸ್ಮೃತಿ ಇರಾನಿಯವರು ಈ ಪ್ರಕರಣಕ್ಕೆ ತಲೆಹಾಕಿದ್ದೇ ತಡ ಎಲ್ಲವೂ ಅದಲುಬದಲಾಯಿತು. ವಿ.ವಿಗೆ ಹೊಸದಾಗಿ ಉಪಕುಲಪತಿಯಾಗಿ ನೇಮಕಗೊಂಡಿದ್ದ. ಅಪ್ಪಾರಾವ್ ಪೊಡಿಲೆ, ಈ ಹಿಂದೆ ಪಾಂಡೆಯವರು ನೀಡಿದ್ದ ವರದಿಯನ್ನು ಏಕಾಏಕಿ ನಿರ್ಲಕ್ಷಿಸಿ ಹಿಂದಿನ ಸಮಿತಿಯನ್ನು ವಿಸರ್ಜಿಸಿ ಹೊಸ ಸಮಿತಿಯನ್ನು ರಚಿಸಿದರು. ಆ ಸಮಿತಿಯು ಯಾವ ತನಿಖೆಯನ್ನೂ ಕೈಗೊಳ್ಳದೆ ಸುಶೀಲ್ ಕುಮಾರ್ ಮೇಲೆ ಹಲ್ಲೆ ನಡೆದಿದ್ದು ನಿಜವೆಂದೂ ಐದು ದಲಿತ ವಿದ್ಯಾರ್ಥಿಗಳನ್ನು ವಿ.ವಿಯಿಂದಲೇ ಅಮಾನತುಗೊಳಿಸಬೇಕೆಂದು ಶಿಫಾರಸ್ಸು ಮಾಡಿತು. ಇದಾದ ಐದು ದಿನಕ್ಕೆ ರೋಹಿತ್ ವೇಮುಲ ಸೇರಿದಂತೆ ಐವರು ದಲಿತ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಯಿತು. ವಿಶ್ವವಿದ್ಯಾಲಯದ ಸಂಗತಿಗಳಿಗೆ ಬಿಜೆಪಿಯವರು ’ಕುತ್ಸಿತ’ ರಾಜಕೀಯ ತಂದಿದ್ದರ ಪರಿಣಾಮವಾಗಿ ದಲಿತೇತರ ವಿದ್ಯಾರ್ಥಿಗಳೆಲ್ಲಾ ಸೇರಿ ಪ್ರತಿಭಟನೆ ನಡೆಸಿದ್ದರಿಂದ, ಉಪಕುಲಪತಿಗಳು ಮತ್ತೊಂದು ತನಿಖೆ ನಡೆಸುವುದಾಗಿ ಒಪ್ಪಿಕೊಂಡು 2015 ಸೆಪ್ಟೆಂಬರ್ 11ರಂದು ಅಮಾನತ್ತನ್ನು ಹಿಂಪಡೆದರು.

ಈ ಪರಿಣಾಮವಾಗಿ ರಚನೆಯಾದ ಮತ್ತೊಂದು ಸಮಿತಿಯೂ ಸಹ ಕೇವಲ ಸುಶೀಲ್ ಕುಮಾರ್ ಮತ್ತು ಪೊಲೀಸರ ಹೇಳಿಕೆ ಪಡೆದು ವರದಿ ನೀಡಿತು. ಆದಾಗ್ಯೂ ಸುಶೀಲ್ ಮೇಲೆ ಹಲ್ಲೆಯಾಗಿಲ್ಲವೆಂದೇ ತಿಳಿಸಿತ್ತು. ಈ ಸಮಿತಿ ಯಾರ ಮೇಲೂ ಕ್ರಮ ಕೈಗೊಳ್ಳಲು ಶಿಫಾರಸ್ಸು ಮಾಡಿರಲಿಲ್ಲ ಎಂಬುದಿಲ್ಲಿ ಗಮನಾರ್ಹ. ಆದರೆ 2015 ಡಿಸೆಂಬರ್ 12ರಂದು ಇದ್ದಕ್ಕಿದ್ದಂತೆ ವಿವಿ ಉಪಕುಲಪತಿ ಅಪ್ಪಾರಾವ್ ’ಎಎಸ್‌ಎ’ನ ಐದು ಜನ ದಲಿತ ಸಂಶೋಧನಾ ವಿದ್ಯಾರ್ಥಿಗಳನ್ನು ವಿ.ವಿಯ ವಿದ್ಯಾರ್ಥಿನಿಲಯದಿಂದ ಅಮಾನತುಗೊಳಿಸಿ ಆದೇಶಿಸಿದರು. ಜೊತೆಗೆ ಅವರ ವಿದ್ಯಾರ್ಥಿ ವೇತನವನ್ನೂ ನಿಲ್ಲಿಸಿದರು. ಸುಳ್ಳು ದೂರು ನೀಡಿದ್ದ ’ಎಬಿವಿಪಿ’ ವಿದ್ಯಾರ್ಥಿ ಸುಶೀಲ್ ಕುಮಾರನ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಇದರಿಂದಾಗಿ, ರೋಹಿತ್ ವೇಮುಲ ತನ್ನ ರೂಮಿನಲ್ಲಿದ್ದ ಅಂಬೇಡ್ಕರ್ ಅವರ ಫೋಟೋ ಹಿಡಿದು ತನ್ನ ನಾಲ್ವರು ಸ್ನೇಹಿತರೊಡನೆ ಹೊರಬಂದಿದ್ದಾನೆ. ಆದರೆ ಈ ಅನ್ಯಾಯದ ವಿರುದ್ಧ ಹೋರಾಡುವ ಸಲುವಾಗಿ ಕ್ಯಾಂಪಸ್ಸಿನೊಳಗೆ ’ವೆಲಿವಾಡ’ (ಭಾರತದ ಹಿಂದೂ-ಮೇಲ್ಜಾತಿಗಳು ದಲಿತರ ಪ್ರತ್ಯೇಕ ವಾಸನೆಲೆಗೆ ನೀಡಿರುವ ಹೆಸರು) ಟೆಂಟ್ ಹಾಕಿಕೊಂಡು ಅಲ್ಲಿಯೇ ಪ್ರತಿಭಟನೆಗೆ ಕುಳಿತಿದ್ದಾರೆ. ಬರೋಬ್ಬರಿ ಒಂದು ತಿಂಗಳವರೆಗೆ ಈ ಐದು ವಿದ್ಯಾರ್ಥಿಗಳು ವೆಲಿವಾಡದಲ್ಲಿಯೇ ತಂಗುತ್ತಾ ನ್ಯಾಯಕ್ಕಾಗಿ ಹೋರಾಡಿದ್ದಾರೆ. ಆದರೆ ಬಿಜೆಪಿಯ ವಾಮಮುಷ್ಟಿಯಲ್ಲಿದ್ದ ವಿ.ವಿ ಆಡಳಿತವು ಅಲ್ಲಾಡಲಿಲ್ಲ. ಇದರಿಂದ ತೀವ್ರ ಹಣದ ಮುಗ್ಗಟ್ಟು ಎದುರಿಸುತ್ತಿದ್ದ ರೋಹಿತ್ ವೇಮುಲ ಎದೆಗುಂದಿದ್ದಾನೆ. ಕಾರ್ಲ್ ಸಗಾನನಂತೆ ವಿಜ್ಞಾನಿಯಾಗಬೇಕು ಎಂದುಕೊಂಡಿದ್ದ ರೋಹಿತ್ ವೇಮುಲ ’ಜನವರಿ 17’ರಂದು ಸ್ನೇಹಿತನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಅಲ್ಲಿಗೆ ಭವಿಷ್ಯದ ದಲಿತ ವಿಜ್ಞಾನಿಯೊಬ್ಬನನ್ನು ಆರೆಸ್ಸೆಸ್-ಬಿಜೆಪಿ-ಎಬಿವಿಪಿ ಮೇಲ್ಜಾತಿ ಹಾಗೂ ದಲಿತ ವಿರೋಧಿ ರಾಜಕಾರಣವು ಬಲಿ ತೆಗೆದುಕೊಂಡಿತು. ಈ ಸಾಂಸ್ಥಿಕ ಕೊಲೆಯ ವಿರುದ್ಧ ತಪ್ಪಿಸಿಕೊಳ್ಳಲು ರೋಹಿತನನ್ನು ದಲಿತನೇ ಅಲ್ಲವೆಂದು, ಉಗ್ರಗಾಮಿ ಎಂದು ಬಿಜೆಪಿ ಹಾಗೂ ಬಿಜೆಪಿ ಐಟಿ ಸೆಲ್ ಪ್ರಚಾರ ಮಾಡತೊಡಗಿದವು. ರೋಹಿತ್ ಕುಟುಂಬಕ್ಕೆ ಮಾನಸಿಕ ಹಿಂಸೆ ನೀಡಲಾಯಿತು. ದೇಶಾದ್ಯಂತ ವಿದ್ಯಾರ್ಥಿಗಳು ರೋಹಿತ್ ವೇಮುಲನಿಗೆ ನ್ಯಾಯ ಸಿಗಬೇಕೆಂದು ಕೇಂದ್ರ ಮಂತ್ರಿಗಳನ್ನು ಬಂಧಿಸಬೇಕೆಂದು ಪ್ರತಿಭಟಿಸಿದರು. ಆದರೆ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರಕ್ಕೆ ಈ ಕೂಗು ತಟ್ಟಲೇ ಇಲ್ಲ.

ಸುಶೀಲ್ ಕುಮಾರ್

ತನ್ನ ಮೇಲೆ ಹಾಗೂ ತನ್ನವರ ಮೇಲೆ ನಡೆವ ದೌರ್ಜನ್ಯಗಳನ್ನು ಬಹಳ ಬೇಗ ಮರೆಯುವ ದಲಿತ ಸಮುದಾಯವು ರೋಹಿತ್ ವೇಮುಲನ ಸಾಂಸ್ಥಿಕ ಕೊಲೆಯನ್ನೂ ಮರೆಯಿತು. ಬೇರೆ ಸಮುದಾಯಗಳ ಮಾತಂತೂ ವ್ಯರ್ಥವೇ ಸರಿ. ದಲಿತ ವಿದ್ಯಾರ್ಥಿಯನ್ನು ಬಲಿ ಪಡೆದ ಬಿಜೆಪಿಗೆ 2019ನೇ ಇಸವಿಯಲ್ಲಿ ಶೇ.34ರಷ್ಟು (2014ರಲ್ಲಿ ಶೇ.24) ಓಟು ನೀಡುವುದರ ಮೂಲಕ ಮತ್ತೆ ಬಂಡಾರು ದತ್ತಾತ್ರೇಯ, ಸ್ಮೃತಿ ಇರಾನಿ, ಸುಶೀಲ್ ಕುಮಾರ್, ರಾಮಚಂದ್ರ ರಾವ್ ಅವರ ಪಕ್ಷವನ್ನೇ ಗೆಲ್ಲಿಸಿತು.


ಇದನ್ನೂ ಓದಿ: ಮಾತು ಮರೆತ ಭಾರತ; ಖೈರ್ಲಾಂಜಿ ಫೈಲ್: ಭಾರತದ ಭೀಕರ ಹತ್ಯಾಕಾಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...