Homeದಲಿತ್ ಫೈಲ್ಸ್ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

- Advertisement -
- Advertisement -

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.

ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ ಕರಸುವಾ ಗ್ರಾಮದ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 10 ವರ್ಷದ ದಲಿತ ಬಾಲಕಿಗೆ ಶಾಲಾ ಶೌಚಾಲಯ ತೊಳೆಯುವಂತೆ ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ ದಾಖಲಾತಿಯಿಂದ ಆಕೆಯ ಹೆಸರನ್ನು ತೆಗೆದು ಹಾಕುವುದಾಗಿ ಬೆದರಿಸಿದ್ದಾರೆ. ಆದರೂ, ಅನಾರೋಗ್ಯ ಮತ್ತು ತಂದೆಯ ಆಕ್ಷೇಪಣೆಯನ್ನು ಉಲ್ಲೇಖಿಸಿ ಬಾಲಕಿ ಶೌಚಾಲಯ ತೊಳೆಯಲು ನಿರಾಕರಿಸಿದ್ದಾಳೆ. ಇದರಿಂದ ಕುಪಿತಗೊಂಡ ಶಿಕ್ಷಕಿ, ಆಕೆಗೆ ಥಳಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಶಿಕ್ಷಕಿಯ ದೌರ್ಜನ್ಯದ ಕುರಿತು ಬಾಲಕಿ ಹೇಳಿಕೊಂಡ ವಿಡಿಯೋವನ್ನು ಸ್ಥಳೀಯರೊಬ್ಬರು ಇಂಟರ್‌ನೆಟ್‌ನಲ್ಲಿ ಅಪ್ಲೋಡ್ ಮಾಡಿದ್ದರು. ಇದನ್ನು ಗಮನಿಸಿದ ಗ್ರಾಮಸ್ಥರು ಶಿಕ್ಷಕಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಈ ಕುರಿತು ಪೊಲೀಸರಿಗೆ ಮಾಹಿತಿ ದೊರೆತಿದೆ ಎಂದು ವರದಿ ಉಲ್ಲೇಖಿಸಿದೆ.

“ಶಿಕ್ಷಕಿ ತನಗೆ ಶೌಚಾಲಯವನ್ನು ಸ್ವಚ್ಛಗೊಳಿಸಲು ಮತ್ತು ಬಕೆಟ್‌ಗಳಿಗೆ ನೀರು ತುಂಬಿಸಲು ಹೇಳಿದ್ದರು. ತಾನು ಅದಕ್ಕೆ ನಿರಾಕರಿಸಿದಾಗ ಆಕೆ ಕೋಪಗೊಂಡು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಶಿಕ್ಷಕರು ಶಾಲೆಯ ಇತರ ಮಕ್ಕಳಿಗೂ ನಿಯಮಿತವಾಗಿ ಪೀಠೋಪಕರಣಗಳನ್ನು ಸ್ವಚ್ಛಗೊಳಿಸಲು ಮತ್ತು ಇತರ ಕೆಲಸಗಳನ್ನು ಮಾಡಲು ಒತ್ತಾಯಿಸುತ್ತಾರೆ. ಕೆಲವೊಮ್ಮೆ ಶಿಕ್ಷಕರು ವಿದ್ಯಾರ್ಥಿಗಳಿಂದ ತಮ್ಮ ಕಾಲುಗಳನ್ನು ಒತ್ತಿಸಿಕೊಳ್ಳುತ್ತಾರೆ (ಮಸಾಜ್ ಮಾಡಿಸಿಕೊಳ್ಳುತ್ತಾರೆ)” ಎಂದು ವಿದ್ಯಾರ್ಥಿನಿ ಹೇಳಿರುವುದು ವಿಡಿಯೋ ಕ್ಲಿಪ್‌ನಲ್ಲಿ ಇದೆ ಎಂದು ವರದಿ ತಿಳಿಸಿದೆ.

ಮಗಳ ಮೇಲಿನ ದೌರ್ಜನ್ಯದ ಕುರಿತು, ದಿನಗೂಲಿ ನೌಕರರಾದ ಬಾಲಕಿಯ ತಂದೆ ಜೋಗಿಂದರ್ ಸಿಂಗ್ ಶಿಕ್ಷಕಿಯನ್ನು ಪ್ರಶ್ನಿಸಿದಾಗ, ಆಕೆ ತನ್ನ ಸಹೋದರನಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಸಹೋದರ ಶಾಲೆಯ ಆವರಣದಲ್ಲೇ ಜೋಗಿಂದರ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

“ಶಿಕ್ಷಕಿ ನನ್ನ ಮಗಳಿಗೆ ಥಳಿಸಿದರು, ಆಕೆಯ ಸಹೋದರ ನನಗೆ ಥಳಿಸಿದ. ಆದ್ದರಿಂದ ನಾನು ಪೊಲೀಸರಿಗೆ ದೂರು ನೀಡಿದೆ. ನಂತರ ಗ್ರಾಮದ ಕೆಲ ಹಿರಿಯರು ದೂರು ಹಿಂಪಡೆಯಲು ಕೇಳಿಕೊಂಡಾಗ, ನಾನು ನನ್ನ ಮೇಲಿನ ಹಲ್ಲೆಯ ದೂರನ್ನು ಮಾತ್ರ ಹಿಂಪಡೆಯಲು ಒಪ್ಪಿಕೊಂಡೆ. ನನ್ನ ಮಗಳ ವಿಷಯದಲ್ಲಿ ನಾನು ರಾಜಿ ಮಾಡಿಕೊಳ್ಳುವುದಿಲ್ಲ. ಶನಿವಾರ ನಮ್ಮ ಮನೆಗೆ ಸಬ್‌ ಇನ್‌ಸ್ಪೆಕ್ಟರ್ ಭೇಟಿ ನೀಡಿ ಹೊಸ ಪೊಲೀಸ್ ದೂರು ದಾಖಲಿಸುವಂತೆ ಕೇಳಿಕೊಂಡಿದ್ದಾರೆ”ಎಂದು ಬಾಲಕಿಯ ತಂದೆ ಜೋಗಿಂದರ್ ಸಿಂಗ್ ಹೇಳಿರುವುದಾಗಿ ಟೈಮ್ಸ್‌ ಆಫ್ ಇಂಡಿಯಾ ವರದಿ ವಿವರಿಸಿದೆ.

“ನಾವು ವಿಡಿಯೋವನ್ನು ಗಮನಿಸಿದ್ದೇವೆ ಮತ್ತು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕುಟುಂಬದೊಂದಿಗೆ ಪೊಲೀಸರು ಸಂಪರ್ಕದಲ್ಲಿದ್ದಾರೆ ಎಂದು ಡಿಎಸ್ಪಿ (ಗಭಾನ) ಧನಂಜಯ್ ಸಿಂಗ್ ಹೇಳಿದ್ದಾರೆ. ಈ ವಿಷಯದಲ್ಲಿ ನಾವು ಅಗತ್ಯವಾದ ಕಾನೂನು ಕ್ರಮಗಳನ್ನು ಅನ್ವೇಷಿಸುತ್ತಿದ್ದೇವೆ. ನಾವು ಶಿಕ್ಷಣ ಇಲಾಖೆಯೊಂದಿಗೆ ಸಹ ಪತ್ರವ್ಯವಹಾರ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಲಿಖಿತ ದೂರು ಸ್ವೀಕರಿಸಿದ ನಂತರ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಸ್‌ಎಚ್‌ಒ (ಲೋಧಾ) ಹೇಮಂತ್ ಮಾವಿ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...