Homeದಲಿತ್ ಫೈಲ್ಸ್ಮೊದಲ ಬೆಂಚ್‌ನಲ್ಲಿ ಕುಳಿತ ಕಾರಣ ದಲಿತ ಬಾಲಕಿಗೆ ಶಿಕ್ಷಕಿಯಿಂದ ಥಳಿತ; ಎಫ್‌ಐಆರ್‌

ಮೊದಲ ಬೆಂಚ್‌ನಲ್ಲಿ ಕುಳಿತ ಕಾರಣ ದಲಿತ ಬಾಲಕಿಗೆ ಶಿಕ್ಷಕಿಯಿಂದ ಥಳಿತ; ಎಫ್‌ಐಆರ್‌

ಮಧ್ಯಪ್ರದೇಶ: ದಲಿತ ಬಾಲಕಿ ಮೊದಲ ಸಾಲಿನಲ್ಲಿ ಕುಳಿತ್ತಿದ್ದಕ್ಕೆ ಪ್ರಜ್ಞೆ ತಪ್ಪುವಂತೆ ಹೊಡೆದು, ಜಾತಿ ನಿಂದನೆ ಮಾಡಿರುವ ಶಿಕ್ಷಕಿ

- Advertisement -
- Advertisement -

16 ವರ್ಷದ ದಲಿತ ಬಾಲಕಿಯು ತರಗತಿ ವೇಳೆ ಮುಂದಿನ ಸಾಲಿನಲ್ಲಿ ಕುಳಿತಿದ್ದಕ್ಕಾಗಿ ಥಳಿಸಿದ್ದಲ್ಲದೆ ಜಾತಿ ನಿಂದನೆ ಮಾಡಿರುವ ಸರ್ಕಾರಿ ಶಿಕ್ಷಕಿಯೊಬ್ಬರ ಮೇಲೆ ಮಧ್ಯಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಆಗಸ್ಟ್ 2ರಂದು ರಾಜ್ಯ ರಾಜಧಾನಿಯಿಂದ 700 ಕಿಮೀ ದೂರದಲ್ಲಿರುವ ಸಿಂಗ್ರೌಲಿ ಜಿಲ್ಲೆಯ ಬೈಧಾನ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಬಾಲಕಿಯರ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಂದು 12ನೇ ತರಗತಿಯ ವಿದ್ಯಾರ್ಥಿನಿ ಅಂಜನಾ ಸಾಕೇತ್ (ಹೆಸರು ಬದಲಾಯಿಸಲಾಗಿದೆ), ಶಿಕ್ಷಕಿ ಜಾಗೃತಿ ಸಿಂಗ್ ತರಗತಿಗೆ ಪ್ರವೇಶಿಸಿದಾಗ ತರಗತಿಯ ಮುಂಭಾಗದ ಬೆಂಚ್‌ನಲ್ಲಿ ಕುಳಿತ್ತಿದ್ದರು. ಇದನ್ನು ನೋಡಿದ ಶಿಕ್ಷಕಿ ಕೋಪಗೊಂಡಳು. ತರುವಾಯ ವಿದ್ಯಾರ್ಥಿನಿಯ ಜಾತಿ ನಿಂದನೆ ಮಾಡಿದಳು. ವಿದ್ಯಾರ್ಥಿನಿ ಅಂಜನಾ ತಲೆಗೆ ಪುಸ್ತಕದಿಂದ ಹಲವು ಬಾರಿ ಹೊಡೆದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ಶಿಕ್ಷಕಿ ನನ್ನ ತಲೆಯ ಮೇಲೆ ಪುಸ್ತಕದಿಂದ ಹೊಡೆದ ನಂತರ ನಾನು ಕೆಲವು ಸಮಯ ಪ್ರಜ್ಞೆ ತಪ್ಪಿದೆ” ಎಂದು ವಿದ್ಯಾರ್ಥಿನಿ ಹೇಳಿರುವುದನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಶಿಕ್ಷಕಿ ಜಾಗೃತಿ ಸಿಂಗ್ ವಿರುದ್ಧ ಆಗಸ್ಟ್ 17ರಂದು ಸಿಂಗ್ರೌಲಿಯ ಬೈರಾನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

“ದಲಿತ ಬಾಲಕಿಯ ದೂರಿನ ಮೇರೆಗೆ ಪೊಲೀಸರು ಶಿಕ್ಷಕಿ ಜಾಗೃತಿ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 294, 323, 506 ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯ ಎರಡು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರಿದಿದೆ” ಎಂದು ಬೈರಾನ್ ಪೊಲೀಸ್ ಪಟ್ಟಣ ನಿರೀಕ್ಷಕ ಅರುಣ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ರೋಹಿಣಿ ಪ್ರಸಾದ್ ಪಾಂಡೆ ಅವರು ಶಿಕ್ಷಕಿಯ ವಿರುದ್ಧ ಕ್ರಮ ಜರುಗಿಸಿದ್ದಾರೆ ಎಂದು ಎಫ್‌ಐಆರ್‌ ದಾಖಲಾದ ಒಂದು ದಿನದ ನಂತರ ಜಿಲ್ಲಾಧಿಕಾರಿಗಳು ಹೊರಡಿಸಿರುವ ಅಧಿಕೃತ ಪ್ರಕಟಣೆ ತಿಳಿಸಿದೆ. ರಾಜೀವ್ ರಂಜನ್ ಮೀನಾ ಅವರು ಪ್ರಕರಣದ ತನಿಖೆ ನಡೆಸಲಿದ್ದಾರೆ.

ಘಟನೆ ನಡೆದ ಒಂದು ದಿನದ ನಂತರ ಸಂತ್ರಸ್ತ ವಿದ್ಯಾರ್ಥಿನಿ ತನ್ನ ಪೋಷಕರೊಂದಿಗೆ ಶಿಕ್ಷಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದ್ದರು.

ಹಲ್ಲೆ ಹಾಗೂ ತಾರತಮ್ಯ ಎಸಗಿರುವ ಬಗ್ಗೆ ತನಿಖೆಯ ವೇಳೆ ಸಾಕ್ಷ್ಯ ಸಿಕ್ಕಿದ್ದು, ಜಿಲ್ಲಾಧಿಕಾರಿಯವರಿಗೆ ಡಿಇಒ ಬುಧವಾರ ವರದಿ ಸಲ್ಲಿಸಿದ್ದಾರೆ. ವರದಿಯ ಮೇರೆಗೆ ಶಿಕ್ಷಕಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆಗಸ್ಟ್ 18ರಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕನ ಪರ ಪ್ರತಿಭಟನೆಯಲ್ಲಿ ಚಪ್ಪಾಳೆ ತಟ್ಟಿದ ಜಲೋರ್ ಜಿಲ್ಲಾಧಿಕಾರಿ, ಎಸ್‌ಪಿ?

ಸದರಿ ಶಿಕ್ಷಕಿಯ ವಿರುದ್ಧ ಬಂದಿರುವ ಆರೋಪಗಳು ನಿಜವೆಂದು ಅನೇಕ ವಿದ್ಯಾರ್ಥಿಗಳು, ಸಹ ಶಿಕ್ಷಕರು ಹೇಳುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಧ್ಯಪ್ರದೇಶ ಸಿವಿಲ್ ಸರ್ವಿಸ್ (ನಡತೆ) 1995ರ ಸೆಕ್ಷನ್‌ಗಳನ್ನು ಉಲ್ಲಂಘಿಸಿರುವುದರಿಂದ ಶಿಕ್ಷಕಿಯ ವಿರುದ್ಧ ಇಲಾಖಾ ತನಿಖೆಯನ್ನು ಪ್ರಾರಂಭಿಸುವಂತೆ ಸೂಚಿಸಿ ಜಿಲ್ಲಾಧಿಕಾರಿಯವರು ರೇವಾ ಆಯುಕ್ತರಿಗೆ ಪತ್ರವನ್ನು ಬರೆದಿದ್ದಾರೆ.

ಅಮಾನತು ಪ್ರಕ್ರಿಯೆಯನ್ನು ಪ್ರಾರಂಭಿಸಲು ನಾವು ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆದಿದ್ದೇವೆ ಎಂದು ರಾಜೀವ್ ರಂಜನ್ ಮೀನಾ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಪ್ರತಿ ವರ್ಷ, ಕನಿಷ್ಠ 6-12 ಪ್ರಮುಖ ಅಪರಾಧಗಳಾದ ದಲಿತರ ಮನೆಗಳನ್ನು ಸುಡುವುದು, ಅತ್ಯಾಚಾರ, ಮುಸ್ಲಿಮರಿಂದ ದಲಿತರ ಹತ್ಯೆಗಳು ನಮ್ಮ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ನಿಯಮಿತವಾಗಿ ನಡೆಯುತ್ತಿವೆ! ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ದಲಿತರ ವಿರುದ್ಧದ ಪ್ರಮುಖ ಅಪರಾಧಗಳ ವಿರುದ್ಧ ನಿಮ್ಮ ಮಾಧ್ಯಮವು ಹೇಗೆ ದೊಡ್ಡ ವಿಷಯವಾಗಿದೆ ಆದರೆ ನಿಶ್ಚೇಷ್ಟಿತವಾಗಿದೆ ಮತ್ತು ಮೂಕರಾಗುತ್ತಿದೆ ಎಂದು ನನಗೆ ಆಶ್ಚರ್ಯವಾಗುತ್ತದೆ !!!

  2. After completion of 75 years still this is persist. Where this country heading.
    We talk about gandhi and ambedkar all big things.
    Teacher should hanged without any mercy.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...