Homeಮುಖಪುಟಕೆಲಸ ಮಾಡುತ್ತಿದ್ದ ಮನೆಯಲ್ಲೇ ದಲಿತ ಬಾಲಕಿ ಶವವಾಗಿ ಪತ್ತೆ; ಮನೆ ಮಾಲೀಕರಿಂದ ಚಿತ್ರಹಿಂಸೆ ಆರೋಪ

ಕೆಲಸ ಮಾಡುತ್ತಿದ್ದ ಮನೆಯಲ್ಲೇ ದಲಿತ ಬಾಲಕಿ ಶವವಾಗಿ ಪತ್ತೆ; ಮನೆ ಮಾಲೀಕರಿಂದ ಚಿತ್ರಹಿಂಸೆ ಆರೋಪ

- Advertisement -
- Advertisement -

ತಂಜಾವೂರಿನ 15 ವರ್ಷದ ದಲಿತ ಬಾಲಕಿಯು ಪಶ್ಚಿಮ ಚೆನ್ನೈನ ಅಮಿಂಜಿಕರೈನಲ್ಲಿರುವ ದಂಪತಿಯ ಮನೆಯ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ, ಅಲ್ಲಿ ಆಕೆ ಮನೆಗೆಲಸವಾಗಿ ಮಾಡುತ್ತಿದ್ದಳು ಎಂದು ಗ್ರೇಟರ್ ಚೆನ್ನೈ ಪೊಲೀಸರು ತಿಳಿಸಿದ್ದಾರೆ.

ಹಿಂಸೆ ನೀಡಿದ ಆರೋಪದ ಮೇಲೆ ದಂಪತಿ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದು, ಕೊಲೆ ಪ್ರಕರಣವನ್ನೂ ದಾಖಲಿಸಿಕೊಂಡಿದ್ದಾರೆ.

ಬಾಲಕಿಯ ಮೈಮೇಲೆ ಸುಟ್ಟ ಗಾಯಗಳಿರುವುದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯಕ್ಕೆ ಪೊಲೀಸರು ಲೈಂಗಿಕ ದೌರ್ಜನ್ಯವನ್ನು ತಳ್ಳಿಹಾಕಿದ್ದಾರೆ. ಆರೋಪಿಗಳ ವಿರುದ್ಧ ಪೊಲೀಸರು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ (ಎಸ್‌ಸಿ/ಎಸ್‌ಟಿ ಪಿಒಎ) ಅಡಿಯಲ್ಲಿ ನಿಬಂಧನೆಗಳನ್ನು ವಿಧಿಸುವ ಸಾಧ್ಯತೆಯಿದೆ.

ಮೃತ ಬಾಲಕಿಯು, ಮೊಹಮ್ಮದ್ ನಿಶಾತ್ (36) ಮತ್ತು ಆತನ ಪತ್ನಿ ನಸ್ರಿಯಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ನಿಶಾತ್ ನಗರದಲ್ಲಿ ಹೊಟೇಲ್ ಡೀಲರ್ ಆಗಿದ್ದಾರೆ. ನವೆಂಬರ್ 1 ರಂದು ಬಾಲಕಿ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಕೆಯ ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಗಳಿಂದ ಮನೆಕೆಲ ಮಾಡುತ್ತಿದ್ದಳು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ; ಜಮ್ಮು-ಕಾಶ್ಮೀರ: ಶ್ರೀನಗರದ ಜನನಿಬಿಡ ಮಾರುಕಟ್ಟೆಯಲ್ಲಿ ಗ್ರೆನೇಡ್ ಸ್ಪೋಟ, 10 ಮಂದಿಗೆ ಗಂಭೀರ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...