Homeಮುಖಪುಟದಲಿತ ಯುವತಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

ದಲಿತ ಯುವತಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

- Advertisement -
- Advertisement -

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ 17 ವರ್ಷದ ಯುವತಿಯ ಮೇಲೆ ಯುವಕನೊಬ್ಬ ತನ್ನ ಇತರ ಮೂವರು ಸ್ನೇಹಿತರ ಜತೆಗೆ ಅತ್ಯಾಚಾರ ಎಸಗಿದ ಘಟನೆ ಸೋಮವಾರ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ.

ಸಂತ್ರಸ್ತ ಯುವತಿ ದಲಿತ ಸಮುದಾಯಕ್ಕೆ ಸೇರಿರುವ ಹಿನ್ನೆಲೆಯಲ್ಲಿ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳಡಿ ಪ್ರಕರಣ ದಾಖಲಿಸಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎನ್ನಲಾಗುತ್ತಿದೆ.

ನವೆಂಬರ್ 21ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ನಾಲ್ಕು ದಿನಗಳ ಬಳಿಕ ಯುವತಿ ದೂರು ನೀಡಿದ್ದಾಳೆ. ಈ ಘಟನೆಯನ್ನು ಬಹಿರಂಗಪಡಿಸದಂತೆ ಆರೋಪಿಗಳು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ದೂರು ನೀಡಲು ವಿಳಂಬವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಯುವತಿ ಹಾಗೂ ಆಕೆಯ ಕುಟುಂಬದವರು ದೂರು ನೀಡಿದ್ದನ್ನು ಹೆಚ್ಚುವರಿ ಎಸ್ಪಿ ನಿರಂಜನ್ ಶರ್ಮಾ ಸ್ಪಷ್ಟಪಡಿಸಿದ್ದಾರೆ.

ಈ ಯುವತಿ ಕಳೆದ ವರ್ಷ ಯುವಕನ ಜತೆಗೆ ಫೇಸ್ಟುಕ್ ನಲ್ಲಿ ಸ್ನೇಹ ಬೆಳೆಸಿದ್ದಳು. ನವೆಂಬರ್ 21ರಂದು ಆರೋಪಿ ನಿರ್ಜನ ಪ್ರದೇಶಕ್ಕೆ ಕಾರಿನಲ್ಲಿ ಕರೆದೊಯ್ದು ಇತರ ಮೂವರು ಸ್ನೇಹಿತರ ಜತೆಗೆ ಅತ್ಯಾಚಾರ ಎಸಗಿದ್ದಾನೆ. ಈ ಪೈಕಿ ಒಬ್ಬ ಆರೋಪಿ ಪ್ರಭಾವಿ ರಾಜಕಾರಣಿಯೊಬ್ಬರ ನಿಕಟ ಸಂಬಂಧಿ ಎಂದು ಪೊಲೀಸ್ ಮೂಲಗಳು ಹೇಳಿವೆ.

ಅತ್ಯಾಚಾರವೆಸಗಿದ ಬಳಿಕ ಯುವತಿಗೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ಹೇಳಲಾಗಿದೆ.

ಸೆಕ್ಷನ್ 376 (ಅತ್ಯಾಚಾರಕ್ಕೆ ಶಿಕ್ಷೆ), ಮತ್ತು 377 (ಅಸ್ವಾಭಾವಿಕ ಕೃತ್ಯ) ಇತರವುಗಳ ಅಡಿಯಲ್ಲಿ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ಉತ್ತರಪ್ರದೇಶ: ದಲಿತ ಬಾಲಕನಿಗೆ ಥಳಿತ; ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...