HomeUncategorizedಉತ್ತರ ಪ್ರದೇಶ: ದಲಿತ ಬಾಲಕಿಯ ಸಜೀವ ದಹನ

ಉತ್ತರ ಪ್ರದೇಶ: ದಲಿತ ಬಾಲಕಿಯ ಸಜೀವ ದಹನ

- Advertisement -
- Advertisement -

ಬಯಲು ಶೌಚಾಲಯಕ್ಕೆ ತೆರಳಿದ್ದ 13 ವರ್ಷದ ದಲಿತ ಬಾಲಕಿಯನ್ನು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಬಿಜೆಪಿ ಆಡಳಿತದ ಉತ್ತರಪ್ರದೇಶದ ಹರಯಾ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ.

ಬಲರಾಂಪುರ್ ಗ್ರಾಮದಲ್ಲಿ ಬಹಿರ್ದೆಸೆಗೆ ತೆರಳಿದ್ದ 13 ವರ್ಷದ ದಲಿತ ಬಾಲಕಿಯನ್ನು ಸುಟ್ಟು ಹಾಕಲಾಗಿದೆ. ಈ ಶಾಕಿಂಗ್‌ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಕುಮಾರ್ ಈ ಬಗ್ಗೆ ಮಾತನಾಡಿದ್ದು, ಬಾಲಕಿ ಶುಕ್ರವಾರ ಸಂಜೆ ತನ್ನ ಗ್ರಾಮದ ಬಳಿಯ ಹೊಲಕ್ಕೆ ಮಲವಿಸರ್ಜನೆಗೆ ಹೋಗಿದ್ದಳು. ಒಂದು ಗಂಟೆಯಾದರೂ ಮನೆಗೆ ವಾಪಸ್ ಬಾರದೆ ಇದ್ದಾಗ ಮನೆಯವರು ಆಕೆಗಾಗಿ ಹುಡುಕಾಟ ಆರಂಭಿಸಿದ್ದಾರೆ. ಇದೇ ವೇಳೆ ಸಮೀಪದ ಹೊಲಕ್ಕೆ ಬೆಂಕಿ ಬಿದ್ದಿದೆ ಎಂದು ಕೆಲ ಗ್ರಾಮಸ್ಥರು ತಿಳಿಸಿದ್ದಾರೆ. ಅಲ್ಲಿಗೆ ಅವರು ತೆರಳಿ ನೋಡಿದಾಗ ಅಲ್ಲಿ ಬಾಲಕಿಯ ಸುಟ್ಟು ಕರಕಲಾದ ದೇಹ ಪತ್ತೆಯಾಗಿದೆ. ಆಕೆಯ ಸುಟ್ಟ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸರು ಭಾರತೀಯ ದಂಡ ಸಂಹಿತೆ (IPC) ಮತ್ತು SC/ST ಕಾಯಿದೆಯ ಸಂಬಂಧಿತ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಪ್ರಾಪ್ತ ಬಾಲಕಿಗೆ ಹೇಗೆ ಮತ್ತು ಏಕೆ ಬೆಂಕಿ ಹಚ್ಚಲಾಗಿದೆ ಮತ್ತು ಆಕೆಯ ಹತ್ಯೆಯ ಹಿಂದಿನ ಉದ್ದೇಶವೇನು ಎಂದು ತನಿಖೆಯ ನಂತರ ಬಯಲಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಸಂತ್ರಸ್ತೆಯ ಕುಟುಂಬಸ್ಥರು ಆಘಾತವನ್ನು ವ್ಯಕ್ತಪಡಿಸಿದ್ದಾರೆ. ತಕ್ಷಣಕ್ಕೆ ಕೃತ್ಯವನ್ನು ಎಸಗಿದವರು ಯಾರು ಎಂದು ತಿಳಿದು ಬಂದಿಲ್ಲ, ಈ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ಬಳಿಕವೇ ಬಹಿರಂಗವಾಗಬೇಕಿದೆ.

ಬಿಜೆಪಿ ಆಡಳಿತದ ಉತ್ತರಪ್ರದೇಶದಲ್ಲಿ ದಲಿತರ ಮೇಲಿನ ದೌರ್ಜನ್ಯ, ಕೊಲೆಯಂತಹ ಪ್ರಕರಣಗಳು ಪದೇ ಪದೇ ವರದಿಯಾಗುತ್ತಿದೆ. ಇದು ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರಕಾರದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಸ್ಪಷ್ಟವಾಗಿ ಸೂಚಿಸುತ್ತದೆ.

ಇದನ್ನು ಓದಿ: ಮಹಿಳೆಯ ಅಪಹರಣ ಪ್ರಕರಣ : ಶಾಸಕ ಹೆಚ್‌.ಡಿ ರೇವಣ್ಣ ಎಸ್‌ಐಟಿ ವಶಕ್ಕೆ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀಟ್ ಕೃಪಾಂಕ ರದ್ದು ಹಗರಣ ಮುಚ್ಚಿ ಹಾಕುವ ಪ್ರಯತ್ನ : ಎಂ.ಕೆ ಸ್ಟಾಲಿನ್

0
ನೀಟ್ ವಿದ್ಯಾರ್ಥಿಗಳ ಕೃಪಾಂಕ ರದ್ದುಗೊಳಿಸಿ ಮರು ಪರೀಕ್ಷೆಗೆ ಮುಂದಾಗಿರುವುದು ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಹಗರಣದ ಆರೋಪ ಕೇಳಿ ಬಂದ ಬೆನ್ನಲ್ಲೇ 1,563...