Homeಮುಖಪುಟಕೋಲಾರದಲ್ಲಿ ದಲಿತ ಹೆಣ್ಣುಮಕ್ಕಳಿಗೆ ನಿತ್ಯ ಕಿರುಕುಳ: ಪ್ರಶ್ನಿಸಿದ್ದಕ್ಕೆ ತೀವ್ರ ಹಲ್ಲೆ - ದಸಸಂ ಖಂಡನೆ

ಕೋಲಾರದಲ್ಲಿ ದಲಿತ ಹೆಣ್ಣುಮಕ್ಕಳಿಗೆ ನಿತ್ಯ ಕಿರುಕುಳ: ಪ್ರಶ್ನಿಸಿದ್ದಕ್ಕೆ ತೀವ್ರ ಹಲ್ಲೆ – ದಸಸಂ ಖಂಡನೆ

ದಸಂಸ ರಾಜ್ಯ ಮುಖಂಡರಾದ ಎನ್.ವೆಂಕಟೇಶ್‌ರವರ ನೇತೃತ್ವದಲ್ಲಿ ಶ್ರೀನಿವಾಸಪುರ ತಹಶೀಲ್ದಾರ್ ಮೂಲಕ ಗೃಹ ಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದು, ಆರೋಪಿಗಳ ಮೇಲೆ ಪೋಕ್ಸೋ ಕಾಯ್ದೆ ದಾಖಲಿಸಬೇಕೆಂದು ಒತ್ತಾಯಿಸಿದೆ.

- Advertisement -
- Advertisement -

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೊಳ್ ಮತ್ತು ನಾಗಿರೆಡ್ಡಿಗಾರಿ ಪಾಳ್ಯದ ಗ್ರಾಮದ ದಲಿತ ಹೆಣ್ಣುಮಕ್ಕಳು ಬಸ್ಸಿನಲ್ಲಿ ಶಾಲೆ, ಕಾಲೇಜಿಗೆ ಹೋಗುವಾಗ ಕೆಲ ಪುಂಡರು ನಿತ್ಯವೂ ಕಿರುಕುಳ ನೀಡುತ್ತಿದ್ದದು ಇದನ್ನು ಪ್ರಶ್ನಿಸಿದ ಹೆಣ್ಣುಮಕ್ಕಳು ಮತ್ತು ಅವರ ಪೋಷಕರ ಮೇಲೆ  ಗುಂಪೊಂದು ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಸೆಪ್ಟಂಬರ್ 04 ರಂದು ನಡೆದಿದೆ.

ಟಿ.ಎನ್ ಗೌರಿ, ಟಿ.ಎಂ ಯಶಸ್ವಿನಿ ಹಾಗೂ ಭಾವನ ಎಂಬ ಹೆಣ್ಣು ಮಕ್ಕಳು ಚಿಂತಾಮಣಿ ಕಾಲೇಜಿಗೆ ಬಸ್ಸಿನಲ್ಲಿ ಹೋಗುವಾಗ ನಾಯಕ ಸಮುದಾಯದಕ್ಕೆ ಸೇರಿದ ಗೌನಿಪಲ್ಲಿಯ ಪವನ್ ಮತ್ತು ಕೊಂಡಾಮುರಿಯ ಬಾಬೂ ನಾಯಕ್ ಎಂಬುವರು ಪ್ರತಿದಿನ ಚುಡಾಯಿಸುವುದು, ಮಾನಸಿಕ ಕಿರುಕುಳ ನೀಡಿವುದು ಮಾಡುತ್ತಿದ್ದರು. ಈ ಕುರಿತು ಆ ಯುವಕರಿಗೆ ಹೆಣ್ಣುಮಕ್ಕಳ ಪೋಷಕರು ಬುದ್ದಿವಾದ ಹೇಳಿದ್ದರು. ಈ ಕುರಿತು ಮಾತಿಗೆ ಮಾತು ಬೆಳೆದಿತ್ತು. ಅದಕ್ಕೆ ಕುಪಿತಗೊಂಡ ಯುವಕರು ಮತ್ತು ಅವರ ಪೋಷಕರು ಸೇರಿ ಸೆಪ್ಟಂಬರ್ ನಾಲ್ಕರಂದು ಕೊಂಡಾಮುರಿ ಗೇಟ್ ಬಳಿ ಆ ಹೆಣ್ಣು ಮಕ್ಕಳ ಮೇಲೆ ಅಮಾನುಷ ಹಲ್ಲೆ ನಡೆಸಿದ್ದಾರೆ. ತಾಡಿಗೋಳ್ ಕ್ರಾಸ್‌ನಲ್ಲಿ ಗಿರೀಶ್ ಮತ್ತು ರೌಡಿ ಶೀಟರ್ ಜಿಮ್ ಅನಿಲ್ ಕುಮಾರ್ ಎಂಬುವವರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಇದೆಲ್ಲವೂ ವಿಡಿಯೋ ಆಗಿದ್ದು ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದೌರ್ಜನ್ಯ ನಡೆಯುತ್ತಿದ್ದ ಸ್ಥಳಕ್ಕೆ ಬಂದು ಪ್ರಶ್ನಿಸಿದ ಅಭಿಷೇಕ್, ನವೀನ್ ಮತ್ತು ಶ್ರೀನಾಥ್ ಎಂಬುವವರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಊರಿನವರೆಲ್ಲಾ ಸೇರಿಕೊಂಡು ಅಶ್ಲೀಲವಾಗಿ ಬೈದು ಮನಬಂದಂತೆ ಥಳಿಸಿದ್ದಾರೆ. ಹೆಣ್ಣು ಮಕ್ಕಳು ಸೇರಿದಂತೆ ಗಾಯಗೊಂಡ ಜನರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ಮತ್ತು ಪ್ರತಿ ದೂರು ದಾಖಲಾಗಿದ್ದು, ಎರಡೂ ಕಡೆಯವರ ಮೇಲೂ FIR ದಾಖಲಾಗಿದೆ.

ಘಟನೆಯನ್ನು ಖಂಡಿಸಿರುವ ಶ್ರೀನಿವಾಸಪುರ ತಾಲ್ಲುಕು ದಲಿತ ಸಂಘರ್ಷ ಸಮಿತಿಯು ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರ ಮೇಲೆ ದೌರ್ಜನ್ಯವೆಸಗಿದ ಆರೋಪಿಗಳನ್ನು ಬಂಧಿಸಿಬೇಕು, ಸಂತ್ರಸ್ತರ ಮೇಲಿನ FIR ರದ್ದುಗೊಳಿಸಬೇಕು ಮತ್ತು ಸಂತ್ರಸ್ತರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದೆ.

ಇದೊಂದು ಪೂರ್ವನಿಯೋಜಿತ ದಾಳಿಯಾಗಿದೆ. ಮೂರು ಹೆಣ್ಣು ಮಕ್ಕಳು ಸೇರಿದಂತೆ ಆರು ಜನರು ಪೆಟ್ಟು ತಿಂದು ಆಸ್ಪತ್ರೆಯಲ್ಲಿದ್ದಾರೆ. ಪೊಲೀಸರು ಸಂತ್ರಸ್ತರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಇದರಲ್ಲಿ ಪೊಲೀಸರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಈಗಲಾದರೂ ಪೊಲೀಸರು ಸಮರ್ಪಕ ಕ್ರಮ ತೆಗೆದುಕೊಳ್ಳದಿದ್ದರೆ ಸೆಪ್ಟಂಬರ್ 14 ರಂದು ಬೃಹತ್ ಜಾಥಾ ನಡೆಸಲಾಗುವುದು ಎಂದು ದಸಂಸ ರಾಜ್ಯ ಮುಖಂಡರಾದ ಎನ್.ವೆಂಕಟೇಶ್‌ ತಿಳಿಸಿದ್ದಾರೆ.

ಇಂದು ಅವರ ನೇತೃತ್ವದಲ್ಲಿ ದಸಸಂ ಸಂಘಟನೆಯು ಶ್ರೀನಿವಾಸಪುರ ತಹಶೀಲ್ದಾರ್ ಮೂಲಕ ಗೃಹ ಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದು, ಆರೋಪಿಗಳ ಮೇಲೆ ಪೋಕ್ಸೋ ಕಾಯ್ದೆ ದಾಖಲಿಸಬೇಕೆಂದು ಒತ್ತಾಯಿಸಿದೆ. ಅಲ್ಲದೇ ಪ್ರಕರಣದಲ್ಲಿ ಮುಖ್ಯ ಆರೋಪಿಯಾದ ಅನಿಲ್‌ ಕುಮಾರ್ ಎಂಬಾತನನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದೆ.

ದಸಸಂ ತಂಡವು ಜಿಲ್ಲಾಸ್ಪತ್ರೆಗೆ ತೆರಳಿ ಸಂತ್ರಸ್ತರನ್ನು ಭೇಟಿ ಮಾಡಿ ಧೈರ್ಯ ತುಂಬಲಾಗಿದೆ. ಈ ಸಂದರ್ಭದಲ್ಲಿ ದಲಿತ ಸಂಘ‍ರ್ಷ ಸಮಿತಿಯ ವಿ.ಮುನಿಯಪ್ಪ, ಪಿ. ವಾಸು, ಬಿ.ವೆಂಕಟೇಶ್, ನರಸಿಂಹ ವಿ, ಎಂ ಮೂರ್ತಿ ಸೇರಿದಂತೆ ಇತರರು ಇದ್ದರು.


ಇದನ್ನೂ ಓದಿ: ಮುಸ್ಲಿಂ ಬಾಲಕಿಯ ಅಪಹರಣ; ಆರ್‌ಎಸ್ಎಸ್‌ ಮುಖಂಡ ಸೇರಿ ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತ ಹೆಣ್ಣುಮಕ್ಕಳ ಮೇಲಿನ ಈ ಹಲ್ಲೆ ಕಂಡನಾರ್ಹ. ಆರೋಪಿಗಳಿಗೆ ಕಟಿಣ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...