Homeಕರ್ನಾಟಕನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಬಾಲಕಿಯ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಬಾಲಕಿಯ ಶವ ಪತ್ತೆ: ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ

- Advertisement -
- Advertisement -

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬನೋಶಿ ಗ್ರಾಮದ ಹೊಲವೊಂದರಲ್ಲಿ ದಲಿತ ಬಾಲಕಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮದ ಪ್ರಬಲ ಜಾತಿಯ ಯುವಕರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಬಾಲಕಿಯ ಪೋಷಕರು ನೀಡಿರುವ ದೂರಿನ ಪ್ರಕಾರ, ಅಕ್ಟೋಬರ್ 13ರಂದು ಸಂಜೆ 5 ಗಂಟೆಯ ಸುಮಾರಿಗೆ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯ ಶವ, ಮರುದಿನ ಅಕ್ಟೋಬರ್ 14ರಂದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಗ್ರಾಮದ ನಾಗನಗೌಡ ಎಂಬವರ ಹೊಲದ ಬೃಹತ್ ಗಾತ್ರದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

“ಗ್ರಾಮದ ಪ್ರಬಲ ಜಾತಿಗೆ ಸೇರಿದ (ಕುರುಬ) ಮಾಳಿಂಗರಾಯ ಎಂಬ ಯುವಕ ಕಳೆದ 2-3 ತಿಂಗಳಿನಿಂದ ನಮ್ಮ ಮಗಳ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ. ಈ ವಿಷಯ ತಿಳಿದು ನಾವು ಆಕೆಯನ್ನು ಮನೆಯಲ್ಲೇ ಇರಿಸಿಕೊಂಡಿದ್ದೆವು. ನಮ್ಮ ಸಂಬಂಧಿ ಹುಡುಗನ ಜೊತೆ ಆಕೆಗೆ ಮದುವೆ ಮಾಡುವ ಬಗ್ಗೆ ತೀರ್ಮಾನಿಸಿದ್ದೆವು. ಈ ವಿಚಾರ ಮಾಳಿಂಗರಾಯನಿಗೆ ಗೊತ್ತಾಗಿತ್ತು. ಆ ಬಳಿಕ “ನನ್ನ ಬಿಟ್ಟು ಬೇರೆಯವರ ಜೊತೆ ನೀನು ಹೇಗೆ ಮದುವೆಯಾಗುತ್ತೀಯಾ ನೋಡುತ್ತೇನೆ, ನೀನು ನನ್ನನ್ನೇ ಪ್ರೀತಿಸಬೇಕು” ಎಂದು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದ. ಇದಕ್ಕೆ ಮಾಳಿಂಗರಾಯನಿಗೆ ಗ್ರಾಮದ ಶಿವನಗೌಡ ಎಂಬಾತ ಕುಮ್ಮಕ್ಕು ನೀಡುತ್ತಿದ್ದ ಎಂದು” ಬಾಲಕಿಯ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅಕ್ಟೋಬರ್ 13ರಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಸಂತೆ ಮಾಡಿಕೊಂಡು ಬರುವ ಸಲುವಾಗಿ ನಾವು ಮುದ್ದೇಬಿಹಾಳಕ್ಕೆ ಹೋಗಿದ್ದೆವು. ಈ ವೇಳೆ ಮಗಳು ಮನೆಯಲ್ಲೇ ಇದ್ದಳು. ಸಂತೆ ಮುಗಿಸಿಕೊಂಡು ಸಂಜೆ 5 ಗಂಟೆಯ ಸುಮಾರಿಗೆ ಮನೆಗೆ ಬಂದಾಗ, ಮಗಳು ಮನೆಯಲ್ಲಿ ಇರಲಿಲ್ಲ. ನಾವು ಸುತ್ತಮುತ್ತಲಿನ ಜನರ ಬಳಿ ಮಗಳ ಬಗ್ಗೆ ವಿಚಾರಿಸಿದೆವು, ಊರಿನ ತುಂಬಾ ಆಕೆಗಾಗಿ ಹುಡುಕಾಡಿದೆವು. ಆದರೆ, ಆಕೆಯ ಸುಳಿವು ಸಿಗಲಿಲ್ಲ” ಎಂದು ತಿಳಿಸಿದ್ದಾರೆ.

“ಮರುದಿನ ಅಕ್ಟೋಬರ್ 14ರಂದು ಬೆಳಿಗ್ಗೆ 8.30ರ ಸುಮಾರಿಗೆ ಮನೆಗೆ ಬಂದ ನಮ್ಮ ಅಳಿಯ ನಾಗರಾಜ, ಗ್ರಾಮದ ನಾಗನಗೌಡ ಅವರ ಹೊಲಕ್ಕೆ 8 ಗಂಟೆಯ ಸುಮಾರಿಗೆ ಮೇವು ತರಲು ಹೋದಾಗ ಮಗಳ ಶವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ತಿಳಿಸಿದರು. ನಾವು ಗಾಬರಿಯಿಂದ ಸ್ಥಳಕ್ಕೆ ಹೋಗಿ ನೋಡಿದಾಗ ಮಗಳ ಶವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ಕೆಳಗಿಳಿಸಿ ಆಂಬ್ಯುಲೆನ್ಸ್‌ನಲ್ಲಿ ವಿಜಯಪುರದ ಬಿಎಲ್‌ಡಿಇ ಆಸ್ಪತ್ರೆಯ ಶವಾಗಾರಕ್ಕೆ ಕಳಿಸಿದರು” ಎಂದು ಬಾಲಕಿಯ ಪೋಷಕರು ದೂರಿನಲ್ಲಿ ವಿವರಿಸಿದ್ದಾರೆ.

“ನಮ್ಮ ಮಗಳಿಗೆ ಪ್ರೀತಿಸುವಂತೆ ಕಿರುಕುಳ ನೀಡಿ ಆಕೆಯ ಸಾವಿಗೆ ಕಾರಣರಾದ ಮಾಳಿಂಗರಾಯ, ಆತನಿಗೆ ಸಹಕಾರ ನೀಡಿದ ಶಿವನಗೌಡ ಮತ್ತು ಜುಮ್ಮಣ್ಣ ದಳವಾಯಿ” ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಶಂಕೆ

ಬಾಲಕಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆಯಿಂದೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಈ ಕುರಿತು ನಾನುಗೌರಿ ಜೊತೆ ಮಾತನಾಡಿರುವ ದಲಿತ ಸಂಘರ್ಷ ಸಮಿತಿಯ (ಡಿಎಸ್‌ಎಸ್‌) ವಿ ನಾಗರಾಜ್ ಅವರು, ” ನಾವು ಬಾಲಕಿಯ ಮನೆಗೆ ಭೇಟಿ ನೀಡಿದ್ದೇವೆ. ಆಕೆಯ ಶವದ ಮೇಲೆ ಸುಟ್ಟ ಗಾಯಗಳಿತ್ತು. ಅಲ್ಲದೆ, ಕತ್ತಿನಲ್ಲಿ ತಾಳಿಯಿತ್ತು. ಆಕೆಯ ಮೇಲೆ ಮಾಳಿಂಗರಾಯ ಸೇರಿದಂತೆ ಯುವಕರು ಅತ್ಯಾಚಾರವೆಸಗಿ ಕೊಲೆಗೈದು, ಬಳಿಕ ಮರಕ್ಕೆ ನೇತು ಹಾಕಿರುವ ಶಂಕೆಯಿದೆ” ಎಂದಿದ್ದಾರೆ.

“ನಮಗೆ ದೊರೆತ ಮಾಹಿತಿ ಪ್ರಕಾರ ಬಾಲಕಿ ಮತ್ತು ಆರೋಪಿ ಮಾಳಿಂಗರಾಯ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಗೊತ್ತಾಗಿ ಬಾಲಕಿಯ ಪೋಷಕರು ಆಕೆಗೆ ಎಚ್ಚರಿಕೆ ನೀಡಿದ್ದರು. ಅಲ್ಲದೆ, ಸಂಬಂಧಿ ಯುವಕನ ಜೊತೆ ಮದುವೆ ಮಾಡುವ ನಿರ್ಧಾರ ಮಾಡಿದ್ದರು. ಈ ವಿಚಾರ ಮಾಳಿಂಗರಾಯನಿಗೆ ಗೊತ್ತಾಗಿ ಇಬ್ಬರು ಓಡಿ ಹೋಗುವ ತೀರ್ಮಾನ ಮಾಡಿರಬಹುದು. ಬಾಲಕಿ ಆತನನ್ನು ನಂಬಿ ಮನೆಯಿಂದ ಹೊರ ಹೋಗಿರಬಹುದು. ಆದರೆ, ಬಾಲಕಿ ತನಗೆ ಸಿಗುವುದಿಲ್ಲ ಎಂದು ತಿಳಿದ ಮಾಳಿಂಗರಾಯ, ಆತನ ಸ್ನೇಹಿತರ ಜೊತೆಗೂಡಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು, ಬಳಿಕ ಮರಕ್ಕೆ ನೇತು ಹಾಕಿರಬಹುದು” ಎಂದು ಹೇಳಿದ್ದಾರೆ.

“ದೇವದಾಸಿ ಪದ್ದತಿಯಂತೆ ಯುವಕರು ಅತ್ಯಾಚಾರವೆಸಗುವ ಮುನ್ನ ಮಾಳಿಂಗರಾಯ ಆಕೆಯ ಕತ್ತಿಗೆ ತಾಳಿ ಕಟ್ಟಿರುವ ಶಂಕೆಯಿದೆ. ಬಾಲಕಿ ಪ್ರಿಯತಮ ಮಾಳಿಂಗರಾಯನ ನಂಬಿ ಮನೆಯಿಂದ ಹೋಗಿರಬಹುದು. ಆದರೆ, ಅಲ್ಲಿ ಮಾಳಿಂಗರಾಯ ತನ್ನ ಸ್ನೇಹಿತರ ಜೊತೆ ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಶಂಕೆಯಿದೆ” ಎಂದು ನಾಗರಾಜ್ ವಿವರಿಸಿದ್ದಾರೆ.

ಪೊಲೀಸರು ಎಫ್‌ಐಆರ್ ದಾಖಲಿಸಿ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಈ ಪ್ರಕರಣವನ್ನು ರಾಜ್ಯ ಮಟ್ಟಕ್ಕೆ ಕೊಂಡೊಯ್ದು ಉಗ್ರ ಹೋರಾಟ ಮಾಡಲಾಗುವುದು ಎಂದು ನಾಗರಾಜ್ ಎಚ್ಚರಿಸಿದ್ದಾರೆ.

ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...