Homeದಲಿತ್ ಫೈಲ್ಸ್ಡಿಎಂಕೆ ಕೌನ್ಸಿಲರ್ ಕಾಲಿಗೆ ಬಿದ್ದ ದಲಿತ ಸಮುದಾಯದ ಸರ್ಕಾರಿ ಸಿಬ್ಬಂದಿ; ಐವರ ವಿರುದ್ಧ ಪ್ರಕರಣ ದಾಖಲು

ಡಿಎಂಕೆ ಕೌನ್ಸಿಲರ್ ಕಾಲಿಗೆ ಬಿದ್ದ ದಲಿತ ಸಮುದಾಯದ ಸರ್ಕಾರಿ ಸಿಬ್ಬಂದಿ; ಐವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ತಮಿಳುನಾಡಿನ ವಿಲ್ಲುಪುರಂನ ಟಿಂಡಿವನಂ ಪುರಸಭೆ ಆಯುಕ್ತರ ಕಚೇರಿಯಲ್ಲಿ ಕ್ಷಮೆ ಕೋರುವ ನೆಪದಲ್ಲಿ ‘ಎಂಬಿಸಿ’ ಸಮುದಾಯಕ್ಕೆ ಸೇರಿದ ಡಿಎಂಕೆ ಕೌನ್ಸಿಲರ್ ಆರ್. ರಮ್ಯಾ ಅವರ ಕಾಲಿಗೆ ಬಿದ್ದಿರುವ ದಲಿತ ಕಂದಾಯ ಸಹಾಯಕ ಎಸ್ ಮುನಿಯಪ್ಪನ್ (30) ಅವರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೊ ವೈರಲ್ ಆದ ನಂತರ ವಿವಾದ ಭುಗಿಲೆದ್ದಿದೆ.

ಟಿಂಡಿವನಂ ಪೊಲೀಸರು ರಮ್ಯಾ, ಅವರ ಪತಿ ಮರೂರ್ ರಾಜ, ರವಿಚಂದ್ರನ್ (ಪುರಸಭೆ ಅಧ್ಯಕ್ಷರ ಪತಿ), ಕಾಮರಾಜ್ ಮತ್ತು ಬಿರ್ಲಾ ಸೆಲ್ವಂ ಸೇರಿದಂತೆ ಐದು ಜನರ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಟಿಂಡಿವನಂನ ಉಪ ಪೊಲೀಸ್ ವರಿಷ್ಠಾಧಿಕಾರಿಗೆ ಮುನಿಯಪ್ಪನ್ ನೀಡಿದ ದೂರಿನಲ್ಲಿ, “ಆಗಸ್ಟ್ 29 ರಂದು, ಪುರಸಭೆ ಆಯುಕ್ತರು ಕೇಳಿದ ಫೈಲ್ ಅನ್ನು ನಾನು ಹುಡುಕುತ್ತಿದ್ದಾಗ, ವಾರ್ಡ್ 20ರ ಕೌನ್ಸಿಲರ್ ರಮ್ಯಾ ಕೋಣೆಗೆ ಪ್ರವೇಶಿಸಿ ಫೈಲ್ ಸಿಗದಿದ್ದಕ್ಕೆ ನನ್ನೊಂದಿಗೆ ಕೆಟ್ಟದಾಗಿ ಮಾತನಾಡಿದರು. ನಂತರದ ಇಬ್ಬರ ನಡುವೆ ವಾಗ್ವಾದ ನಡೆದು, ಅವರ ವಿರುದ್ಧ ಮಾತನಾಡಿದ್ದಕ್ಕಾಗಿ ನನಗೆ ಬೆದರಿಕೆ ಹಾಕಿದರು” ಎಂದರು.

ನಂತರ, ರಮ್ಯಾ ಅವರು ಮುನಿಯಪ್ಪನ್ ಅವರ ‘ದುರ್ವರ್ತನೆ’ಯ ಬಗ್ಗೆ ಆಯುಕ್ತರಿಗೆ ದೂರು ನೀಡಿದರು. ಆಯುಕ್ತರು ಅವರ ವಿರುದ್ಧ ಕ್ರಮ ಕೈಗೊಳ್ಳಲು ಲಿಖಿತ ದೂರು ಕೇಳಿದ್ದರು. ಆದರೂ, ಅದೇ ದಿನ ಸಂಜೆ 4 ಗಂಟೆಯ ಹೊತ್ತಿಗೆ, ರಮ್ಯಾ ಮತ್ತು ಅವರ ಪತಿ ಮರೂರ್ ರಾಜ, ರವಿಚಂದ್ರನ್ ಮತ್ತು ಇತರರು ಸಮಸ್ಯೆಯನ್ನು ಇತ್ಯರ್ಥಪಡಿಸಲು ಮುನಿಯಪ್ಪನ್ ಅವರನ್ನು ಆಯುಕ್ತರ ಕೊಠಡಿಗೆ ಕರೆಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಭೆಯಲ್ಲಿ, ರವಿಚಂದ್ರನ್ ಮತ್ತು ರಮ್ಯಾ ಅವರು ಮುನಿಯಪ್ಪನ್ ಅವರನ್ನು ಸೇವೆಯಿಂದ ತೆಗೆದುಹಾಕುವಂತೆ ಬೆದರಿಕೆ ಹಾಕಿದರು, ರಮ್ಯಾ ಅವರ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು.

“ರವಿಚಂದ್ರನ್ ಅವರ ಒತ್ತಡದಿಂದಾಗಿ ನಾನು ಮಂಡಿಯೂರಿ ಕ್ಷಮೆಯಾಚಿಸಬೇಕಾಯಿತು. ಆದ್ದರಿಂದ, ನಾನು ರಮ್ಯಾ ಅವರ ಕಾಲಿಗೆ ಬಿದ್ದು ಕ್ಷಮೆಯಾಚಿಸುವಂತೆ ಒತ್ತಾಯಿಸಿದೆ” ಎಂದು ಮುನಿಯಪ್ಪನ್ ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮಂಗಳವಾರ ಪಕ್ಷಾತೀತವಾಗಿ (ಡಿಎಂಕೆ, ಎಐಎಡಿಎಂಕೆ ಮತ್ತು ವಿಸಿಕೆ) ಆಕ್ರೋಶಗೊಂಡ ಕೌನ್ಸಿಲರ್‌ಗಳ ಗುಂಪು ನಗರಸಭೆ ಅಧಿಕಾರಿಗಳು ಮತ್ತು ತಿಂಡಿವನಂ ಡಿಎಸ್‌ಪಿ ಕೆ ಪ್ರಕಾಶ್ ಅವರಿಗೆ ಜಂಟಿಯಾಗಿ ಮನವಿ ಸಲ್ಲಿಸಿದರು. ಬಳಿಕ ಈ ಘಟನೆ ಮುನ್ನಲೆಗೆ ಬಂದಿದೆ. ಕೌನ್ಸಿಲರ್ ರಮ್ಯಾ ಮತ್ತು ರವಿಚಂದ್ರನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.

“ಅಧ್ಯಕ್ಷೆಯ ಪತಿ ರವಿಚಂದ್ರನ್ ಹೇಗೆ ತಾನೂ ಒಬ್ಬ ಸದಸ್ಯನಂತೆ ವರ್ತಿಸಬಹುದು? ಇದಲ್ಲದೆ, ರಾಜಾ ಅವರ ಪತ್ನಿ ರಮ್ಯಾ ಅವರು ಕಾರ್ಮಿಕರೊಂದಿಗೆ ಗಲಾಟೆ ಮಾಡುವ ಇತಿಹಾಸವನ್ನು ಹೊಂದಿದ್ದಾರೆ. ಆದರೆ ದಂಪತಿಗಳ ರಾಜಕೀಯ ಸಂಪರ್ಕಗಳಿಂದಾಗಿ ಅವರನ್ನು ಎಂದಿಗೂ ಹೊಣೆಗಾರರನ್ನಾಗಿ ಮಾಡಲಾಗಿಲ್ಲ” ಎಂದು ವಿಸಿಕೆ ವಾರ್ಡ್ ಸದಸ್ಯೆ ವಿ.ರಾಜಲಕ್ಷ್ಮಿ ಹೇಳಿದರು.

ಯುಪಿ| ದಲಿತ ಬಾಲಕಿ ಅಪಹರಿಸಿ ಅತ್ಯಾಚಾರ-ಕೊಲೆ; 50 ವರ್ಷದ ವ್ಯಕ್ತಿಗೆ ಮರಣದಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...