Homeಮುಖಪುಟಕ್ರಿಮಿನಲ್ ಪ್ರಕರಣ ಹಿಂಪಡೆಯಲು ಒತ್ತಾಯ: ದಲಿತರ ಗುಡಿಸಲು ಸುಟ್ಟ ಮೇಲ್ಜಾತಿಯವರು!

ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಒತ್ತಾಯ: ದಲಿತರ ಗುಡಿಸಲು ಸುಟ್ಟ ಮೇಲ್ಜಾತಿಯವರು!

- Advertisement -
- Advertisement -

ಮಧ್ಯಪ್ರದೇಶದ ದಾಟಿಯಾ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಮೇಲ್ಜಾತಿಯ ಗುಂಪೊಂದು ಹಲ್ಲೆ ಮಾಡಿದ್ದು, 2 ವರ್ಷದ ಹಿಂದಿನ ಪೊಲೀಸ್ ಪ್ರಕರಣ ಹಿಂಪಡೆಯಲು ನಿರಾಕರಿಸಿದ್ದಕ್ಕಾಗಿ ಸಹೋದರರಿಬ್ಬರನ್ನು ಥಳಿಸಿದ ನಂತರ ದಲಿತರ ಗುಡಿಸಲನ್ನೂ ಸುಟ್ಟುಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣವು ವೇತನ ಪಾವತಿಯ ವ್ಯತ್ಯಾಸಕ್ಕೆ ಸಂಬಂಧಿಸಿದ್ದಾಗಿದ್ದು, ಸಂದೀಪ್ ದೋಹರೆ ಅವರ ಸಹೋದರ ಸಂತ್ರಾಮ್ ದೋಹರೆ ಎಂಬುವವರು ಪವನ್ ಯಾದವ್ ಎನ್ನುವವರ ವಿರುದ್ಧ ದಲಿತ ದೌರ್ಜನ್ಯ ಪ್ರತಿಬಂಧಕ ಕಾಯ್ದೆಯಡಿಯಲ್ಲಿ 2018 ರಲ್ಲಿ ದೂರು ಸಲ್ಲಿಸಿದ್ದರು.

ಇದನ್ನೂ ಓದಿ:  ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ಆದರೆ ಪವನ್ ಯಾದವ್ ಕುಟುಂಬವು ತಮ್ಮ ಮೇಲಿನ ಪ್ರಕರಣವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದು, ಆಗಾಗ ಇದಕ್ಕೆ ಸಂಬಂಧಿಸಿದಂತೆ ಬೆದರಿಕೆ ಹಾಕುತ್ತಿದ್ದರು. ಆದರೆ ದಲಿತ ಕುಟುಂಬವು ಇದಕ್ಕೆ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡ ಪವನ್ ಯಾದವ್ ಮತ್ತು ಅವರ ಕುಟುಂಬದವರು ಸಂದೀಪ್ ದೋಹರೆ ಅವರ ಸಹೋದರ ಸಂತ್ರಾಮ್ ದೋಹರೆಯನ್ನು ರೈಫಲ್ ಬಟ್‌ಗಳಿಂದ ಹೊಡೆದು ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು: ಮೇಲ್ಚಲನೆಯೋ ಅಥವಾ ಮೂಲೆಗುಂಪೋ? – ಪುಸ್ತಕ ಸಂವಾದ

ಆರೋಪಿಗಳನ್ನು ಪವನ್ ಯಾದವ್, ಕಲ್ಲು ಯಾದವ್, ಅವರ ನಾಲ್ವರು ಸಂಬಂಧಿಕರು ಮತ್ತು ನೆರೆಹೊರೆಯವರು ಎಂದು ಗುರುತಿಸಲಾಗಿದೆ. ಅವರು ಐದು ಮೋಟರ್ ಸೈಕಲ್‌ಗಳಲ್ಲಿ 10-12 ಜನರ ಗುಂಪಿನೊಂದಿಗೆ ಬಂದು ಹಲ್ಲೆ ಮಾಡಿದ್ದಾರೆ. ನಂತರ ಗ್ರಾಮಸ್ಥರು ಪೊಲೀಸರಿಗೆ ವಿಷಯ ತಿಳಿಸಿ, ಆಸ್ಪತ್ರೆಗೆ ಸಾಗಿಸಿದ್ದಾರೆ.

ಈ ವರ್ಷದ ಜನವರಿಯಲ್ಲಿ, ಮಧ್ಯಪ್ರದೇಶದ ಸಾಗರ್ ನಗರದಲ್ಲಿ 24 ವರ್ಷದ ದಲಿತ ವ್ಯಕ್ತಿಯೊಬ್ಬನನ್ನು ನೆರೆಹೊರೆಯ ನಾಲ್ವರು ಸೇರಿ ಜೀವಂತವಾಗಿ ಸುಟ್ಟು ಹಾಕಿದ್ದರು


ಇದನ್ನೂ ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...