Homeಕರ್ನಾಟಕದಲಿತ ಪತ್ರಕರ್ತನ ಮೇಲೆ ಹಲ್ಲೆ-ಜಾತಿ ನಿಂದನೆ: ತುಮಕೂರು ಜಿಲ್ಲಾ ಪಬ್ಲಿಕ್ ಟಿವಿ ವರದಿಗಾರನ ಬಂಧನ

ದಲಿತ ಪತ್ರಕರ್ತನ ಮೇಲೆ ಹಲ್ಲೆ-ಜಾತಿ ನಿಂದನೆ: ತುಮಕೂರು ಜಿಲ್ಲಾ ಪಬ್ಲಿಕ್ ಟಿವಿ ವರದಿಗಾರನ ಬಂಧನ

- Advertisement -
- Advertisement -

ದಲಿತ ಸಮುದಾಯದ ಪತ್ರಕರ್ತನ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದಡಿ ತುಮಕೂರು ಜಿಲ್ಲೆ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಅವರನ್ನು ಬಂಧಿಸಲಾಗಿದ್ದು, ಆರೋಪಿತ ಪತ್ರಕರ್ತನ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಆರೋಪಿತ ಪತ್ರಕರ್ತ ಮಂಜುನಾಥ್ ತಾಳಮಕ್ಕಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪರಿಶಿಷ್ಟ ಜಾತಿಗೆ ಸೇರಿದ ಝೀ ಕನ್ನಡ ನ್ಯೂಸ್ ವರದಿಗಾರ ಜಿ.ಎನ್.ಮಂಜುನಾಥ್ (ಸಮಯ ಮಂಜು) ಎಂಬವರು ನೀಡಿರುವ ದೂರಿನ ಮೇರೆಗೆ ತಿಲಕ್ ಪಾರ್ಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ತಿಂಗಳ 21ರಂದು ಬೆಳಗ್ಗೆ ನಗರದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ನಡೆದ ಇ.ಡಿ. ದಾಳಿ ನಡೆದಿತ್ತು. ಅದರ ವರದಿ ಮಾಡಲು ಝೀ ಕನ್ನಡ ನ್ಯೂಸ್ ವರದಿಗಾರ ಮಂಜುನಾಥ್ ಕೂಡ ತೆರಳಿದ್ದರು. ಈ ವೇಳೆ, ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಮಂಜುನಾಥ್ ಮೇಲೆ ಜಾತಿ ನಿಂದನೆ ಮಾಡಿ, ತಮ್ಮ ಮೈಕ್‌ನಿಂದ ಥಳಿಸಿದ್ದಾರೆ.

“ಏನಲೇ ನೀನು ಬಂದಿದ್ದೀಯಾ, ನಿನಗೆ ನೀನೇ ಮಹಾ ಬುದ್ಧಿವಂತ ಅಂದ್ಕೊಂಡಿದ್ದೀಯಾ, ಏನೇ ಮಾಡಿದರೂ ಕೀಳು ಜಾತಿನೇ, ಕೀಳು ಜಾತಿ ಬುದ್ಧಿ ಬಿಡಲ್ಲ, ಮಾದಿಗರ ಬುದ್ಧಿ ಲದ್ದಿ” ಎಂದು ಜಾತಿ ನಿಂದನೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾನೆ. ಅಲ್ಲದೇ ತಾನು ಪ್ರತಿನಿಧಿಸುವ ಸುದ್ದಿವಾಹಿನಿಯ ಲೋಗೋವಿದ್ದ ಮೈಕ್ ನಿಂದ ದಲಿತ ಪತ್ರಕರ್ತನ ತಲೆ ಮತ್ತು ಕಿವಿಗೆ ಹಲ್ಲೆ ನಡೆಸಿದ್ದಾನೆ. ಈ ಬಗ್ಗೆ ತುಮಕೂರಿನ ತಿಲಕ್ ಪಾರ್ಕ್ ಠಾಣೆಗೆ ಸಂತ್ರಸ್ತ ಜಿ.ಎನ್.ಮಂಜುನಾಥ್ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ಪಬ್ಲಿಕ್ ಟಿವಿ ವರದಿಗಾರ ನಡೆಸಿದ ಹಲ್ಲೆಯಿಂದ ಜಿ.ಎನ್.ಮಂಜುನಾಥ್ ಅವರ ಕಿವಿ, ಬಲ ಕುತ್ತಿಗೆಗೆ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಮಂಜುನಾಥ್‌ ನೀಡಿದ ದೂರಿನ ಅನ್ವಯ ತನಿಖಾಧಿಕಾರಿಯಾಗಿರುವ ಮಧುಗಿರಿ ಡಿವೈಎಸ್‌ಪಿ ಅವರು ಆರೋಪಿ ಮಂಜುನಾಥ್ ತಾಳಮಕ್ಕಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹೊಲದಲ್ಲಿ ದನ ಮೇಯಿಸುವುದನ್ನು ಆಕ್ಷೇಪಿಸಿದ ದಲಿತ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...