ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ನಿರಂತರವಾಗಿ ವರದಿಯನ್ನು ಪ್ರಕಟಿಸಿ, ಆರೋಪಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಕಾರಣನಾಗಿದ್ದ ದಲಿತ ಪತ್ರಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ.
ಹರಿ ಸಿಂಗ್ ಚರಣ್ ಕೃತ್ಯದ ಪ್ರಮುಖ ಆರೋಪಿ ಎಂದು ಹೇಳಲಾಗಿದ್ದು, ಈತನ ವಿರುದ್ಧ ಈಗಾಗಲೇ ಎನ್‌ಡಿಪಿಎಸ್ ಕಾಯ್ದೆ, ದೈಹಿಕ ಹಲ್ಲೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದೆ. ಮಾಹಿತಿಯ ಪ್ರಕಾರ, ಪತ್ರಕರ್ತ ಹೀರಾ ಲಾಲ್ ಮೇಘವಾಲ್ ಮೇಲೆ ಈತನ ಆಜ್ಞೆಯ ಮೇರೆಗೆ ದಾಳಿ ನಡೆಸಲಾಗಿದೆ.
ಜೈಸಲ್ಮೇರ್ ಪೊಲೀಸರ ಪ್ರಕಾರ, ನಾಲ್ಕು ತಿಂಗಳ ಹಿಂದೆ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಹೀರಾಲಾಲ್ ಮೇಘವಾಲ್ ಘಟನೆ ಬಗ್ಗೆ ನಿರಂತರವಾಗಿ ವರದಿ ಮಾಡಿದ್ದರಿಂದ, ಆತನನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿತ್ತು.
ಘಟನೆಯ ಬಗ್ಗೆ ಜೈಸಲ್ಮೇರ್ ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್ಪಿ) ಭವಾನಿ ಸಿಂಗ್ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡುತ್ತಾ, ಆರೋಪಿಯನ್ನು ಬಂಧಿಸಲಾಗಿದೆ ಮತ್ತು ಈ ಕುರಿತು ತನಿಖೆ ನಡೆಯುತ್ತಿದೆ. ಮೇ 12ರ ರಾತ್ರಿ ಐವರು ಹೀರಾ ಲಾಲ್ ಮೇಲೆ ಹಲ್ಲೆ ನಡೆಸಿ ಅಮಾನುಷವಾಗಿ ಥಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಿದ್ದು, ನಾಲ್ವರು ತಲೆಮರೆಸಿಕೊಂಡಿದ್ದಾರೆ. ನಾವು ಆರೋಪಿಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದ್ದೇವೆ, ಶೀಘ್ರದಲ್ಲೇ ಎಲ್ಲಾ ಆರೋಪಿಗಳನ್ನು ಬಂಧಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.
ಇನ್ನು ಪತ್ರಕರ್ತನ ಮೇಲಿನ ಹಲ್ಲೆ ಪ್ರಕರಣ ಬಯಲಾಗುತ್ತಿದ್ದಂತೆ ವ್ಯಾಪಕವಾದ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮವನ್ನು ಕೈಗೊಂಡು, ನಿರ್ಭೀತಿಯಿಂದ ಪತ್ರಕರ್ತರಿಗೆ ಕೆಲಸ ಮಾಡಲು ಅನು ಮಾಡಿಕೊಡಬೇಕು ಎಂದು ಆಗ್ರಹ ವ್ಯಕ್ತವಾಗಿದೆ.
ಇದನ್ನು ಓದಿ: ಬಿಜೆಪಿ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿಫಲ; ಚು.ಆಯೋಗವನ್ನು ತರಾಟೆಗೆ ತೆಗೆದುಕೊಂಡ ಕಲ್ಕತ್ತಾ ಹೈಕೋರ್ಟ್


