Homeಕರ್ನಾಟಕದಲಿತ ನಾಯಕ, ಮಾಜಿ ಶಾಸಕರಾದ ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸ: ಪುತ್ರಿ, ಲೇಖಕಿ ಜಾಹ್ನವಿ ಆರೋಪ

ದಲಿತ ನಾಯಕ, ಮಾಜಿ ಶಾಸಕರಾದ ಡಾ.ಬಿ.ಎಂ ತಿಪ್ಪೇಸ್ವಾಮಿ ಸಮಾಧಿ ಧ್ವಂಸ: ಪುತ್ರಿ, ಲೇಖಕಿ ಜಾಹ್ನವಿ ಆರೋಪ

- Advertisement -
- Advertisement -

ದಾವಣಗೆರೆಯ ದಲಿತ ಮುಖಂಡರು, ಮಾಜಿ ಶಾಸಕರು ಆದ ದಿವಂಗತ ಡಾ. ಬಿ.ಎಂ. ತಿಪ್ಪೇಸ್ವಾಮಿ ಹಾಗೂ ಅವರ ಕುಟುಂಬದ ಮೂರು ಸದಸ್ಯರ ಸಮಾಧಿಗಳನ್ನು ಸಮಾಧಿಯನ್ನು ಅತಿಕ್ರಮಣಕಾರರು ಧ್ವಂಸಗೊಳಿಸಿ, ದೌರ್ಜನ್ಯವೆಸಗುತ್ತಿದ್ದಾರೆ ಎಂದು ತಿಪ್ಪೇಸ್ವಾಮಿಯವರ ಪುತ್ರಿಯಾದ ಲೇಖಕಿ ಬಿ.ಟಿ ಜಾಹ್ನವಿಯವರು ಆರೋಪಿಸಿದ್ದಾರೆ.

ನವೆಂಬರ್ 20ರ ಭಾನುವಾರ ಮಧ್ಯಾನ್ನ 11 ಗಂಟೆ ಸುಮಾರಿಗೆ ಯಾವುದೇ ಮುನ್ಸೂಚನೆ ಇಲ್ಲದೆ ಗಣೇಶ ಹುಲ್ಲುಮನೆ ಮತ್ತು ಇತರರು ಜೆಸಿಬಿ ಯಿಂದ ಧ್ವಂಸ ಮಾಡಿರುವುದು ಕುಟುಂಬದ ಸದಸ್ಯರಲ್ಲಿ ಹಾಗೂ ಮಾದಿಗ ಸಮಾಜದಲ್ಲಿ ಆಘಾತ ಉಂಟು ಮಾಡಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಡಾ. ಬಿ.ಎಂ. ತಿಪ್ಪೇಸ್ವಾಮಿ ಇವರು ಮಾದಿಗ ಸಮಾಜದಲ್ಲಿ ಜನಿಸಿ ಸ್ವಂತ ಶ್ರಮದಿಂದ ದೇಶ-ವಿದೇಶಗಳಲ್ಲಿ ಉನ್ನತ ಶಿಕ್ಷಣ ಪಡೆದು ಸ್ಥಳೀಯ ವೈದ್ಯಕೀಯ ಕಾಲೇಜಿನ ಮುಖ್ಯಸ್ಥರಾಗಿ ಸಾಕಷ್ಟು ಜನರಿಗೆ ನೆರವಾಗಿದ್ದಾರೆ. ಕೆಪಿಎಸ್‌ಸಿ ಸದಸ್ಯರಾಗಿ ಹಲವಾರು ನಿರುದ್ಯೋಗಿ ಯುವಜನರಿಗೆ ಮಾರ್ಗದರ್ಶನ ನೀಡಿ ಉದ್ಯೋಗ ದೊರಕಿಸಿಕೊಟ್ಟಿದ್ದಾರೆ. 1985 ರಲ್ಲಿ ಭರಮಸಾಗರದ ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿ, ಎಸ್ಸಿ-ಎಸ್ಟಿ ಕಮಿಷನ್ ಅಧ್ಯಕ್ಷರಾಗಿ ಈ ಜನಾಂಗದ ಏಳಿಗೆಗಾಗಿ ಶ್ರಮಪಟ್ಟಿದ್ದಾರೆ. ದಲಿತ ಮಕ್ಕಳ ವಿದ್ಯಾಭ್ಯಾಸಕ್ಕೆ ಶ್ರಮಿಸಿದ್ದಾರೆ. ಅಂತಹ ವ್ಯಕ್ತಿಯ ಸಮಾಧಿ ಧ್ವಂಸಗೊಳಿಸಿರುವುದು ವಿಷಾಧನೀಯ ಎಂದು ಬಿ.ಟಿ ಜಾಹ್ನವಿ ತಿಳಿಸಿದ್ದಾರೆ.

1978 ರಲ್ಲಿ ನಿರುದ್ಯೋಗಿ ವಿದ್ಯಾವಂತರಾಗಿದ್ದ ಡಾ.ಬಿ.ಎಂ.ತಿಪ್ಪೇಸ್ವಾಮಿ ಅವರ ಹಿರಿಯ ಮಗ ಬಿ.ಟಿ.ಮಲ್ಲಿಕಾರ್ಜುನ ಇವರಿಗೆ ಸರ್ಕಾರದಿಂದ ಸ್ವ-ಉದ್ಯೊಗಕ್ಕಾಗಿ ದಾವಣಗೆರೆ ನಿಟ್ಟುವಳ್ಳಿಯಲ್ಲಿ 2 ಎಕರೆ 11 ಗುಂಟೆ ಭೂ ಮಂಜೂರಾಗಿತ್ತು. ಈ ಸ್ಥಳವನ್ನು ಡೈರಿ ಹಾಗೂ ಇತರೆ ಸ್ವಯಂ ಉದ್ಯೋಗಕ್ಕೆ ಉಪಯೋಗಿಸಲಾಗುತ್ತಿತ್ತು. ಡಾ.ಬಿ.ಎಂ.ತಿಪ್ಪೇಸ್ವಾಮಿ ಇವರು 1990 ರಲ್ಲಿ ಮೃತಪಟ್ಟಿದ್ದು ಮಂಜೂರಾದ ಈ ಜಮೀನಿನ ಒಂದು ಭಾಗದಲ್ಲಿ ಅಂತ್ಯಕ್ರಿಯೆ ಮಾಡಿ ಸಮಾಧಿಯನ್ನು ನಿರ್ಮಾಣ ಮಾಡಲಾಗಿತ್ತು, ನಂತರ 1999 ರಲ್ಲಿ ನಮ್ಮ ತಿಪ್ಪೇಸ್ವಾಮಿಯವರ 2ನೇ ಮಗನಾದ ಬಿ.ಟಿ.ಮೋಹನ್ ಅವರನ್ನು, ನಂತರ 2003 ರಲ್ಲಿ ಅವರ ಧರ್ಮಪತ್ನಿಯಾದ ಶ್ರೀಮತಿ ಯಲ್ಲಮ್ಮನವರನ್ನು ಸದರಿ ಸ್ಥಳದಲ್ಲಿ ಅಂತ್ಯಕ್ರಿಯೆ ಮಾಡಲಾಗಿತ್ತು, ಆನಂತರ 2016 ರಲ್ಲಿ ನಿಧನರಾದ ಅವರ ಹಿರಿಯ ಮಗ ಮಲ್ಲಿಕಾರ್ಜುನರವರನ್ನೂ ಸಹ ಅಲ್ಲಿಯೇ ಅಂತ್ಯಕ್ರಿಯೆ ಮಾಡಿ ನಾಲ್ಕು ಸಮಾಧಿಗಳನ್ನು ನಿರ್ಮಾಣ ಮಾಡಲಾಗಿತ್ತು ಹಾಗೂ ಆ ಭೂಮಿಯಲ್ಲಿ ನಮ್ಮ ಕುಟುಂಬದ ನಾಲ್ವರ ಸಮಾಧಿ ಇದ್ದ ಕಾರಣ ಆಗಿನಂದಲೂ ಅದನ್ನು ಪೂಜ್ಯಸ್ಥಾನವಾಗಿ ಭಾವಿಸಿ ಪೂಜೆ ಮಾಡಿಕೊಂಡು ಬರಲಾಗುತ್ತಿತ್ತು. ಹಾಗೂ ಆ ಜಾಗವನ್ನು ಬೇರೆ ಯಾವುದೇ ವೈಯಕ್ತಿಕ ಉದ್ದೇಶಕ್ಕೆ ಬಳಸದೇ ನಮಗೆ ಅನುಕೂಲವಾದ ಕಾಲಕ್ಕೆ ಡಾ.ತಿಪ್ಪೇಸ್ವಾಮಿಯವರ ಸ್ಮಾರಕವನ್ನು ಸ್ಥಾಪಿಸಿ ಅಲ್ಲಿ ನಮ್ಮ ಸಮಾಜದ ಏಳಿಗೆ ಮತ್ತು ಕಲ್ಯಾಣಕ್ಕಾಗಿ ಅನೇಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಉದ್ದೇಶವಿತ್ತು ಎಂದು ಬಿ.ಟಿ ಜಾಹ್ನವಿಯವರು ತಿಳಿಸಿದ್ದಾರೆ.

ತಿಪ್ಪೇಸ್ವಾಮಿಯವರು

ಈ ಮಧ್ಯೆ ಸದರಿ ಭೂಮಿಗೆ ಸಂಬಂಧಿಸಿದಂತೆ ಕೆಲವರು ನ್ಯಾಯಾಲಯಕ್ಕೆ ಹೋಗಿದ್ದು, 2002 ರಲ್ಲಿ ಮಲ್ಲಿಕಾರ್ಜುನ ಅವರಿಗೆ ಮಂಜೂರಾದ ಭೂಮಿ ನ್ಯಾಯಸಮ್ಮತವಾಗಿದೆ ಎಂದು ಮಾನ್ಯ ಉಚ್ಚನ್ಯಾಯಾಲಯವು ಆದೇಶ ನೀಡಿರುತ್ತದೆ ಹಾಗೂ ಈಗ ಮಲ್ಲಿಕಾರ್ಜುನ ಅವರ ಮರಣದ ನಂತರ ಅವರ ಪತ್ನಿ ಪುಷ್ಪಲತಾ ಹಾಗೂ ಮಕ್ಕಳಾದ, ರಾಹುಲ್ ಹಾಗು ನಕುಲ್ ಅವರಿಗೆ ಅದು ವರ್ಗಾವಣೆಯಾಗಿರುತ್ತದೆ. ಹೀಗಿರುವಾಗ ಕಾನೂನು ಬಾಹಿರವಾಗಿ ಗಣೇಶ ಹುಲ್ಲುಮನೆ ಮತ್ತು ಇತರರು “ಈ ಜಾಗ ನಮ್ಮದು, ಇಲ್ಲಿರುವ ಸಮಾಧಿ ಯಾವುದೋ, ಯಾರದೋ ನಮಗೆ ತಿಳಿದಿಲ್ಲ ಅದು ಯಾರದ್ದೇ ಆಗಿರಲಿ ಆ ಸಮಾಧಿಯನ್ನ ನಾವು ಒಡೆದುಹಾಕಿದೆವು” ಎಂದು ಹೇಳೀ ಹಲ್ಲೆಗೆ ಮುಂದಾಗಿ ದೌರ್ಜನ್ಯ ಎಸಗಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

32 ವರ್ಷಗಳಿಂದ ಅಲ್ಲೇ ಇದ್ದ ಡಾ.ತಿಪ್ಪೇಸ್ವಾಮಿಯವರ ಸಮಾದಿಯನ್ನು ಅವರಿಗೆ ಅರಿವಿದ್ದೇ ದ್ವಂಸ ಮಾಡಿರುವುದು ತುಂಬಾ ಖಂಡನೀಯ ಮತ್ತು ಹೇಯ ಕೃತ್ಯ. ಇದರಿಂದ ಇದರಿಂದ ಕುಟುಂಬದ ಸದಸ್ಯರು ಹಾಗೂ ಜನಾಂಗದ ಮುಖಂಡರಿಗೆ ಆಘಾತವಾಗಿದೆ. ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದೇವೆ. ಈ ದೌರ್ಜನ್ಯವನ್ನು ಖಂಡಿಸಿ ನವೆಂಬರ್ 24ರ ಗುರುವಾರ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರು ಮತದಾರರ ಮಾಹಿತಿ ಕಳ್ಳತನದಲ್ಲಿ ಬಿಜೆಪಿಯ ನೇರ ಕೈವಾಡ; ಏಜೆಂಟರಿಗೆ ಪಕ್ಷದ ಕಚೇರಿಯಲ್ಲೆ ತರಬೇತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...