Homeಮುಖಪುಟದಲಿತ ಮಹಾಸಂಘದ ಅಧ್ಯಕ್ಷನ ಇರಿದು ಹತ್ಯೆ : ಹುಟ್ಟು ಹಬ್ಬ ಆಚರಣೆ ವೇಳೆಯೇ ಘಟನೆ

ದಲಿತ ಮಹಾಸಂಘದ ಅಧ್ಯಕ್ಷನ ಇರಿದು ಹತ್ಯೆ : ಹುಟ್ಟು ಹಬ್ಬ ಆಚರಣೆ ವೇಳೆಯೇ ಘಟನೆ

- Advertisement -
- Advertisement -

ಮಹಾರಾಷ್ಟ್ರ ದಲಿತ ಮಹಾಸಂಘದ ಅಧ್ಯಕ್ಷ ಉತ್ತಮ್ ಮೋಹಿತೆ (38) ಅವರನ್ನು ಮಂಗಳವಾರ ಸಂಜೆ (ನ.11) ಸಾಂಗ್ಲಿಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದ ಸಂದರ್ಭದಲ್ಲೇ ಎಂಟು ಜನರ ತಂಡ ಇರಿದು ಹತ್ಯೆ ಮಾಡಿದೆ. ಹಳೆಯ ದ್ವೇಷದ ಹಿನ್ನೆಲೆ ಕೃತ್ಯವೆಸಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನಾದ ಶಾರುಖ್ ರಫೀಕ್ ಶೇಖ್ (26) ಎಂಬಾತ ಗಲಾಟೆಯಲ್ಲಿ ತೀವ್ರವಾಗಿ ಗಾಯಗೊಂಡು ಬುಧವಾರ (ನ.12) ಬೆಳಿಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಮೋಹಿತೆ ಅವರ ಹುಟ್ಟು ಹಬ್ಬ ಕಾರ್ಯಕ್ರಮ ಮುಗಿದು ಅತಿಥಿಗಳು ನಿರ್ಗಮಿಸುತ್ತಿದ್ದರು. ಈ ವೇಳೆ ಚಾಕು, ಕಬ್ಬಿಣದ ರಾಡ್ ಮತ್ತು ದೊಣ್ಣೆಗಳೊಂದಿಗೆ ಶಸ್ತ್ರ ಸಜ್ಜಿತವಾಗಿ ಆಗಮಿಸಿದ ಪುರುಷರ ಗುಂಪು ದಾಳಿ ಪ್ರಾರಂಭಿಸಿದೆ. ತನ್ನ ಜೀವಕ್ಕೆ ಅಪಾಯವಿದೆ ಎಂದು ಅರಿತ ಮೋಹಿತೆ, ರಕ್ಷಣೆಗಾಗಿ ಮನೆಯೊಳಗೆ ಓಡಿ ಹೋಗಿದ್ದರು. ಅಲ್ಲಿಗೆ ನುಗ್ಗಿದ ತಂಡ ಮೋಹಿತೆ ಅವರ ಹೊಟ್ಟೆ ಮತ್ತು ಎದೆಗೆ ಹಲವು ಬಾರಿ ಇರಿದಿದೆ. ತಲೆ ಮತ್ತು ತೋಳುಗಳಿಗೆ ಕಬ್ಬಿಣದ ರಾಡ್‌ಗಳು ಮತ್ತು ದೊಣ್ಣೆಗಳಿಂದ ಹೊಡೆದಿದ್ದಾರೆ ಎಂದು ವರದಿಗಳು ಹೇಳಿವೆ.

ಈ ಘರ್ಷಣೆಯ ಸಮಯದಲ್ಲಿ, ದಾಳಿಕೋರರಲ್ಲಿ ಒಬ್ಬನಾದ ಶೇಖ್ ಎಂಬಾತನಿಗೆ ತೊಡೆಯ ಮೇಲೆ ತೀವ್ರವಾದ ಇರಿತದ ಗಾಯವಾಗಿತ್ತು. ಇದು ಆಕಸ್ಮಿಕವಾಗಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮೋಹಿತೆ ಅವರನ್ನು ಸೋದರಳಿಯ ಸಾಂಗ್ಲಿ ಸಿವಿಲ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ವೈದ್ಯರು ಅವರು ಆಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಈ ನಡುವೆ ದಾಳಿಕೋರರು ಕೂಡ ತೀವ್ರವಾಗಿ ಗಾಯಗೊಂಡಿದ್ದ ಶೇಖ್ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದರು. ಆದರೆ, ಬುಧವಾರ ಬೆಳಿಗ್ಗೆ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಹುಟ್ಟು ಹಬ್ಬ ಆಚರಣೆಯ ಸಮಯದಲ್ಲಿ ಮೋಹಿತೆ ಮತ್ತು ಆರೋಪಿಗಳಲ್ಲಿ ಒಬ್ಬನಾದ ಗಣೇಶ್ ಮೋರೆ ನಡುವೆ ವಾಗ್ವಾದ ನಡೆದಿತ್ತು. ಸ್ಥಳದಿಂದ ಹೊರಡುವ ಮೊದಲು, “ನಿನ್ನನ್ನು ಬಿಡುವುದಿಲ್ಲ” ಎಂದು ಗಣೇಶ್ ಮೋಹಿತೆಗೆ ಬೆದರಿಕೆ ಹಾಕಿದ್ದ. ಈ ಬೆನ್ನಲ್ಲೇ ದಾಳಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೋಹಿತೆ ಅವರ ಪತ್ನಿ ಜ್ಯೋತಿ ನೀಡಿದ ದೂರಿನ ಆಧಾರದ ಮೇಲೆ, ಸಾಂಗ್ಲಿಯ ಇಂದಿರಾನಗರ ಪ್ರದೇಶದ ನಿವಾಸಿಗಳಾದ ಗಣೇಶ್ ಮೋರೆ, ಸತೀಶ್ ಲೋಖಂಡೆ, ಶಾರುಖ್ ಶೇಖ್ (ಮೃತ), ಬನ್ಯಾ ಅಲಿಯಾಸ್ ಯಶ್ ಲೋಂಧೆ, ಅಜಯ್ ಘಾಡ್ಗೆ, ಜಿತೇಂದ್ರ ಲೋಂಧೆ, ಯೋಗೇಶ್ ಶಿಂಧೆ ಮತ್ತು ಸಮೀರ್ ಧೋಲೆ ಎಂಬ ಎಂಟು ಜನರ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ.

ಮಹಿಳಾ ಸಿಬ್ಬಂದಿಯ ‘ಮುಟ್ಟು ಸಾಬೀತಿಗೆ ಫೋಟೋ’ ಕೇಳಿದ ಪ್ರಕರಣ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಸ್‌ಸಿಬಿಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...