Homeಮುಖಪುಟದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಮೂತ್ರ ವಿಸರ್ಜನೆ: 6 ಮಂದಿ ದುಷ್ಕರ್ಮಿಗಳ ಬಂಧನ

ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಮೂತ್ರ ವಿಸರ್ಜನೆ: 6 ಮಂದಿ ದುಷ್ಕರ್ಮಿಗಳ ಬಂಧನ

- Advertisement -
- Advertisement -

ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯಲ್ಲಿ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ಶ್ಯಾಮ್ ಕುಮಾರ್ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿ  ಪ್ರಕರಣ ದಾಖಲಿಸಿಕೊಂಡ ಪೊಲೀಸರು ಎಲ್ಲಾ 6 ಆರೋಪಿಗಳನ್ನು ಬಂಧಿಸಿದ್ದಾರೆ.

ದಲಿತ ಯುವಕನನ್ನು 6 ಮಂದಿ ಆರೋಪಿಗಳು 4 ಗಂಟೆಗಳ ಕಾಲ ಥಳಿಸಿದ್ದು, ನೀರು ಕೇಳಿದಾಗ ಆರೋಪಿಗಳು  ಆತನ ಮೈಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಎಸ್‌ಸಿ ಸೆಲ್ ಘಟನೆಯನ್ನು ಖಂಡಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆಯನ್ನು ಮಾಡಿದೆ. ಟಿಡಿಪಿ ಎಸ್ಸಿ ಸೆಲ್ ಅಧ್ಯಕ್ಷ ಎಂಎಂಎಸ್ ರಾಜು ನೇತೃತ್ವದಲ್ಲಿ ಕಂಚಿಕಚಾರ್ಲ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದೆ.

ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಟಿಡಿಪಿ ಎಸ್‌ಸಿ ಸೆಲ್ ಅಧ್ಯಕ್ಷ ಎಂಎಂಎಸ್ ರಾಜು, ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಆಡಳಿತದಲ್ಲಿ ದಲಿತರ ಮೇಲಿನ ಹಲ್ಲೆಗಳು ಹೆಚ್ಚಿವೆ. ರಾಜ್ಯದಲ್ಲಿ ದಲಿತರ ಮೇಲೆ  ದಾಳಿಗಳು ನಡೆಯುತ್ತಿವೆ. ಶ್ಯಾಮ್ ಕುಮಾರ್ ಎಂಬ ಬಾಲಕನ ಮೇಲೆ ಆಡಳಿತ ಪಕ್ಷದ ಬೆಂಬಲಿಗರು  ಹಲ್ಲೆ ಮಾಡಿದ್ದಾರೆ. ಅವರಿಗೆ ಸ್ಟೇಷನ್ ಜಾಮೀನು ನೀಡಲಾಯಿತು. ದಲಿತ ಯುವಕನ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ ನಂತರವೂ ಅವರು ಭಯವಿಲ್ಲದೆ ಹೊರಗೆ ಓಡಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಶ್ಯಾಮ್ ಅವರ ದವಡೆಗೆ ಆಪರೇಷನ್ ಮಾಡುವಂತೆ ವೈದ್ಯರು ಸಲಹೆ ನೀಡಿದ್ದು, ಅದಕ್ಕೆ ಮೂರು ದಿನ ಬೇಕು ಎಂದು ಎಂಎಂಎಸ್ ರಾಜು ಹೇಳಿದ್ದು, ದಲಿತರ ಮೇಲಿನ ಹಲ್ಲೆ ಖಂಡನಾರ್ಹವಾಗಿದೆ. ಈ ಘಟನೆಯಲ್ಲಿ ಭಾಗಿಯಾದ ಎಲ್ಲರನ್ನೂ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಡ ನಗರ ಪೊಲೀಸ್ ಕಮಿಷನರ್ ಕಾಂತಿ ರಾಣಾ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದು, ಕಂಚಿಕಚೆರ್ಲಾ ಗ್ರಾಮದ ನಿವಾಸಿ ಶ್ಯಾಮ್ ಕುಮಾರ್ ಎಂಬ ದಲಿತ ಯುವಕನ ಮೇಲೆ ಆತನ ಹಳೆಯ ಸ್ನೇಹಿತ ಹರೀಶ್ ರೆಡ್ಡಿ ಮತ್ತು ಇತರ ಐವರು ಸೇರಿ ಹಲ್ಲೆ ನಡೆಸಿದ್ದಾರೆ. ಹರೀಶ್ ರೆಡ್ಡಿ ಶ್ಯಾಮ್ ಕುಮಾರ್‌ನನ್ನು ಶಿವಸಾಯಿ ಕ್ಷೇತ್ರ ಪ್ರದೇಶಕ್ಕೆ ಕರೆದು ಅಲ್ಲಿಂದ ಬಲವಂತವಾಗಿ ಕಾರಿನಲ್ಲಿ ಗುಂಟೂರಿಗೆ ಕರೆದೊಯ್ದು ಹಲ್ಲೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಗಾಝಾದ ಅಲ್-ಮಘಾಝಿ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ದಾಳಿ: 30ಕ್ಕೂ ಹೆಚ್ಚು ಜನರ ಹತ್ಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...