Homeದಲಿತ್ ಫೈಲ್ಸ್ನಲ್ಲಿ ನೀರು ಕುಡಿದದ್ದಕ್ಕೆ ಹಲ್ಲೆ: ದಲಿತ ಯುವಕ ಸಾವು

ನಲ್ಲಿ ನೀರು ಕುಡಿದದ್ದಕ್ಕೆ ಹಲ್ಲೆ: ದಲಿತ ಯುವಕ ಸಾವು

- Advertisement -
- Advertisement -

ಉತ್ತರ ಪ್ರದೇಶದ ಬದೌನ್‌ನಲ್ಲಿ ನಲ್ಲಿಯಿಂದ ನೀರು ಕುಡಿದಿದ್ದಕ್ಕಾಗಿ ಥಳಿತಕ್ಕೊಳಗಾಗಿದ್ದ 24 ವರ್ಷದ ದಲಿತ ಯುವಕ ಸಾವನ್ನಪ್ಪಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಮಂಗಳವಾರ ವರದಿ ಮಾಡಿದೆ.

ಮೃತರನ್ನು ಕಮಲೇಶ್ ಎಂದು ಗುರುತಿಸಲಾಗಿದೆ. ಬದೌನ್ ಜಿಲ್ಲೆಯ ಉಸಾಹತ್ ಪೊಲೀಸ್‌ ಠಾಣೆ ವ್ಯಾಪ್ತಿಯ ಸಾತ್ರಾ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ.

ನಲ್ಲಿಯಿಂದ ನೀರು ಕುಡಿದಿದ್ದಕ್ಕಾಗಿ ಸೂರಜ್ ರಾಥೋಡ್ ಮತ್ತು ಆತನ ಸಹಚರರು ಕಮಲೇಶ್ ಅವರಿಗೆ ಬಡಿಗೆಗಳಿಂದ ಥಳಿಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಕಮಲೇಶ್‌ನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಅವರು ಮೃತಪಟ್ಟಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕಿಶೋರ್ ಶ್ರೀವಾಸ್ತವ ತಿಳಿಸಿದ್ದಾರೆ.

ಮೃತನ ತಂದೆ ಜಗದೀಶ್ ಅವರು ನೀಡಿದ ದೂರಿನಂತೆ ಆರೋಪಿ ಸೂರಜ್ ರಾಥೋಡ್‌ನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಘಟನೆ ಕುರಿತು ತನಿಖೆ ನಡೆಸಲಾಗ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಲಿತರ ಮೇಲೆ ನಿಲ್ಲದ ದೌರ್ಜನ್ಯ :

ದೇಶದ ವಿವಿಧ ಭಾಗಗಳಲ್ಲಿ ದಲಿತರು, ಅಲ್ಪ ಸಂಖ್ಯಾತರ ಮೇಲಿನ ದೌರ್ಜನ್ಯ ಮುಂದುವರೆಯುತ್ತಲೇ ಇದೆ. ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ದಲಿತ ದೌರ್ಜನ್ಯ ಪ್ರಕರಣಗಳು ಸಾಮಾನ್ಯ ಎಂಬಂತಾಗಿದೆ.

ಕೆಲ ದಿನಗಳ ಹಿಂದೆಯಷ್ಟೇ ಉತ್ತರಪ್ರದೇಶದ ಮೀರತ್‌ನಲ್ಲಿ 12ನೇ ತರಗತಿ ವಿದ್ಯಾರ್ಥಿಯ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿ ಮುಖಕ್ಕೆ ಮೂತ್ರ ವಿಸರ್ಜನೆ ಮಾಡಿದ ಆಘಾತಕಾರಿ ಘಟನೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯಲ್ಲಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಮೂತ್ರ ವಿಸರ್ಜನೆ ಮಾಡಿದ ಅಮಾನವೀಯ ಘಟನೆ ನಡೆದಿತ್ತು. ದಲಿತ ಯುವಕನನ್ನು 6 ಮಂದಿ ಆರೋಪಿಗಳು 4 ಗಂಟೆಗಳ ಕಾಲ ಥಳಿಸಿದ್ದು, ನೀರು ಕೇಳಿದಾಗ ಆತನ ಮೈಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಇದೇ ತಿಂಗಳಲ್ಲಿ, ಇಬ್ಬರು ದಲಿತ ಯುವಕರ ಮೇಲೆ ಹಲ್ಲೆ ನಡೆಸಿ, ದರೋಡೆ ಮಾಡಿದ್ದಲ್ಲದೆ, ಅವರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಆರು ಜನರನ್ನು ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

ಇದನ್ನೂ ಓದಿ : ಹೆಣ್ಣು ಭ್ರೂಣ ಹತ್ಯೆ ಜಾಲ ಬೇಧಿಸಿದ ಪೊಲೀಸರು: 9 ಆರೋಪಿಗಳ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...