Homeದಲಿತ್ ಫೈಲ್ಸ್ದಲಿತ ವ್ಯಕ್ತಿಗೆ ಥಳಿಸಿ, ತಲೆ ಬೋಳಿಸಿ ಮೆರವಣಿಗೆ ಮಾಡಿದ ಬಜರಂಗದಳದ ಕಾರ್ಯಕರ್ತರು

ದಲಿತ ವ್ಯಕ್ತಿಗೆ ಥಳಿಸಿ, ತಲೆ ಬೋಳಿಸಿ ಮೆರವಣಿಗೆ ಮಾಡಿದ ಬಜರಂಗದಳದ ಕಾರ್ಯಕರ್ತರು

- Advertisement -
- Advertisement -

ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಜನರ ಮನವೊಲಿಸಲು ಪ್ರಯತ್ನಿಸಿದರು ಎಂಬ ಆರೋಪದ ಮೇಲೆ 47 ವರ್ಷದ ದಲಿತ ವ್ಯಕ್ತಿಗೆ ಥಳಿಸಿ, ತಲೆ ಬೋಳಿಸಿ ಮೆರವಣಿಗೆ ನಡೆಸಿದ ಆರೋಪ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಬೆಹ್ಲೋಪುರ್ ಅಲೈ ಗ್ರಾಮದಲ್ಲಿ ಶುಕ್ರವಾರ (ಡಿ.27) ನಡೆದಿದೆ.

“ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸಿದ ಆರೋಪ ಮಾಡಿ, ನನಗೆ ಸರಿಯಾದ ಪಾಠ ಕಲಿಸುವುದಾಗಿ ಹೇಳಿ ಪ್ರಬಲವರ್ಗದ (ಮೇಲ್ಜಾತಿ) ಜನರ ಗುಂಪು ನನಗೆ ಮತ್ತು ನನ್ನ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದೆ” ಎಂದು ಸಂತ್ರಸ್ತ ಶಿವಬದನ್ ಅವರು ಆರೋಪಿಸಿದ್ದಾರೆ.

ವರದಿಗಳ ಪ್ರಕಾರ, ಮತಾಂತರ ತಡೆ ಕಾಯ್ದೆಯಡಿ ಎರಡು ವರ್ಷಗಳ ಹಿಂದೆ ಬಂಧನಕ್ಕೊಳಗಾಗಿದ್ದ ಶಿವಬದನ್ ಅವರು ಜಾಮೀನು ಪಡೆದು ಹೊರ ಬಂದಿದ್ದರು. ಈ ವೇಳೆ ನಡುವೆ ಅವರಿಗೆ ಥಳಿಸಲಾಗಿದೆ. ಘಟನೆ ಸಂಬಂಧ ಶಿವಬದನ್ ನೀಡಿದ ದೂರು ಆಧರಿಸಿ ಫತೇಪುರ್ ಪೊಲೀಸರು ರೋಹಿತ್ ದೀಕ್ಷಿತ್, ಲವಲೇಶ್ ಸಿಂಗ್, ಸೋಮಕರನ್ ಮತ್ತು ಕೆಲ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಈ ಮೂವರೂ ಹಿಂದುತ್ವ ಸಂಘಟನೆ ಬಜರಂಗದಳದೊಂದಿಗೆ ಸಂಬಂಧ ಹೊಂದಿರುವವರು ಎಂದು ಹೇಳಲಾಗಿದೆ.

“ಪ್ರಕರಣದ ತನಿಖೆ ನಡೆಯುತ್ತಿದೆ. ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದುವರೆಗೆ ಯಾರನ್ನೂ ಬಂಧಿಸಿಲ್ಲ” ಎಂದು ಫತೇಪುರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿ.ಎಸ್.ಮಿಶ್ರಾ ಮಾಹಿತಿ ನೀಡಿದ್ದಾರೆ.

“ಡಿಸೆಂಬರ್ 26ರಂದು ರೈಲ್ವೆ ನಿಲ್ದಾಣಕ್ಕೆ ತೆರಳುವ ಸಲುವಾಗಿ ಟ್ಯಾಕ್ಸಿ ಹಿಡಿಯಲು ನಾನು ಹಳ್ಳಿಯ ಕ್ರಾಸಿಂಗ್‌ನಲ್ಲಿ ನಿಂತಿದ್ದೆ. ಈ ವೇಳೆ ಅಲ್ಲಿಗೆ ಬಂದ ಆರೋಪಿಗಳು ನನಗೆ ತಕ್ಕ ಪಾಠ ಕಲಿಸುವುದಾಗಿ ಹೇಳಿ ನಿಂದಿಸಿದರು. ಮರುದಿನ ಬೆಳಿಗ್ಗೆ ಮನೆಗೆ ಹಿಂದಿರುಗಿದಾಗ ಆರೋಪಿಗಳಾದ ರೋಹಿತ್ ದೀಕ್ಷಿತ್, ಲವಲೇಶ್ ಸಿಂಗ್ ಮತ್ತು ಸೋಮಕರನ್ ನೇತೃತ್ವದ ಜನರ ಗುಂಪು ನನ್ನ ಮೇಲೆ ಹಲ್ಲೆ ನಡೆಸಿತು. ಅವರು ಹೆಂಡತಿ ಮಕ್ಕಳು ಸೇರಿದಂತೆ ನನ್ನ ಕುಟುಂಬವನ್ನೂ ಗುರಿಯಾಗಿಸಿದ್ದಾರೆ” ಎಂದು ಶಿವಬದನ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಮುಂದುವರಿದು, “ಆರೋಪಿಗಳು ನನ್ನನ್ನು ಸಮೀಪದ ದೇವಸ್ಥಾನಕ್ಕೆ ಎಳೆದೊಯ್ದು ತಲೆ ಬೋಳಿಸಿದರು. ನಂತರ ಗ್ರಾಮದಾದ್ಯಂತ ಮೆರವಣಿಗೆ ಮಾಡಿ ಮತ್ತೊಂದು ದೇವಸ್ಥಾನಕ್ಕೆ ಕರೆದೊಯ್ದು ಅಲ್ಲಿ ಹನುಮಾನ್ ಚಾಲೀಸಾ ಪಠಿಸುವಂತೆ ಒತ್ತಾಯಿಸಿ ಪದೇ ಪದೇ ಥಳಿಸಿದ್ದಾರೆ” ಎಂದು ವಿವರಿಸಿದ್ದಾರೆ.

“ನಾನು ಕ್ರೈಸ್ತ ಧರ್ಮ ಅನುಸರಿಸದಿದ್ದರೂ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ” ಎಂದು ಶಿವಬದನ್ ಹೇಳಿದ್ದಾರೆ.

ಮತ್ತೊಂದೆಡೆ ಆರೋಪಿ ರೋಹಿತ್ ದೀಕ್ಷಿತ್ ಕೂಡ ದೂರು ದಾಖಲಿಸಿದ್ದು, ಅದರಲ್ಲಿ ” ಡಿಸೆಂಬರ್ 26ರಂದು ನಾನು ಗ್ರಾಮದ ಅಂಗಡಿಯಲ್ಲಿ ಕುಳಿತಿದ್ದಾಗ ರಾಮ್ ಬಹದ್ದೂರ್, ಸಂತೋಷ್ ಮತ್ತು ಶಿವಪಾಲ್ ಪಾಸ್ವಾನ್ ಎಂಬ ಮೂವರು ಸಹಚರರು ಮತ್ತು ಇತರ ನಾಲ್ವರು ಅಪರಿಚಿತರ ಜೊತೆ ಕಾರಿನಲ್ಲಿ ಆಗಮಿಸಿದ ಶಿವಬದನ್ ಅವರು, ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳಿ ನಿಮಗೆ ಆಸ್ಪತ್ರೆಯಲ್ಲಿ ಕೆಲಸ ಕೊಡಿಸುತ್ತೇನೆ. ಪ್ರಾರ್ಥನೆಗೆ ಬಂದವರಿಂದ ಹಣ ಸಂಗ್ರಹಿಸಿ ನೀಡುತ್ತೇನೆ ಎಂದು ಹೇಳಿದರು. ನಾನು ಮತಾಂತರಗೊಳ್ಳಲು ವಿರೋಧಿಸಿದಾಗ ಶಿವಬದನ್ ನನಗೆ ಕಿರುಕುಳ ನೀಡಿ, ಸುಳ್ಳು ಮೊಕದ್ದಮೆ ಹೂಡುವ ಬೆದರಿಕೆ ಹಾಕಿದ್ದಾರೆ”ಎಂದು ಆರೋಪಿಸಿದ್ದಾರೆ.

ರೋಹಿತ್ ದೀಕ್ಷಿತ್ ದೂರು ಆಧರಿಸಿ ಶಿವಬದನ್ ಆತನ ಸಹಚರರಾದ ರಾಮ್ ಬಹದ್ದೂರ್, ಸಂತೋಷ್ ಮತ್ತು ಶಿವಪಾಲ್ ಪಾಸ್ವಾನ್ ಹಾಗೂ ನಾಲ್ವರು ಅಪರಿಚಿತರ ವಿರುದ್ದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಒಡಿಶಾ | ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...