Homeದಲಿತ್ ಫೈಲ್ಸ್ದಲಿತ ಬಾಲಕನಿಗೆ ಥಳಿಸಿ, ಮೂತ್ರ ಕುಡಿಸಿದ ಪೊಲೀಸರು : ಆರೋಪ

ದಲಿತ ಬಾಲಕನಿಗೆ ಥಳಿಸಿ, ಮೂತ್ರ ಕುಡಿಸಿದ ಪೊಲೀಸರು : ಆರೋಪ

- Advertisement -
- Advertisement -

ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ 13 ವರ್ಷದ ದಲಿತ ಬಾಲಕನನ್ನು ಬಂಧಿಸಿದ ಪೊಲೀಸರು, ಥಳಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಆರೋಪ ಕೇಳಿ ಬಂದಿದೆ.

ಈ ಘಟನೆಯು ಬಾಲಕನ ಕುಟುಂಬ ಮತ್ತು ದಲಿತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದ್ದು,
ಸಿಕಾರ್‌ನಲ್ಲಿರುವ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ ಎಂದು en.themooknayak.com ವರದಿ ಮಾಡಿದೆ.

ಸ್ಥಳೀಯ ನಿವಾಸಿ ಹಾಗೂ ಸಂತ್ರಸ್ತ ಬಾಲಕನ ಸಂಬಂಧಿ ಬಲ್ಬೀರ್ ಭಾರತೀಯ ಅವರ ಪ್ರಕಾರ, ಅಕ್ಟೋಬರ್ 21ರ ರಾತ್ರಿ ಕಳ್ಳತನದ ಆರೋಪದ ಮೇಲೆ ಬಾಲಕನನ್ನು ಖಂಡೇಲಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಬಳಿಕ ಪೊಲೀಸ್‌ ಠಾಣೆಯ ಸೆಲ್‌ನಲ್ಲಿ ಬಂಧಿಸಿಟ್ಟಿದ್ದರು. ಅಲ್ಲಿ ಪೊಲೀಸರು ಬಾಲಕನನ್ನು ತೀವ್ರ ದೈಹಿಕ ಹಿಂಸೆಗೆ ಒಳಪಡಿಸಿದ್ದಾರೆ. ಆತನಿಗೆ ಥಳಿಸಿದ್ದಲ್ಲದೆ, ಮೂತ್ರ ಕುಡಿಸಿ ದೌರ್ಜನ್ಯವೆಸಗಿದ್ದಾರೆ.

ಬಾಲಕನನ್ನು ಮನೆಗೆ ಕರೆತರಲು ಪ್ರಯತ್ನಿಸಿದಾಗ, ಖಂಡೇಲಾ ಠಾಣಾಧಿಕಾರಿ ಮಂಗೀಲಾಲ್ ಮತ್ತು ಎಎಸ್‌ಐ ಪುರನ್‌ಮಲ್ ಅವರು ಬಿಡುಗಡೆ ಮಾಡಲು 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಬಾಲಕನ 70 ವರ್ಷದ ಅಜ್ಜ ತನ್ನ ಮೊಮ್ಮಗನ ಬಿಡುಗಡೆಗಾಗಿ ಮನವಿ ಮಾಡಲು ಠಾಣೆಗೆ ತೆರಳಿದ್ದಾಗ ಪೊಲೀಸ್ ಸಿಬ್ಬಂದಿ ಬಾಲಕನಿಗೆ ಥಳಿಸುವುದನ್ನು ನೋಡಿದ್ದಾರೆ. ಈ ವೇಳೆ ಮಧ್ಯಪ್ರವೇಶಿಸಿದ ಅವರು, ಮೊಮ್ಮಗನ ಮೇಲೆ ಏಕೆ ಹಲ್ಲೆ ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದಾಗ, ಪೊಲೀಸರು ವೃದ್ದನ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಅವರನ್ನು ಬಲವಂತವಾಗಿ ಠಾಣೆಯಿಂದ ಹೊರದಬ್ಬಿದ್ದಾರೆ. ಈ ವೇಳೆ ವೃದ್ದನ ಹೆಬ್ಬೆರಳು ಮುರಿದಿದೆ ಎಂದು ವರದಿ ವಿವರಿಸಿದೆ.

ನ್ಯಾಯ ಮತ್ತು ತಕ್ಷಣ ಕ್ರಮಕ್ಕೆ ಒತ್ತಾಯಿಸಿದ ಕುಟುಂಬ

ಬಾಲಕನ ಕುಟುಂಬ ದಲಿತ ಸಮುದಾಯದ ಜನರೊಂದಿಗೆ ಎಸ್‌ಪಿ ಕಚೇರಿಯ ಬಳಿ ಪ್ರತಿಭಟನೆ ನಡೆಸಿ ತಮಗೆ ನ್ಯಾಯ ಕೊಡಿಸುವಂತೆ ಮತ್ತು ತಪ್ಪಿತಸ್ಥ ಪೊಲೀಸರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದೆ. ಠಾಣಾಧಿಕಾರಿ ಮಂಗೀಲಾಲ್, ಎಎಸ್‌ಐ ಪುರನ್‌ಮಲ್ ಮತ್ತು ಇತರ ಇಬ್ಬರು ಪೊಲೀಸರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಪೊಲೀಸರು ಬಾಲಕನಿಗೆ ಲೈಂಗಿಕ ಕಿರುಕುಳವೂ ನೀಡಿದ್ದಾರೆ ಎಂದು ಬಾಲಕನ ಕುಟುಂಬ ಆರೋಪಿಸಿದೆ. ಹಾಗಾಗಿ, ಪೋಕ್ಸೋ ಪ್ರಕರಣ ದಾಖಲಿಸಲು ಆಗ್ರಹಿಸಿದೆ. ಪೊಲೀಸ್ ದೌರ್ಜನ್ಯದಿಂದ ಬಾಲಕ ತೀವ್ರ ಆಘಾತಕ್ಕೊಳಗಾಗಿದ್ದಾನೆ. ಆತ ಭಯಗೊಂಡಿದ್ದು, ನೋವಿನಿಂದ ನರಳುತ್ತಿದ್ದಾನೆ. ಪೊಲೀಸರ ಹಲ್ಲೆಯಿಂದ ಆತನ ಕಾಲುಗಳು ಊದಿಕೊಂಡಿವೆ ಎಂದು ಕುಟುಂಬ ಹೇಳಿಕೊಂಡಿದೆ.

ಕುಟುಂಬಸ್ಥರು ಆರಂಭದಲ್ಲಿ ಅಕ್ಟೋಬರ್ 22ರಂದು ಎಸ್ಪಿಗೆ ಲಿಖಿತ ದೂರು ನೀಡಿದ್ದಾರೆ. ಪೊಲೀಸರನ್ನು ಅಮಾನತಗೊಳಿಸಬೇಕು. ಅವರ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ ಎಂದು en.themooknayak.com ತಿಳಿಸಿದೆ.

ಪೊಲೀಸರ ವಿರುದ್ದ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿಕಾರ್ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್, “ಪ್ರಕರಣದ ಕುರಿತು ಮಾಹಿತಿ ಪಡೆಯಲು ಕುಟುಂಬವನ್ನು ಪ್ರತಿನಿಧಿಸುವ ನಿಯೋಗವನ್ನು ಸೋಮವಾರ ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ನಾನು ದೌರ್ಜನ್ಯಕ್ಕೊಳಗಾದ ಬಾಲಕನೊಂದಿಗೆ ವೈಯಕ್ತಿಕವಾಗಿ ಮಾತನಾದ್ದೇನೆ. ಸೂಕ್ತ ತನಿಖೆಯ ಭರವಸೆಯನ್ನು ಕುಟುಂಬಕ್ಕೆ ನೀಡಿದ್ದೇನೆ. ಪ್ರಕರಣವನ್ನು ರಿಂಗಸ್‌ನ ಸರ್ಕಲ್ ಆಫೀಸರ್ (ಸಿಒ) ಅವರಿಗೆ ವಹಿಸಲಾಗಿದ್ದು, 7 ದಿನಗಳಲ್ಲಿ ವಿವರವಾದ ತನಿಖೆ ನಡೆಸಿ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ಎಸ್ಪಿ ನೀಡಿರುವ ಉತ್ತರಕ್ಕೆ ಸಮಾಧಾನಗೊಳ್ಳದ ಬಾಲಕನ ಕುಟುಂಬ, ಬಾಲಕನ ಮೇಲಿನ ದೌರ್ಜನ್ಯ ಮಕ್ಕಳ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಹೇಳಿದ್ದು, ಪೊಲೀಸರನ್ನು ವಜಾಗೊಳಿಸಬೇಕ. ಅವರ ವಿರುದ್ದ ಕ್ರಿಮಿನಲ್ ಪ್ರಕರಣ ಹೂಡಬೇಕು ಎಂದು ಪಟ್ಟು ಹಿಡಿದಿದೆ

ಇದನ್ನೂ ಓದಿ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆ | 8 ಸಾವಿರ ಅಭ್ಯರ್ಥಿಗಳಿಂದ 10 ಸಾವಿರಕ್ಕೂ ಅಧಿಕ ನಾಮಪತ್ರಗಳು ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...