Homeಮುಖಪುಟಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ಮಹಾರಾಷ್ಟ್ರದ ಪನ್ಶೇಂದ್ರ ಗ್ರಾಮದ ದಲಿತರ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯ

ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದೇ ಹೋದದ್ದು, ಸೆ.4ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡುವಾರ ಸಂಚುಹಾಕಿ ದಾಳಿ ಮಾಡಿದ್ದಾರೆ ಎಂದು ಕುಟುಂಬವರ್ಗ ತಿಳಿಸಿದೆ.

- Advertisement -
- Advertisement -

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಪನ್ಶೇಂದ್ರ ಗ್ರಾಮದಲ್ಲಿ ನಡೆದ, ಇಬ್ಬರು ದಲಿತರ ಹತ್ಯೆಯನ್ನು ಸಿಬಿಐ ತನಿಖೆಗೆ ನೀಡುವಂತೆ, ಹತ್ಯೆ ನಡೆದ 12 ದಿನಗಳ ಬಳಿಕ  ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಮೃತ ರಾಹುಲ್ ಬೋರಾಡೆ ಮತ್ತು ಪ್ರದೀಪ್ ಬೋರಾಡೆ ಸಂಬಂಧಿಕರು ಮತ್ತು ಜಾತಿ ವಿರೋಧಿ ಸಂಘಟನೆ ಕಾರ್ಯಕರ್ತರು ಇದೊಂದು ಯೋಜಿತ ದಾಳಿ ಎಂದು ಆರೋಪಿಸಿದ್ದಾರೆ.

22 ವರ್ಷದ ರಾಹುಲ್ ಬೋರಾಡೆ ಮತ್ತು 25 ವರ್ಷದ ಪ್ರದೀಪ್ ಬೋರಾಡೆ ಎಂಬ ಇಬ್ಬರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ದೀರ್ಘಕಾಲದ ಭೂ ವಿವಾದಕ್ಕೆ ಸಂಬಂಧಿಸಿದ ದಾಳಿಯಲ್ಲಿ 50 ಕ್ಕೂ ಹೆಚ್ಚು ಜನರ ಗುಂಪಿನಿಂದ ಸೆಪ್ಟೆಂಬರ್ 4 ರಂದು ಇವರ ಮೇಲೆ ಹಲ್ಲೆ ನಡೆಸಲಾಗಿತ್ತು. ಹಲ್ಲೆಯಲ್ಲಿ ಈ ಇಬ್ಬರು ಮೃತಪಟ್ಟಿದ್ದರು.

ಇದೇ ದಾಳಿಯಲ್ಲಿ ಮೃತರ ಸಹೋದರ ರಾಮೇಶ್ವರ ಮತ್ತು ತಾಯಿ ನರ್ಮದಾ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗ ಇಬ್ಬರೂ ಜಲ್ನಾ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಸಂಬಂಧಿಕರು ಈ ಕೊಲೆಗಳನ್ನು ಯೋಜಿತ ದಾಳಿ ಎಂದು ಕರೆದಿದ್ದಾರೆ.

ಇದನ್ನೂ ಓದಿ: ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ಸದ್ಯ ಜಲ್ನಾ ಪೊಲೀಸರು ಆರೋಪಿಗಳ ವಿರುದ್ಧ, ಕೊಲೆ ಮತ್ತು ಕೊಲೆ ಯತ್ನಕ್ಕಾಗಿ ಐಪಿಸಿಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಈವರೆಗೆ 25 ಜನರನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ ಸುಧೀರ್ ಖಿರಾದ್ಕರ್, “ಸಂತ್ರಸ್ತರ ಕುಟುಂಬದಿಂದ ಹೆಸರಿಸಲ್ಪಟ್ಟ ಇನ್ನೂ ಐದು ಜನರನ್ನು ಹುಡುಕುವ ಹಂತದಲ್ಲಿದ್ದೇವೆ” ಎಂದು ಹೇಳಿದ್ದಾರೆ.

“ಘಟನೆ ನಡೆದ ಕೂಡಲೇ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ನಾವು ಕಾರಣವನ್ನು ಕಂಡುಹಿಡಿಯುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಖಿರಾದ್ಕರ್ ತಿಳಿಸಿದ್ದಾರೆ ಎಂದು ದಿ ವೈರ್  ವರದಿ ಮಾಡಿದೆ.

ಇದನ್ನೂ ಓದಿ: ಬುಡಕಟ್ಟು ಹೆಣ್ಣುಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ: ಆತ್ಮಹತ್ಯೆ; ಒಬ್ಬ ಬಾಲಕಿ ಸಾವು!

ಸೆಪ್ಟೆಂಬರ್ 4 ರಂದು, ಬೆಳಿಗ್ಗೆ 6 ಗಂಟೆ ಸುಮಾರಿಗೆ, ಬೋರಾಡ್ಸ್ ತಮ್ಮ ಮನೆಯಿಂದ ಬೆಳಗ್ಗಿನ ನಿತ್ಯಕರ್ಮಗಳಿಗಾಗಿ ಹೊರಟಿದ್ದಾಗ, ಅವರ ಮೇಲೆ 50ಕ್ಕೂ ಹೆಚ್ಚು ಜನರ ಗುಂಪು ಹಲ್ಲೆ ನಡೆಸಿತು. ಸಂತ್ರಸ್ತರ ಕುಟುಂಬದ ಪ್ರಕಾರ ಭಿಲ್ ಸಮುದಾಯದೊಂದಿಗಿನ ವಿವಾದದಿಂದ ಈ ಸಮಸ್ಯೆ ಉದ್ಭವಿಸಿದೆ ಎಂದು ಹೇಳಿಕೊಂಡಿದೆ.

ಆಗಸ್ಟ್ 17ರಂದು ಭಿಲ್ ಸಮುದಾಯದ ಹಬ್ಬವೊಂದರಲ್ಲಿ ಮೃತ ರಾಹುಲ್ ಮತ್ತು ಆರೋಪಿಗಳ ನಡುವೆ ವಾದ-ವಿವಾದಗಳಿಂದ ಜಗಳ ಉಂಟಾಗಿ, ಕೆಲವರು ರಾಹುಲ್‌ನನ್ನು ಥಳಿಸಿದ್ದರು ಎಂದು ರಾಹುಲ್ ಚಿಕ್ಕಪ್ಪ ತುಕಾರಂ ಕಹಳೆ ಹೇಳಿದ್ದಾರೆ.

PC: The Wire (ಮೃತ ರಾಹುಲ್ ಮತ್ತು ಪ್ರದೀಪ್ ಬೋರಾಡೆ ಅವರ ಮನೆ)

ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

“ನಾವು ಮೊದಲೇ ದೂರು ಕೊಟ್ಟಾಗ ಪೊಲೀಸರು ಗಂಭೀರವಾಗಿ ಪರಿಗಣಿಸದಿದ್ದದ್ದು, ಸೆಪ್ಟೆಂಬರ್ 4 ರ ರಕ್ತಸಿಕ್ತ ದಾಳಿಗೆ ಕಾರಣವಾಯಿತು. ಎರಡು ವಾರ ಸಂಚು ರೂಪಿಸಿ ದಾಳಿ ಮಾಡಿದ್ದಾರೆ. ಇಲ್ಲಿನ ಹಿಂಸಾಚಾರಕ್ಕೆ ಸುಧೀರ್ಘ ಇತಿಹಾಸವಿದೆ. ಪೊಲೀಸರು ಇದರ ಬಗ್ಗೆ ಸರಿಯಾಗಿ ಗಮನಹರಿಸಿ, ಪ್ರಕರಣವನ್ನು ತನಿಖೆ ಮಾಡಲಾಗುವುದಿಲ್ಲ. ಆದ್ದರಿಂದಲೇ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ಒತ್ತಾಯಿಸುತ್ತಿದ್ದೇವೆ ಎಂದು ತುಕಾರಂ ಕಹಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ದಲಿತನೊಬ್ಬ ಗ್ರಾ.ಪಂ ಮುಖ್ಯಸ್ಥನಾದುದ್ದನ್ನು ಸಹಿಸದ ಮೇಲ್ಜಾತಿಗಳು: ಗುಂಡಿಕ್ಕಿ ಕೊಲೆ

ಬೋರಾಡೆ ಕುಟುಂಬವು ಹಲವು ವರ್ಷಗಳಿಂದ ಭೂಮಿ ಹೊಂದಿದ್ದು, ಅದು ಹಳ್ಳಿಯ ಬೇರೆ ದಲಿತರಿಗೂ ಪ್ರೋತ್ಸಾಹ ಸಿಕ್ಕಂತಾಗಿ ಅವರೂ ಭೂಮಿ ಹೊಂದಲು ಪ್ರಾರಂಭಿಸಿದ್ದರು. ಇದು ಭೂ ವಿವಾದಗಳಿಗೆ ಕಾರಣವಾಯಿತು ಎಂದು ಬೋರಾಡೆ ಸಂಬಂಧಿಕರು ತಿಳಿಸಿದ್ದಾರೆ.

“ಲ್ಯಾಂಡ್ ಮಾಫಿಯಾಗಳ ಮೂಲಕ ಬೆದರಿಕೆ ಹಾಕಿಸಿ, ಭೂಮಿಯನ್ನು ಬಿಟ್ಟುಕೊಡಬೇಕೆಂದು ಒತ್ತಾಯಿಸಿದ್ದರು. ಕಳೆದ ಮೂರು ವರ್ಷಗಳಿಂದ ಅವರು ನಮಗೆ ತೊಂದರೆ ಕೊಡುತ್ತಿದ್ದಾರೆ” ಎಂದು ಮೃತರ ಕುಟುಂಬದ ಸದಸ್ಯರೊಬ್ಬರು ಆರೋಪಿಸಿದ್ದಾರೆ.

ಇವರು ವಾಸಿಸುತ್ತಿದ್ದ ಪನ್ಶೇಂದ್ರ ಗ್ರಾಮದಲ್ಲಿ ಸುಮಾರು 350 ಮನೆಗಳಿವೆ. ಅವುಗಳಲ್ಲಿ, 20% ಕ್ಕೂ ಹೆಚ್ಚು ಮನೆಗಳು ಭಿಲ್ ಸಮುದಾಯಕ್ಕೆ ಸೇರಿವೆ, ಸುಮಾರು 8% ಬೌದ್ಧರು (ಬೋರಾಡೆಗಳು ಸಹ ಬೌದ್ಧರು) ಮತ್ತು ಕೆಲವು ಮರಾಠರು ಮತ್ತು ಅಲೆಮಾರಿ ಸಮುದಾಯಗಳಿಗೆ ಸೇರಿದವರು ಇದ್ದಾರೆ. ಗ್ರಾಮದಲ್ಲಿ ಸಾಕ್ಷರತೆಯ ಪ್ರಮಾಣ 70% ಕ್ಕಿಂತ ಕಡಿಮೆಯಿದೆ ಮತ್ತು ಇಲ್ಲಿ ಹೆಚ್ಚಿನ ದಲಿತ ಕುಟುಂಬಗಳು ತುಂಡು ಭೂಮಿಯಿರುವ ರೈತರು.


ಇದನ್ನೂ ಓದಿ: ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...