Homeಕರ್ನಾಟಕಅನ್ಯಾಯ ಸರಿಪಡಿಸದಿದ್ದರೆ ಬೃಹತ್ ಹೋರಾಟ: ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ದಲಿತ ಸಂಘಟನೆಗಳು

ಅನ್ಯಾಯ ಸರಿಪಡಿಸದಿದ್ದರೆ ಬೃಹತ್ ಹೋರಾಟ: ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ದಲಿತ ಸಂಘಟನೆಗಳು

ಗ್ಯಾರಂಟಿ ಯೋಜನೆಗೆ ಬಳಸುತ್ತಿರುವ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣ ಹಿಂಪಡೆಯಲು ಆಗ್ರಹ

- Advertisement -
- Advertisement -

ದಲಿತರಿಗೆ ಮೀಸಲಿಟ್ಟ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವ ರಾಜ್ಯ ಸರ್ಕಾರದ ನಡೆಯ ವಿರುದ್ದ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅನ್ಯಾಯ ಸರಿಪಡಿಸದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಒಕ್ಕೂಟದ ಪ್ರಮುಖರು “ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ನಿರ್ಧರಿಸಿದ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಹಿಂಪಡೆಯಬೇಕು ಮತ್ತು ಇತರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಆಗ್ರಹಿಸಿದ್ದಾರೆ.

ಭಾರತದ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಿ ಸರ್ವಾಧಿಕಾರ ಸ್ಥಾಪಿಸಲು ಹೊರಟಿರುವ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯನ್ನು ಸೋಲಿಸದೆ ದಲಿತರಿಗೆ ಬೇರೆ ದಾರಿಯೇ ಇರಲಿಲ್ಲ. ಹಾಗಾಗಿ, ರಾಜ್ಯ, ರಾಷ್ಟ್ರದಲ್ಲಿ ಕೋಮುವಾದಿ ಬಿಜೆಪಿ ಸರ್ಕಾರವನ್ನು ಕಿತ್ತೆಸೆಯಲು ದಲಿತರು ಅನಿವಾರ್ಯವಾಗಿ ಕಾಂಗ್ರೆಸ್‌ ಪಕ್ಷದೊಂದಿಗೆ ನಿಲ್ಲಬೇಕಾಯಿತು. ಬಹಿರಂಗವಾಗಿಯೇ ದಲಿತ ಸಂಘಟನೆಗಳು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದರಿಂದ ಕಾಂಗ್ರೆಸ್ ಸರ್ಕಾರ ರಚಿಸುವಲ್ಲಿ ಸಫಲವಾಯಿತು ಎಂದು ಹೇಳಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಸರ್ಕಾರ ರಚಿಸಿರುವ ಕಾಂಗ್ರೆಸ್, ದಲಿತರ ಕೆಲವು ಬೇಡಿಕೆಗಳನ್ನು ಈಡೇರಿಸುವಲ್ಲಿ ಹೆಜ್ಜೆ ಇಟ್ಟಿತಾದರೂ, ಕೆಲವೇ ದಿನಗಳಲ್ಲಿ ಭ್ರಮನಿರಸನ ಉಂಟು ಮಾಡಿದೆ. ಗ್ಯಾರಂಟಿ ಕಾರ್ಯಕ್ರಮಗಳಿಗೆ ದಲಿತರಿಗೆ ಮೀಸಲಿಟ್ಟ ಹಣವನ್ನು ಬಳಸಿಕೊಂಡು ದಲಿತರ ಬೆನ್ನಿಗೆ ಚೂರಿ ಹಾಕಿದೆ ಎಂದು ಒಕ್ಕೂಟ ಅಸಮಾಧಾನ ಹೊರ ಹಾಕಿದೆ.

ಬ್ಯಾಕ್‌ಲಾಗ್ ನೇಮಕಾತಿಯಿಂದ ಹಿಡಿದು, ಇತ್ತೀಚಿನ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಅನುದಾವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವವರೆಗೂ ಸರ್ಕಾರ ವಂಚನೆ ಮುಂದುವರೆಸಿದೆ. ಬ್ಯಾಕ್‌ಲಾಗ್ ಹುದ್ದೆ ತುಂಬುತ್ತಿಲ್ಲ, ದಲಿತರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಅಡಚಣೆ ಮಾಡುತ್ತಿದೆ. ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ತರುತ್ತಿಲ್ಲ. ಈ ಕುರಿತು ದಲಿತ ಜನಸಮೂಹದಲ್ಲಿ ತೀವ್ರ ಅಸಮಾಧಾನ ಮೂಡಿದ್ದು, ಕಾಂಗ್ರೆಸ್ ವಿರುದ್ದ ತಿರುಗಿ ಬೀಳುವ ಹಂತಕ್ಕೆ ಬಂದು ಮುಟ್ಟಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನಡೆಯನ್ನು ನಾವು ಸಹಿಸುವುದಿಲ್ಲ. ದಲಿತರಿಗೆ ಮಾಡಿರುವ ಅನ್ಯಾಯವನ್ನು ಸರಿಪಡಿಸದಿದ್ದರೆ ಬೃಹತ್ ಹೋರಾಟ ಆರಂಭಿಸಲು ನಿರ್ಧರಿಸಿದ್ದೇವೆ ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಎಚ್ಚರಿಸಿದೆ.

ಒಕ್ಕೂಟದ ಹಕ್ಕೋತ್ತಾಯಗಳು

  1. ಎಸ್‌ಸಿ, ಎಸ್‌ಟಿ ಬ್ಯಾಕ್‌ಲಾಗ್ ಉದ್ಯೋಗಗಳನ್ನು ಕೂಡಲೇ ಭರ್ತಿ ಮಾಡಬೇಕು.

2. ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಯಾವುದೇ ಕಾರಣಕ್ಕೂ ಇತರೆ ಯೋಜನೆಗಳಿಗೆ ಬಳಸಬಾರದು. ಈಗಾಗಲೇ ಗ್ಯಾರಂಟಿ ಯೋಜನೆಗೆ ಬಳಸಿರುವ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಮೀಸಲು ಹಣವನ್ನು ಹಿಂಪಡೆಯಬೇಕು. ಕಳೆದ ಸಾಲಿನ 11 ಸಾವಿರ ಕೋಟಿ ರೂ. ಮತ್ತು ಈ ಸಾಲಿನ 14 ಸಾವಿರ ಕೋಟಿ ರೂ. ಹಣವನ್ನು ಈ ಕೂಡಲೇ ಹಿಂಪಡೆಯಬೇಕು.

3. ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯ ಯೋಜನೆಗಳ ಜಾರಿಗೆ ಕೂಡಲೇ ಏಕಗವಾಕ್ಷಿ ಪದ್ದತಿಯನ್ನು ಜಾರಿಗೊಳಿಸಬೇಕು.

4. ಹೊರಗುತ್ತಿಗೆ ನೇಮಕಾತಿಯಲ್ಲಿ ಕಡ್ಡಾಯವಾಗಿ ರೋಸ್ಟರ್ ಪದ್ದತಿಗನುಗುಣವಾಗಿ ಮೀಸಲಾತಿ ನೀಡಬೇಕು

5. ಪರಿಶಿಷ್ಟ ಜಾತಿ ಮತ್ತು ಪಂಗಡದ ಮೆರಿಟ್ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಪ್ರೋತ್ಸಾಹ ಧನಕ್ಕೆ ವಿಧಿಸಿರುವ ಆದಾಯ ಹಾಗೂ ಅಂಕಗಳ ಮಿತಿಯನ್ನು ರದ್ದುಗೊಳಿಸಿ, ಈ ಹಿಂದೆ ನಿಗದಿಪಡಿಸಿದಂತೆ ಮರು ಜಾರಿಗೊಳಿಸಬೇಕು.

6. ಸಮಾಜ ಕಲ್ಯಾಣ ಇಲಾಖೆಯಿಂದ ಬಿಡುಗಡೆ ಮಾಡುತ್ತಿರುವ ಎಲ್ಲಾ ಅನುದಾನಗಳ ನಿರ್ವಹಣೆ ಮತ್ತು ಪರಿವೀಕ್ಷಣೆ ಮಾಡಲು ಸ್ವತಂತ್ರ ಕಾವಲು ಸಮಿತಿ ನೇಮಿಸಬೇಕು ಹಾಗೂ ಅದಕ್ಕೆ ನ್ಯಾಯಾಂಗ ಅಧಿಕಾರ ನೀಡಬೇಕು.

7. ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಚಿಸುವ ದಲಿತ ವಿದ್ಯಾರ್ಥಿಗಳಿಗೆ ‘ಪ್ರಬುದ್ದ ಯೋಜನೆ’ ಮೂಲಕ ನೀಡುತ್ತಿರುವ ನಿರ್ವಹಣ ವೆಚ್ಚದ ಮಿತಿಯನ್ನು ಸಡಿಲಗೊಳಿಸಿ, ವಾಸ್ತವ ವೆಚ್ಚವನ್ನು ನೀಡಬೇಕು. ಈ ಹಿಂದಿನಂತೆ ಎರಡು ಕೋಟಿಗಳವರೆಗೆ ನೀಡುತ್ತಿರುವ ಅನುದಾನವನ್ನು ಮುಂದುವರೆಸಬೇಕು.

8. ವಿದೇಶದಲ್ಲಿ ಪಿಹೆಚ್‌ಡಿ ಪದವಿ ಪಡೆಯಲು ನೀಡುತ್ತಿದ್ದ ಧನ ಸಹಾಯ ರದ್ದುಗೊಳಿಸಿರುವುದನ್ನು ಕೂಡಲೇ ಹಿಂಪಡೆದು, ಹಿಂದಿ ಪದ್ದತಿಯನ್ನು ಮುಂದುವರೆಸಬೇಕು.

9. ವಸತಿ ಶಾಲೆಗಳ ಪ್ರವೇಶಕ್ಕೆ ನಿಗದಿಪಡಿಸಿರುವ ಪ್ರವೇಶ ಪರೀಕ್ಷೆಗಳನ್ನು ರದ್ದುಪಡಿಸಿ ಸಾಮಾಜಿಕ ಹಾಗೂ ಅರ್ಥಿಕ ಮಾನದಂಡದ ಮೇಲೆ ಪ್ರವೇಶಾತಿ ನೀಡಬೇಕು.

ಇದನ್ನೂ ಓದಿ : ಮೈಸೂರು-ಕೊಡಗು ಸಂಸದ ಯದುವೀರ್‌ ಒಡೆಯರ್‌ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...