Homeದಲಿತ್ ಫೈಲ್ಸ್ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

- Advertisement -
- Advertisement -

ತಿರುವನಂತಪುರದ ಕೇರಳ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಗೆ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಶನಿವಾರ (ನ.8) ಆದೇಶಿಸಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.

ಸಂಸ್ಕೃತ ವಿಭಾಗದ ಡೀನ್ ಡಾ. ಸಿ.ಎನ್ ವಿಜಯಕುಮಾರಿ ವಿರುದ್ಧ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿ ದಲಿತ ಸಮುದಾಯದ ವಿಪಿನ್ ವಿಜಯನ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಡೀನ್ ವಿಜಯಕುಮಾರಿ ಜಾತಿವಾದಿ ಹೇಳಿಕೆ ನೀಡಿದ್ದಾರೆ. ಅಂತಿಮ ಹಂತದಲ್ಲಿ ಜಾತಿಯ ಕಾರಣಕ್ಕೆ ತನ್ನ ಪಿಎಚ್‌ಡಿಗೆ ಅಡ್ಡಿಪಡಿಸಿದ್ದಾರೆ ಎಂದು ಹೇಳಿದ್ದಾರೆ.

“ನೀವು ಕೆಳ ಜಾತಿಯವರು ಸಂಸ್ಕೃತ ಅಧ್ಯಯನ ಮಾಡಬಾರದು. ಕೆಳಜಾತಿಯ ವಿದ್ಯಾರ್ಥಿಗಳ ಪ್ರವೇಶದಿಂದಾಗಿ ವಿಭಾಗದ ಪಾವಿತ್ರ್ಯತೆ ಹಾಳಾಗಿದೆ” ಎಂದು ಡೀನ್ ವಿಜಯಕುಮಾರಿ ಹೇಳಿದ್ದಾಗಿ ವಿಪಿನ್‌ ಆರೋಪಿಸಿದ್ದಾರೆ. ಈ ಬಗ್ಗೆ ವಿಶ್ವವಿದ್ಯಾಲಯದ ಉಪಕುಲಪತಿ ಮತ್ತು ಕಝಕೂಟಂ ಸಹಾಯಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ವಿಪಿನ್ ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯದಿಂದ ಸಂಸ್ಕೃತದಲ್ಲಿ ಬಿಎ ಮತ್ತು ಎಂಎ ಪದವಿಗಳನ್ನು ಪೂರ್ಣಗೊಳಿಸಿ, ನಂತರ ಕೇರಳ ವಿಶ್ವವಿದ್ಯಾಲಯದಿಂದ ಬಿಎಡ್ ಮತ್ತು ಎಂಎಡ್‌ ಪದವಿಗಳನ್ನು ಪಡೆದಿದ್ದಾರೆ.

ತನ್ನ ವಿರುದ್ದದ ಆರೋಪಗಳ ಬಗ್ಗೆ ವಿಜಯಕುಮಾರಿ ಪ್ರತಿಕ್ರಿಯೆ ನೀಡಿದ್ದು, ವಿಪಿನ್ ಅವರ ಪಿಎಚ್‌ಡಿ ಶೈಕ್ಷಣಿಕ ಮಾನದಂಡಗಳನ್ನು ಪೂರೈಸಿಲ್ಲ. ಅವರು ಸಂಸ್ಕೃತ, ಇಂಗ್ಲಿಷ್ ಅಥವಾ ಮಲಯಾಳಂ ಭಾಷೆಗಳಲ್ಲಿನ ಪ್ರಶ್ನೆಗಳಿಗೆ ಉತ್ತರಿಸಲು ವಿಫಲರಾಗಿದ್ದಾರೆ ಎಂದು ಮಾಧ್ಯಮಗಳಿಗೆ ಹೇಳಿದ್ದಾರೆ. ಉಪಕುಲಪತಿಗಳಿಗೆ ಬರೆದ ಪತ್ರದಲ್ಲಿ, ವಿಪಿನ್ ಅವರ ಪ್ರಬಂಧವು ಸರಿಯಾದ ಸಂಶೋಧನಾ ವಿಧಾನವನ್ನು ಹೊಂದಿಲ್ಲ ಎಂದಿದ್ದಾರೆ.

ಇದಕ್ಕೆ ತಿರುಗೇಟು ಕೊಟ್ಟಿರುವ ವಿಪಿನ್, ವಿಜಯಕುಮಾರಿ ಅವರ ಮಾರ್ಗದರ್ಶನದಲ್ಲಿ ನಾನು ಸಂಸ್ಕೃತದಲ್ಲಿ ಎಂಫಿಲ್ ಪೂರ್ಣಗೊಳಿಸಿದ್ದೇನೆ. ನನಗೆ ಸಂಸ್ಕೃತ ಗೊತ್ತಿಲ್ಲದಿದ್ದರೆ, ಅವರು ಯಾವ ಆಧಾರದ ಮೇಲೆ ನನಗೆ ಮಾರ್ಗದರ್ಶನ ನೀಡಿದ್ದರು ಮತ್ತು ನನ್ನ ಎಂಫಿಲ್ ಪದವಿಯನ್ನು ಅನುಮೋದಿಸಿದ್ದರು ಎಂದು ಪ್ರಶ್ನಿಸಿದ್ದಾರೆ. ಇದು ವೈಯಕ್ತಿಕ ತಾರತಮ್ಯ ಮತ್ತು ನನ್ನ ಶೈಕ್ಷಣಿಕ ವೃತ್ತಿಜೀವನವನ್ನು ಹಾಳುಮಾಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದ್ದಾರೆ.

ಈ ಘಟನೆಯು ವಿಶ್ವವಿದ್ಯಾಲಯ ಮತ್ತು ಉನ್ನತ ಶಿಕ್ಷಣ ಕ್ಷೇತ್ರ ಎರಡಕ್ಕೂ ಅಪಖ್ಯಾತಿ ತಂದಿದೆ. ತನ್ನನ್ನು ಅನಗತ್ಯ ವಿವಾದಕ್ಕೆ ಎಳೆದಿದೆ ಎಂದು ಸಚಿವೆ ಬಿಂದು ಹೇಳಿದ್ದಾರೆ. ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಉಪಕುಲಪತಿ ಮತ್ತು ಕುಲಸಚಿವರಿಗೆ ನಿರ್ದೇಶನ ನೀಡಿದ್ದಾರೆ.

‘ನೀವು ಬ್ರಾಹ್ಮಣರಂತೆ ಸಂಸ್ಕೃತ ಅಧ್ಯಯನ ಮಾಡಲು ಸಾಧ್ಯವಿಲ್ಲ..’ ಎಂದು ದಲಿತ ವಿದ್ಯಾರ್ಥಿಗೆ ಪಿಎಚ್‌ಡಿ ತಡೆಹಿಡಿದ ಡೀನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...