Homeಕರ್ನಾಟಕIIMBಯಲ್ಲಿ ದಲಿತ ಪ್ರಾಧ್ಯಾಪಕನ ವಿರುದ್ಧ ಜಾತಿ ದೌರ್ಜನ್ಯ - ದೃಢಪಡಿಸಿದ ಡಿಸಿಆರ್‌ಇ

IIMBಯಲ್ಲಿ ದಲಿತ ಪ್ರಾಧ್ಯಾಪಕನ ವಿರುದ್ಧ ಜಾತಿ ದೌರ್ಜನ್ಯ – ದೃಢಪಡಿಸಿದ ಡಿಸಿಆರ್‌ಇ

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ಇಲ್ಲಿನ ನಿರ್ದೇಶಕರು, ಡೀನ್ ಮತ್ತು ಇತರ ಆರು ಅಧ್ಯಾಪಕರು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಿದ್ದಾರೆ ಎಂದು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಖಚಿತಪಡಿಸಿದ್ದು, ಅವರ ವಿರುದ್ಧ ಜಾತಿ ಆಧಾರಿತ ತಾರತಮ್ಯ ಮತ್ತು ಕಿರುಕುಳದ ಗಂಭೀರ ಆರೋಪಗಳನ್ನು ಮಾಡಿದೆ. IIMBಯಲ್ಲಿ

ನವೆಂಬರ್ 26 ರಂದು ಕರ್ನಾಟಕ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಸಲ್ಲಿಸಿದ ವರದಿಯ ನಂತರ ಇದು ಬಹಿರಂಗವಾಗಿದ್ದು, ನಿರ್ದೇಶಕ ಡಾ. ರಿಷಿಕೇಶ ಟಿ. ಕೃಷ್ಣನ್ ಮತ್ತು ಡೀನ್ ಡಾ. ದಿನೇಶ್ ಕುಮಾರ್ ಸೇರಿದಂತೆ ಐಐಎಂಬಿಯ ಪ್ರಮುಖರಿಂದ ಜಾತಿ ದೌರ್ಜನ್ಯಗಳು ನಡೆದಿವೆ ಎಂದು ಇದು ದೃಢಪಡಿಸಿದೆ.

ಡಿಸೆಂಬರ್ 9 ರಂದು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿತ್ತು. ಆದರೆ, ಇನ್ನೂ ಯಾವುದೆ ಪ್ರಕರಣ ದಾಖಲಾಗಿಲ್ಲ ಎಂದು ದಿನ್ಯೂಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2018 ರಲ್ಲಿ ಐಐಎಂಬಿಗೆ ಸೇರ್ಪಡೆಗೊಂಡ ಮಾರ್ಕೆಟಿಂಗ್‌ನ ಸಹ ಪ್ರಾಧ್ಯಾಪಕ ಗೋಪಾಲ್ ದಾಸ್ ಅವರ ದೂರಿನ ನಂತರ ತನಿಖೆ ಪ್ರಾರಂಭಿಸಲಾಗಿತ್ತು. ಗೋಪಾಲ್ ದಾಸ್ ಅವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದರೂ, ಅವರು ಅರ್ಹತೆಯ ಆಧಾರದ ಮೇಲೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು ಎಂದು ಹೇಳಲಾಗುತ್ತದೆ.

ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯದಿಂದ ಸತತ ಐದು ವರ್ಷಗಳ ಕಾಲ ವಿಶ್ವದಾದ್ಯಂತ ಅಗ್ರ 2% ಪ್ರಾಧ್ಯಾಪಕರಲ್ಲಿ ಒಬ್ಬರಾಗಿ ಗುರುತಿಸಲ್ಪಟ್ಟ ಗೋಪಾಲ್ ದಾಸ್ ಅವರು, ಸಂಸ್ಥೆಯೊಳಗಿನ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಬಗ್ಗೆ ಧ್ವನಿ ಎತ್ತಿದ್ದಾರೆ.

ಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ)ದ ವರದಿಯ ಪ್ರಕಾರ, ರಿಷಿಕೇಶ ಕೃಷ್ಣನ್ ಮತ್ತು ದಿನೇಶ್ ಕುಮಾರ್ ಅವರು ಸಾಮೂಹಿಕ ಇಮೇಲ್‌ಗಳ ಮೂಲಕ ಗೋಪಾಲ್ ದಾಸ್‌ನ ಜಾತಿಯ ಗುರುತನ್ನು ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿದೆ. ಇದು ಗೋಪಾಲ್ ದಾಸ್ ಅವರ ವಿರುದ್ಧ ತಾರತಮ್ಯ ಮತ್ತು ಪ್ರತಿಕೂಲವಾದ ಕೆಲಸದ ವಾತಾವರಣವನ್ನು ಸೃಷ್ಟಿಸಲು ಕಾರಣವಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಇಷ್ಟೆ ಅಲ್ಲದೆ, SC/ST ಸದಸ್ಯರಿಗೆ ದೂರು ಪರಿಹಾರ ಕಾರ್ಯವಿಧಾನವನ್ನು ಕಡ್ಡಾಯವಾಗಿ ಸ್ಥಾಪಿಸಬೇಕು ಎಂದು ಕಾನೂನು ಇದ್ದರೂ, ಐಐಎಂಬಿ ಇದನ್ನು ಸ್ಥಾಪಿಸಲು ವಿಫಲವಾಗಿದೆ ಎಂದು ಡಿಸಿಆರ್‌ಇ ತನ್ನ ವರದಿಯಲ್ಲಿ ಹೇಳಿದೆ. IIMBಯಲ್ಲಿ

ಇದನ್ನೂ ಓದಿ: ಮಧ್ಯಪ್ರದೇಶ ಟೇಕ್ ಹೋಮ್ ಪಡಿತರ ಯೋಜನೆ: 2018-21ರಿಂದ ₹428 ಕೋಟಿ ಅಕ್ರಮ

ಮಧ್ಯಪ್ರದೇಶ ಟೇಕ್ ಹೋಮ್ ಪಡಿತರ ಯೋಜನೆ: 2018-21ರಿಂದ ₹428 ಕೋಟಿ ಅಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...