Homeಕರ್ನಾಟಕಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ ಆರೋಪ: ಕುಲಪತಿ ರಾಜೀನಾಮೆಗೆ ಆಗ್ರಹ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ದಲಿತ ಪ್ರಾಧ್ಯಾಪಕರಿಗೆ ತಾರತಮ್ಯ ಆರೋಪ: ಕುಲಪತಿ ರಾಜೀನಾಮೆಗೆ ಆಗ್ರಹ

- Advertisement -
- Advertisement -

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (ಬೆಂವಿವಿ) ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ಬಡ್ತಿ ಮತ್ತು ಅಧಿಕಾರ ಹಂಚಿಕೆಯಲ್ಲಿ ವ್ಯಾಪಕ ತಾರತಮ್ಯ ನಡೆಯುತ್ತಿದೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ವಿಶ್ವವಿದ್ಯಾಲಯಗಳ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ದಲಿತ ಪ್ರಾಧ್ಯಾಪಕರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಸ್ನಾತಕೋತ್ತರ ಮತ್ತು ಸಂಶೋಧನ ವಿದ್ಯಾರ್ಥಿಗಳ ಒಕ್ಕೂಟದ ವಿದ್ಯಾರ್ಥಿ ನಾಯಕ ಚಂದ್ರು ಪೆರಿಯಾರ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕುಲಪತಿ ಡಾ. ಜಯಕರ ಎಸ್.ಎಂ. ಅವರನ್ನು ತಕ್ಷಣ ಹುದ್ದೆಯಿಂದ ಹಿಂತೆಗೆದುಕೊಳ್ಳುವಂತೆ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದ್ರು ಪೆರಿಯಾರ್, ರೋಸ್ಟರ್ ನಿಯಮಗಳನ್ನು ಮೀರಿ ದಲಿತ ಸಮುದಾಯದ ಪ್ರತಿಭಾವಂತ ಪ್ರಾಧ್ಯಾಪಕರನ್ನು ಕಡೆಗಣಿಸಿ, ಹೊರಗಿನಿಂದ ಐವರು ಬಲಾಢ್ಯ ಜಾತಿಗಳಿಗೆ ಸೇರಿದ ಪ್ರಾಧ್ಯಾಪಕರನ್ನು ವರ್ಗಾವಣೆ ಮಾಡಿಕೊಳ್ಳಲಾಗಿದೆ ಎಂದು ದೂರಿದರು. ಬೆಂವಿವಿ ಸ್ಥಾಪನೆಯಾದಾಗಿನಿಂದಲೂ ಒಬ್ಬರೂ ದಲಿತರು ಕುಲಪತಿಯಾಗಿಲ್ಲ. “ಇದು ದಲಿತರ ಮೇಲಿನ ಅಸಹನೆಗೆ ಹಿಡಿದ ಕನ್ನಡಿ” ಎಂದು ಅವರು ಬೇಸರ ವ್ಯಕ್ತಪಡಿಸಿದರು.

ನಿಯಮಬಾಹಿರ ಕಾರ್ಯನಿರ್ವಹಣೆ ಮತ್ತು ದಲಿತ ವಿರೋಧಿ ಧೋರಣೆ:

ಕುಲಪತಿ ರಜೆಯಲ್ಲಿರುವಾಗ ಅವರ ಜವಾಬ್ದಾರಿಯನ್ನು ಹಿರಿಯ ಡೀನ್‌ಗೆ ವಹಿಸುವುದು ನಿಯಮ. ಆದರೆ, ಬೆಂವಿವಿಯಲ್ಲಿರುವ ಎಲ್ಲಾ ಹಿರಿಯ ಡೀನ್‌ಗಳು ದಲಿತ ಸಮುದಾಯಕ್ಕೆ ಸೇರಿರುವ ಕಾರಣಕ್ಕಾಗಿ ಅವರಿಗೆ ಉಸ್ತುವಾರಿ ನೀಡದೆ, ಕುಲಸಚಿವರಿಗೆ ನೀಡಲಾಗಿದೆ ಎಂದು ಚಂದ್ರು ಪೆರಿಯಾರ್ ಹೇಳಿದರು. “ಇದು ಕಾನೂನು ಬಾಹಿರವಷ್ಟೇ ಅಲ್ಲದೆ, ಕುಲಪತಿಗೆ ದಲಿತರ ಮೇಲಿರುವ ಅಸಹನೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಅಲ್ಲದೆ, ದಲಿತ ವಿತ್ತಾಧಿಕಾರಿಗಳ ಅಧಿಕಾರವನ್ನು ಕಟ್ಟಡ ನವೀಕರಣದ ನೆಪವೊಡ್ಡಿ ಸುಮಾರು ಒಂದು ವರ್ಷಗಳ ಕಾಲ ‘ಒಂದೇ ಸೂರಿನ ತತ್ವ’ದಡಿ ಕುಲಸಚಿವರಿಗೆ ವಹಿಸಲಾಗಿದೆ. ದಲಿತ ಅತಿಥಿ ಉಪನ್ಯಾಸಕರನ್ನು ವಿನಾ ಕಾರಣ ಕೆಲಸದಿಂದ ತೆಗೆದುಹಾಕಿ, ವರ್ಷಾನುಗಟ್ಟಲೆ ಸಂಬಳ ನೀಡದೆ ವಂಚಿಸಲಾಗಿದೆ. ಇದರಿಂದ ಕೆಲವರು ಜೀವನ ಭದ್ರತೆ ಇಲ್ಲದೆ ಮಾನಸಿಕವಾಗಿ ಕುಗ್ಗಿ ಆಸ್ಪತ್ರೆ ಸೇರಿದ್ದಾರೆ ಎಂದೂ ಚಂದ್ರು ಪೆರಿಯಾರ್ ಆರೋಪಿಸಿದರು. “ಇಷ್ಟೆಲ್ಲಾ ಆದಮೇಲೆ ಕುಲಪತಿಯವರಿಂದ ನ್ಯಾಯ ಸಿಗಲಿದೆ ಎಂದು ಕಾಯುವುದರಲ್ಲಿ ಅರ್ಥವಿಲ್ಲ. ಕುಲಪತಿಯವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಬೇಕು” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

“ಬೆಂವಿವಿ ಜಾತಿಯತೆ ಬಿತ್ತುವ ಸಂಸ್ಥೆಯಾಗಿದೆ”: ಶಿವಶಂಕರ್

ರಾಜ್ಯ ಸರ್ಕಾರಿ ಎಸ್‌ಸಿ-ಎಸ್‌ಟಿ ನೌಕರರ ಸಮಿತಿಯ ಅಧ್ಯಕ್ಷ ಶಿವಶಂಕರ್ ಮಾತನಾಡಿ, ಹಿಂದೆ ಎಚ್. ನರಸಿಂಹಯ್ಯ, ಜಿ.ಎಸ್. ಶಿವರುದ್ರಪ್ಪ, ಸಿದ್ದಲಿಂಗಯ್ಯ, ಬರಗೂರು ರಾಮಚಂದ್ರಪ್ಪ ಅವರಂತಹ ಮಹನೀಯರು ಕೆಲಸ ಮಾಡಿದ ಬೆಂವಿವಿಯಲ್ಲಿ ವೈಜ್ಞಾನಿಕತೆ, ವೈಚಾರಿಕತೆ, ಸಮಾಜಮುಖಿ ಚಿಂತನೆಗಳು ಬಿತ್ತರವಾಗುತ್ತಿದ್ದವು. ಆದರೆ ಈಗ ವಿಶ್ವವಿದ್ಯಾಲಯವು ಜಾತಿಯತೆ ಮತ್ತು ಕೋಮುವಾದವನ್ನು ಬಿತ್ತುವ ಸಂಸ್ಥೆಯಾಗಿ ಮಾರ್ಪಾಡಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

“67 ಪ್ರಾಧ್ಯಾಪಕರು ಜಾತಿ ತಾರತಮ್ಯ ನಡೆಯುತ್ತಿದೆ ಎಂದು ಸಹಿ ಮಾಡಿದರೂ, ಕುಲಪತಿ ಅಸಡ್ಡೆ ತೋರುತ್ತಿರುವುದು ದುರಂತ. ವಿಶ್ವವಿದ್ಯಾಲಯದ ಅವ್ಯವಸ್ಥೆ ಮತ್ತು ಜಾತಿ ತಾರತಮ್ಯದ ಕುರಿತು ತಕ್ಷಣ ತನಿಖೆ ನಡೆಸಬೇಕು” ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ನಟ ಚೇತನ್ ಅಹಿಂಸಾ, ದಲಿತ ಹಕ್ಕುಗಳ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜಣ್ಣ ಮತ್ತು ಜ್ಞಾನೇಶ್ವರ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ದೇವನಹಳ್ಳಿ ಹೋರಾಟ: “ನಾನು ದಲಿತರ ಹುಡುಗ, ನನ್ನ  ನಾಯಕತ್ವವನ್ನು ಎಲ್ಲ ಸಮುದಾಯಗಳೂ ಒಪ್ಪಿಕೊಂಡವು” – ಕಾರಳ್ಳಿ ಶ್ರೀನಿವಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...