Homeಮುಖಪುಟಗ್ಯಾರಂಟಿಗೆ ಬಳಸಿರುವ ದಲಿತರ ಹಣ ಕೂಡಲೇ ಹಿಂದಿರುಗಿಸಬೇಕೆಂದು ದಸಂಸ ಒಕ್ಕೂಟ ಆಗ್ರಹ

ಗ್ಯಾರಂಟಿಗೆ ಬಳಸಿರುವ ದಲಿತರ ಹಣ ಕೂಡಲೇ ಹಿಂದಿರುಗಿಸಬೇಕೆಂದು ದಸಂಸ ಒಕ್ಕೂಟ ಆಗ್ರಹ

- Advertisement -
- Advertisement -

ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳಿಗೆ ಬಳಸಿರುವ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಕೂಡಲೇ ದಲಿತರ ಅಭಿವೃದ್ಧಿಗೆ ಹಿಂದಿರುಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟವು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ದಸಂಸ ಒಕ್ಕೂಟ, “ಗ್ಯಾರಂಟಿಗೆ ಬಳಸಿರುವ ಹಣ ಹಿಂತಿರುಗಿಸುವ ಜತೆಗೆ,ಕಾಯ್ದೆಯ ‘7ಡಿ’ ಸೆಕ್ಷನ್‌ ರದ್ದುಪಡಿಸಿದಂತೆ ‘7ಸಿ’ಯನ್ನೂ ರದ್ದುಪಡಿಸಬೇಕು” ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದೆ.

“ಸಂವಿಧಾನ ವಿಧಿ 46ರ ಆಶಯವನ್ನು ಪಾಲಿಸಬೇಕು” ಎಂದು ಒತ್ತಾಯಿಸಿರುವ ಒಕ್ಕೂಟ, “ಅಂಬೇಡ್ಕರ್‌ ಅಭಿವೃದ್ಧಿ ನಿಗಮದಲ್ಲಿ ಬಾಕಿ ಉಳಿದಿರುವ 5 ಲಕ್ಷ ಅರ್ಜಿಗಳನ್ನು ಸೂಕ್ತ ನೆರವು ನೀಡಿ, ಕೂಡಲೇ ಇತ್ಯರ್ಥಗೊಳಿಸಬೇಕು” ಎಂದು ಒತ್ತಾಯಿಸಿದೆ.

“2013 ರಲ್ಲಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವೇ ಜಾರಿಗೆ ತಂದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಕಾಯ್ದೆಯು ತನ್ನ ಪರಿಭಾಷೆಯಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಎಂಬುದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯಲ್ಲಿನ ಅಂತರವನ್ನು ತುಂಬಲು ಅನುಮೋದಿಸಿರುವ ಯೋಜನೆ ಎನ್ನುತ್ತದೆ. ಅದರಲ್ಲಿಯೇ ‘ಅಭಿವೃದ್ಧಿಯ ಅ೦ತರ’ ಎಂದರೆ, ಮಾನವ ಮತ್ತು ಆರ್ಥಿಕ ಅಭಿವೃದ್ಧಿಗೆ ಸಂಬಂಧಪಟ್ಟಂತೆ. ನಿರ್ದಿಷ್ಟವಾಗಿ ಗೊತ್ತುಪಡಿಸಬಹುದಾದಂತೆ ರಾಜ್ಯ ಸರಾಸರಿಗೆ ಹೋಲಿಸಿದಾಗ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಸೂಚಕಗಳಲ್ಲಿರುವ ವ್ಯತ್ಯಾಸಗಳು ಎ೦ದು ವ್ಯಾಖ್ಯಾನಿಸುತ್ತದೆ” ಎಂದು ಒಕ್ಕೂಟ ವಿವರಿಸಿದೆ.

“ಸಾರಾಂಶದಲ್ಲಿ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರು (ದಲಿತರು) ಮತ್ತು ಇತರ ಸಮುದಾಯಗಳ ನಡುವಿನ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಯ ಅಂತರವನ್ನು ಕಡಿಮೆ ಮಾಡುವುದೇ ಈ ಯೋಜನೆಯ ಮೂಲ ಉದ್ದೇಶ. 2023-24ನೇ ಸಾಲಿನಿಂದಲೂ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದಲ್ಲಿ ಸುಮಾರು ₹25000 ಕೋಟಿಯನ್ನು ಗ್ಯಾರ೦ಟಿಗಳಿಗೂ, ₹15000 ಕೋಟಿಯನ್ನು ಅನ್ಯ ಉದ್ದೇಶಕ್ಕೂ ಬಳಸಿರುವುದು ಕಾಯ್ದೆಯನ್ನು ಉಲ್ಲಂಘಫಿಸಿದಂತೆ ಆಗುತ್ತದೆ” ಎಂದು ಆರೋಪಿಸಿದೆ.

“ಅಷ್ಟೇ ಅಲ್ಲ, ಕಳೆದ ಬಿಜೆಪಿ ಸರ್ಕಾರ ಮಾಡಿದ ಕೆಲಸವನ್ನೇ ಕಾಂಗ್ರೆಸ್‌ ಮಾಡಿದಂತಾಗಿದೆ. ಅದಷ್ಟೇ ಅಲ್ಲದೆ ಸರ್ಕಾರದ ಸಮಾಜ ಕಲ್ಮಾಣ ಸಚಿವರೂ ಸೇರಿದಂತೆ ಈ ಕ್ರಮವನ್ನು ಸಮರ್ಥಿಸಿಕೊಳ್ಳುತ್ತಿರುವುದು ಶೋಚನೀಯ. ದಲಿತರ ಒಗ್ಗಟ್ಟಿನ ಓಟುಗಳಿ೦ದ ಸರ್ಕಾರ ರಚಿಸಿದ ಕಾಂಗ್ರೆಸ್, ಈಗ ದಲಿತರ ಅಭಿವೃದ್ಧಿಗೆ ಮೀಸಲಿರಿಸಿದ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸುತ್ತಿರುವುದು ಸಮುದಾಯದಲ್ಲಿ ಅಸಮಾಧಾನವನ್ನು ಉಂಟು ಮಾಡಿದೆ” ಎಂದು ಒಕ್ಕೂಟದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗ್ಯಾರಂಟಿ ಯೋಜನೆಗಳು ಉತ್ತಮ ಯೋಜನೆಗಳೇ; ಆದರೆ ಅವುಗಳ ಉದ್ದೇಶವೇ ಬೇರೆ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯ ಉದ್ದೇಶವೇ ಬೇರೆ. ಕರ್ನಾಟಕ ಮಾನವ ಅಭಿವೃದ್ಧಿ ವರದಿ- 2015ರ ಪ್ರಕಾರ, ಇತರೆ ಸಮುದಾಯಗಳಿಗೆ ಹೋಲಿಸಿಕೊ೦ಡರೆ ದಲಿತರು ಅತ್ಯಂತ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಹೀಗಿರುವಾಗ ಸಚಿವರು ಮತ್ತು ಮುಖ್ಯಮಂತ್ರಿಗಳು ಹೇಳುತ್ತಿರವಂತೆ, ದಲಿತರಿಗೆ ಮೀಸಲಿಟ್ಟ ಹಣವನ್ನು ಎಸ್‌ಸಿಪಿ-ಟಿಎಸ್‌ಪಿಯ ಹೊರತಾದ ಅಭಿವೃದ್ಧಿ ಯೋಜನೆಗಳಿಗೆ ಬಳಸುವುದೂ ಬಡತನ ನಿರ್ಮೂಲನೆಯ ಉದ್ದೇಶವನ್ನೇ ಹೊಂದಿದೆ ಎಂಬ ಸಮರ್ಥನೆ ಒಪ್ಪತಕ್ಕುದಲ್ಲ; ಹಾಗೇನಾದರೂ ಅವರ ಮಾತು ನಿಜವಾಗಿದ್ದರೆ ಕಳೆದ 2014ರಿ೦ದ ಇದೇ ದಲಿತರಿಗಾಗಿ ಮೀಸಲಿಟ್ಟ ₹29,5687 ಕೋಟಿ ಹಣವನ್ನು ಯಾವುದಕ್ಕೆಲ್ಲಾ ಖರ್ಚು ಮಾಡಲಾಗಿದೆ; ಎಷ್ಟು ಕುಟುಂಬಗಳು ಬಡತನ ರೇಖೆಗಿ೦ತ ಮೇಲೆ ಬಂದಿವೆ ಎ೦ಬ ಅಂಕಿ ಅಂಶಗಳನ್ನು ಸರ್ಕಾರ ಬಿಡಗಡೆ ಮಾಡಬೇಕಿದೆ” ಎಂದು ದಸಂಸ ಒಕ್ಕೂಟ ಆಗ್ರಹಿಸಿದೆ.

“ಉನ್ನತ ಮಟ್ಟದ ಸಮಿತಿಯೊಂದನ್ನು ನೇಮಿಸಿ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣ ಎಲ್ಲಿಗೆ ಹೋಗುತ್ತಿದೆ; ಎಷ್ಟು ಅಭಿವೃದ್ಧಿ ಆಗಿದೆ ಎಂಬುದನ್ನು ಅಧ್ಯಯನ ಮಾಡಿ ವರದಿ ಬಿಡುಗಡೆ ಮಾಡಬೇಕಿದೆ” ಎಂದು ಒತ್ತಾಯಿಸಿಸಲಾಗಿದೆ.

ಒಕ್ಕೂಟದ ಪರವಾಗಿ ಎನ್.ವೆಂಕಟೇಶ್, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ವಿ ನಾಗರಾಜ, ಇಂದೂಧರ ಹೊನ್ನಾಪುರ, ಎನ್‌.ಮುನಿಸ್ವಾಮಿ ಹಾಗೂ ಜೀವನಹಳ್ಳಿ ವೆಂಕಟೇಶ್‌ ಸಹಿ ಮಾಡಿದ್ದಾರೆ.

ಶೇ.90ರಷ್ಟು ಒಂದೇ ಜಾತಿಯವರು ಮಲ ಬಾಚುತ್ತಿರುವುದು ಏಕೆ: ನ್ಯಾ.ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...